Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ನಮ್ಮ ಶಿವಮೊಗ್ಗ ತಂಡದ ನಿಶಾಂತ್ ಸಿಂಗ್ ಬಂಧನ

KPL Match Fixing Case: Cricketer Nishanth Singh Shekawat arrested

ಬೆಂಗಳೂರು, ನವೆಂಬರ್ 06: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಮ್ಮ ಶಿವಮೊಗ್ಗ ತಂಡದ ಆಟಗಾರ ನಿಶಾಂತ್ ಸಿಂಗ್ ಶೇಖಾವತ್(29) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಂದೀಗಢ ಮೂಲದ ಬುಕ್ಕಿ ಮನೋಜ್ ಕುಮಾರ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ನಿಶಾಂತ್, 2018ರ ಕೆಪಿಎಲ್ ಏಳನೇ ಆವೃತ್ತಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಬೌಲಿಂಗ್ ಕೋಚ್ ವಿನುಪ್ರಸಾದ್​ ನನ್ನು ಕೂಡಾ ಈ ಜಾಲದಲ್ಲಿ ಸಿಲುಕಿಸಿದ್ದ ಎಂದು ಸಿಸಿಬಿ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು.

2015ರಿಂದ ಕೆಪಿಎಲ್​ನಲ್ಲಿ ಆಡುತ್ತಿರುವ ನಿಶಾಂತ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ಹಾಗೂ ಶಿವಮೊಗ್ಗ ತಂಡದಲ್ಲಿ ಆಡಿದ್ದಾರೆ. 2018ರ ಕೆಪಿಎಲ್ ನಲ್ಲಿ ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆದ ಹುಬ್ಬಳ್ಳಿ ಟೈಗರ್ಸ್- ಬೆಂಗಳೂರು ಬ್ಲಾಸ್ಟರ್ಸ್ ನಡುವಿನ ಪಂದ್ಯ ಫಿಕ್ಸ್ ಮಾಡಿದ ಆರೋಪವಿದೆ.

ಶಿವಮೊಗ್ಗ, ಬೆಳಗಾವಿ, ಬೆಂಗಳೂರು ಸೇರಿದಂತೆ ವಿವಿಧ ತಂಡಗಳ 34 ಕ್ರಿಕೆಟರ್ಸ್ ಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕೆಪಿಎಲ್ ಜಾರಿಯಲ್ಲಿರುವಾಗಲೇ ಬೆಳಗಾವಿ ತಂಡದ ಮಾಲೀಕ ಅಲಿ ಅವರು ನಿಯಮ ಮೀರಿ ಬುಕ್ಕಿಗಳ ಜೊತೆ ಸಂಪರ್ಕ ಸಾಧಿಸಿದ್ದರು ಎಂಬ ಆರೋಪವಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದರು.

ಈ ಪಂದ್ಯ ನಡೆಯುವ ವಾರಕ್ಕೂ ಮುಂಚೆ ಮೈಸೂರಿನ ಹೋಟೆಲ್​ವೊಂದರಲ್ಲಿ ಬುಕ್ಕಿ ಮನೋಜ್​ನನ್ನು ಸಂರ್ಪಸಿದ್ದ ನಿಧಾನಗತಿಯಲ್ಲಿ ಆಡುವುದಕ್ಕಾಗಿ 5 ಲಕ್ಷ ರು ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಇದಕ್ಕೂ ಮುನ್ನ ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಲಿ, ಬೆಂಗಳೂರು ಬ್ಲಾಸ್ಟರ್ ಕೋಚ್ ವಿನು ಪ್ರಸಾದ್, ಬ್ಯಾಟ್ಸ್ ಮನ್ ವಿಶ್ವನಾಥ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ದುಬೈ ಮೂಲದ ಬುಕ್ಕಿಯನ್ನು ಸಂಪರ್ಕಿಸಿದ್ದ ಅಲಿ, ಕೆಪಿಎಲ್ ನಲ್ಲಿ ವ್ಯವಸ್ಥಿತವಾಗಿ ಮ್ಯಾಚ್ ಫಿಕ್ಸಿಂಗ್ ದಂಧೆ ನಡೆಸುತ್ತಿದ್ದ ಎಂಬ ಆರೋಪವಿದೆ.

Story first published: Wednesday, November 6, 2019, 17:47 [IST]
Other articles published on Nov 6, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+