ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಕೆಎಸ್ಸಿಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು, ಡಿಸೆಂಬರ್ 19: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಗುರುವಾರ ಬೆಳಗ್ಗೆ ಬೆಂಗಳೂರು ಕೇಂದ್ರ ವಿಭಾಗ(ಸಿಸಿಬಿ) ದ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಸಂತೋಷ್ ಮೆನನ್ ಅವರ ಪಾತ್ರವೇನು ಎಂಬುದರ ಬಗ್ಗೆ ಪೊಲೀಸರು ಇನ್ನೂ ತಿಳಿಸಿಲ್ಲ. ಆದರೆ, ದಾಳಿ ನಡೆಸುವ ಮುನ್ನ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆಯಲಾಗಿತ್ತು ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ ಪಾಟೀಲ ಹೇಳಿದರು.
ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ್ ರೆಡ್ಡಿ ಅವರನ್ನು ಬುಧವಾರದಂದು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಇದಾದ ಬಳಿಕ ಇಂದು ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಈ ಹಗರಣದಲ್ಲಿ ಸಿನಿಮಾ ನಟಿಯರೂ ಸೇರಿದಂತೆ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದೆ. ಎಲ್ಲರನ್ನು ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗುವುದು ಎಂದು ಸಿಸಿಬಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications