ಲೀಸೆಸ್ಟರ್‌ಶೈರ್ ಟೆಸ್ಟ್: ಕೈಹಿಡಿದ ಮಾಜಿ ಆರ್‌ಸಿಬಿ ಆಟಗಾರ; ಭಾರತದ ಪರ ಅರ್ಧಶತಕ ಬಾರಿಸಿದ್ದು ಈತನೊಬ್ವನೇ

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡಿ 2-2 ಅಂತರದಿಂದ ಸರಣಿಯಲ್ಲಿ ಸಮಬಲ ಸಾಧಿಸಿದ್ದ ಟೀಮ್ ಇಂಡಿಯಾ ತನ್ನ ಮುಂದಿನ ಅಂತರರಾಷ್ಟ್ರೀಯ ಸರಣಿಗಳಲ್ಲಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಯುವ ಆಟಗಾರರನ್ನೊಳಗೊಂಡ ಟೀಂ ಇಂಡಿಯಾ ಇದೇ ತಿಂಗಳ ಅಂತ್ಯದಲ್ಲಿ ಐರ್ಲೆಂಡ್ ವಿರುದ್ಧ 2 ಪಂದ್ಯಗಳ ಟ್ವೆಂಟಿ ಸರಣಿಯನ್ನು ಆಡುತ್ತಿದ್ದರೆ, ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಇತ್ತೀಚೆಗಷ್ಟೇ ತಮ್ಮ ದೇಶದ ತಂಡ ತ್ಯಜಿಸಿ ನ್ಯೂಜಿಲೆಂಡ್ ತಂಡ ಸೇರಿದ ಮೂವರು ಕ್ರಿಕೆಟಿಗರಿವರುಇತ್ತೀಚೆಗಷ್ಟೇ ತಮ್ಮ ದೇಶದ ತಂಡ ತ್ಯಜಿಸಿ ನ್ಯೂಜಿಲೆಂಡ್ ತಂಡ ಸೇರಿದ ಮೂವರು ಕ್ರಿಕೆಟಿಗರಿವರು

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೀಮಿತ ಓವರ್ ಸರಣಿಗಳಿಗೂ ಮುನ್ನ ಕಳೆದ ವರ್ಷದಿಂದ ಮುಂದೂಡಲ್ಪಟ್ಟಿರುವ ಇತ್ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯ ನಡೆಯಲಿದೆ. ಹೌದು, ಕಳೆದ ವರ್ಷ ಭಾರತ ಮತ್ತು ಇಂಗ್ಲೆಂಡ್ ನಡುವೆ ಆಯೋಜನೆಯಾಗಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಇದೇ ಜುಲೈ 1ರಿಂದ ಆರಂಭಗೊಳ್ಳುತ್ತಿದೆ. ಹೀಗಾಗಿ ಇದಕ್ಕೂ ಮುನ್ನ ಟೀಮ್ ಇಂಡಿಯಾ ಅಭ್ಯಾಸ ಟೆಸ್ಟ್ ಪಂದ್ಯವೊಂದರಲ್ಲಿ ತೊಡಗಿಕೊಂಡಿದೆ.

ಅತಿಹೆಚ್ಚು ಅಂತರರಾಷ್ಟ್ರೀಯ ರನ್ ಕಲೆಹಾಕಿರುವ ಸಕ್ರಿಯ ಆಟಗಾರರ ಪಟ್ಟಿ; ನಂಬರ್ 1 ಯಾರು?ಅತಿಹೆಚ್ಚು ಅಂತರರಾಷ್ಟ್ರೀಯ ರನ್ ಕಲೆಹಾಕಿರುವ ಸಕ್ರಿಯ ಆಟಗಾರರ ಪಟ್ಟಿ; ನಂಬರ್ 1 ಯಾರು?

ಲೀಸೆಸ್ಟರ್‌ಶೈರ್‌ನ ಗ್ರೇಸ್ ರೋಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಲೀಸೆಸ್ಟರ್‌ಶೈರ್ ತಂಡಗಳ ನಡುವೆ ಈ ಅಭ್ಯಾಸ ಪಂದ್ಯ ಏರ್ಪಟ್ಟಿದೆ. ಜೂನ್ 23ರಿಂದ ಈ ಪಂದ್ಯ ಆರಂಭವಾಗಿದ್ದು, ಟೀಮ್ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ ಸಂಕಷ್ಟದಲ್ಲಿದ್ದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕ್ರಿಕೆಟಿಗ ಕೆ ಎಸ್ ಭರತ್ ಅಜೇಯ 70 ರನ್ ಬಾರಿಸಿ ಆಪದ್ಭಾಂಧವರಾಗಿದ್ದಾರೆ.

ಕೈಕೊಟ್ಟ ಅಗ್ರ ಕ್ರಮಾಂಕದ ಆಟಗಾರರು, ಆಪತ್ಬಾಂಧವನಾದ ಭರತ್

ಕೈಕೊಟ್ಟ ಅಗ್ರ ಕ್ರಮಾಂಕದ ಆಟಗಾರರು, ಆಪತ್ಬಾಂಧವನಾದ ಭರತ್

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 25, ಶುಬ್ ಮನ್ ಗಿಲ್ 21, ಹನುಮ ವಿಹಾರಿ 2, ವಿರಾಟ್ ಕೊಹ್ಲಿ 33, ಶ್ರೇಯಸ್ ಅಯ್ಯರ್ ಡಕ್ ಔಟ್, ರವೀಂದ್ರ ಜಡೇಜಾ 13, ಶಾರ್ದೂಲ್ ಠಾಕೂರ್ 6, ಉಮೇಶ್ ಯಾದವ್ 23, ಮೊಹಮ್ಮದ್ ಶಮಿ ಅಜೇಯ 18 ಮತ್ತು ಕೆಎಸ್ ಭರತ್ ಅಜೇಯ 70 ರನ್ ಕಲೆ ಹಾಕಿದರು. ಹೀಗೆ ತಂಡದ ಮೇಲಿನ ಕ್ರಮಾಂಕದ ಆಟಗಾರರು ವಿಫಲರಾದಾಗ ಕೆ ಎಸ್ ಭರತ್ ತಂಡ ಡಿಕ್ಲೇರ್ ಘೋಷಿಸುವವರೆಗೂ ಅಜೇಯನಾಗಿ ಉಳಿದು ತಂಡ ಅಲ್ಪ ಮೊತ್ತಕ್ಕೆ ಆಲ್ ಔಟ್ ಆಗಿ ಹಿನ್ನಡೆ ಅನುಭವಿಸುವುದನ್ನು ತಪ್ಪಿಸಿದರು ಹಾಗೂ ಈ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ ಏಕೈಕ ಭಾರತೀಯ ಎನಿಸಿಕೊಂಡರು.

ಟೆಸ್ಟ್ ಪಂದ್ಯಕ್ಕೆ ಪ್ರಕಟಿಸಲಾಗಿರುವ ಭಾರತ ತಂಡ

ಟೆಸ್ಟ್ ಪಂದ್ಯಕ್ಕೆ ಪ್ರಕಟಿಸಲಾಗಿರುವ ಭಾರತ ತಂಡ

ಜುಲೈ 1ರಿಂದ ಶುರುವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಪ್ರಕಟವಾಗಿರುವ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್‌ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ

ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ

• ಐದನೇ ಟೆಸ್ಟ್ ಪಂದ್ಯ ( ಮುಂದೂಡಲ್ಪಟ್ಟ ) - ಜುಲೈ 1 - 5: ಬರ್ಮಿಂಗ್ ಹ್ಯಾಮ್

• ಪ್ರಥಮ ಟಿ ಟ್ವೆಂಟಿ ಪಂದ್ಯ - ಜುಲೈ 7 - ಸೌತಾಂಪ್ಟನ್

• ದ್ವಿತೀಯ ಟಿ ಟ್ವೆಂಟಿ ಪಂದ್ಯ - ಜುಲೈ 9 - ಬರ್ಮಿಂಗ್ ಹ್ಯಾಮ್

• ತೃತೀಯ ಟಿ ಟ್ವೆಂಟಿ ಪಂದ್ಯ - ಜುಲೈ 10 - ನಾಟಿಂಗ್ ಹ್ಯಾಮ್

• ಪ್ರಥಮ ಏಕದಿನ ಪಂದ್ಯ - ಜುಲೈ 12 - ಓವಲ್

• ದ್ವಿತೀಯ ಏಕದಿನ ಪಂದ್ಯ - ಜುಲೈ 14 - ಲಾರ್ಡ್ಸ್

• ತೃತೀಯ ಏಕದಿನ ಪಂದ್ಯ - ಜುಲೈ 17 - ಮ್ಯಾಂಚೆಸ್ಟರ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, June 24, 2022, 19:19 [IST]
Other articles published on Jun 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X