500 ಸ್ಟ್ರೈಕ್‌ರೇಟ್‌ನಲ್ಲಿ ಕೃನಾಲ್ ಬ್ಯಾಟಿಂಗ್ ಅಬ್ಬರ: ಐಪಿಎಲ್ ಇತಿಹಾಸದಲ್ಲೇ ಮೊದಲು

ಭಾನುವಾರ, ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ. ಎದುರಿಸಿದ್ದು ನಾಲ್ಕೇ ಎಸೆತವಾದ್ರೂ ಕೃನಾಲ್ ಹೆಸರು ಐಪಿಎಲ್ ರೆಕಾರ್ಡ್ ಬುಕ್‌ಗೆ ಸೇರಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಕೊನೆಯ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಅಬ್ಬರಕ್ಕೆ ಐದು ವಿಕೆಟ್ ನಷ್ಟಕ್ಕೆ 208ರನ್ ದಾಖಲಿಸಿತು.
ಮುಂಬೈ ಪರ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕೃನಾಲ್ ಕೊನೆಯ ಓವರ್‌ನಲ್ಲಿ ನಾಲ್ಕು ಎಸೆತಗಳಿರುವಂತೆ ಕ್ರೀಸ್‌ಗೆ ಬಂದರು. ಸಿದ್ದಾರ್ಥ್ ಕೌಲ್ ಬೌಲಿಂಗ್‌ನ ಕೊನೆಯ ನಾಲ್ಕು ಎಸೆತಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು. ಕೊನೆಯ ನಾಲ್ಕು ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್ ಸಿಡಿಸಿ 20 ರನ್ ಕಲೆಹಾಕಿದರು.
ಕೃನಾಲ್‌ರ ಈ ಅಬ್ಬರದ ಬ್ಯಾಟಿಂಗ್ 500 ಸ್ಟ್ರೈಕ್‌ರೇಟ್‌ನಿಂದ ಕೂಡಿತ್ತು. ಈ ಮೂಲಕ ಐಪಿಎಲ್ ಇನ್ನಿಂಗ್‌ನಲ್ಲಿ ಕನಿಷ್ಠ 10 ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ 500 ಸ್ಟ್ರೈಕ್ ರೇಟ್ ಪಡೆದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಅಂತಿಮವಾಗಿ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 34 ರನ್‌ಗಳಿಂದ ಗೆಲುವು ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications