Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮುಂದುವರಿದ ಕುಲ್‌ದೀಪ್ ಅಬ್ಬರ: ಚಾಹಲ್ ದಾಖಲೆ ಧ್ವಂಸ

ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್‌ದೀಪ್ ಯಾದವ್ ವೆಸ್ಟ್ ಇಂಡಿಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ದಾಳಿ ನಡೆಸಿದ್ದು ಮೂರು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕುಲ್‌ದೀಪ್ ಯಾದವ್ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ದಾಟಿದ್ದಾರೆ.

ಇನ್ನು ಕುಲ್‌ದೀಪ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ದಾಟಿದ್ದಲ್ಲದೆ ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. 30ನೇ ಟಿ20 ಪಂದ್ಯದಲ್ಲಿ ಈ ಸಾಧನೆ ಮಾಡುವ ಮೂಲಕ ಕುಲ್‌ದೀಪ್ ಯಾದವ್ ಭಾರತೀಯ ಬೌಲರ್‌ಗಳ ಪೈಕಿ ಹೊಸ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಯುಜುವೇಂದ್ರ ಚಾಹಲ್ ಹೆಸರಿನಲ್ಲಿ ಈ ದಾಖಲೆಯಿತ್ತು. ಚಾಹಲ್ 50 ವಿಕೆಟ್‌ಗಳ ಮೈಲಿಗಲ್ಲು ದಾಟಲು 34 ಪಂದ್ಯಗಳನ್ನು ಬಳಸಿಕೊಂಡಿದ್ದರು. ಈ ದಾಖಲೆಯೀಗ ಮುರಿದಿದೆ.

Kuldeep Yadav become fastest Indian bowler to take 50 T20I wickets; chahal record broken

ಭಾರತಕ್ಕೆ ನಿರ್ಣಾಯಕವಾಗಿದ್ದ ಮೂರನೇ ಪಂದ್ಯದಲ್ಲಿ ಭಾರತಕ್ಕೆ ಅಗತ್ಯ ಸಂದರ್ಭದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಂಡಕ್ಕೆ ನೆರವಾದರು ಕುಲ್‌ದೀಪ್ ಯಾದವ್. ಚಾರ್ಲ್ಸ್, ಬ್ರೆಂಡನ್ ಕಿಂಗ್ ಹಾಗೂ ನಿಕೋಲಸ್ ಪೂರನ್ ವಿಕೆಟ್ ಪಡೆಯುವ ಮೂಲಕ ಕುಲ್‌ದೀಪ್ ಯಾದವ್ ವಿಂಡೀಸ್ ದಾಂಡಿಗರು ಮತ್ತಷ್ಟು ಅಪಾಯುಕಾರಿಯಾಗುವುದನ್ನು ತಡೆದರು. ಆದರೆ ವಿಂಡೀಸ್ ನಾಯಕ ರೋವ್ಮನ್ ಪೋವೆಲ್ 19 ಎಸೆತಗಳಲ್ಲಿ 40 ರನ್ ಬಾರಿಸಿದ ಪರಿಣಾಮವಾಗಿ ಸವಾಲಿನ ಮೊತ್ತವನ್ನು ಪೇರಿಸುವಲ್ಲಿ ವೆಸ್ಟ್ ಇಂಡಿಸ್ ತಂಡ ಯಶಸ್ವಿಯಾಯಿತು.

ವೆಸ್ಟ್ ಇಂಡಿಸ್ ತಂಡ ಈ ಪಂದ್ಯದಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ನಾಲ್ಕು ಓವರ್‌ಗಳ ಬೌಲಿಂಗ್ ದಾಳಿಯಲ್ಲಿ ಕುಲ್‌ದೀಪ್ ಯಾದವ್ ಕೇವಲ 28 ರನ್‌ಗಳನ್ನು ನೀಡಿ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಒಂದು ವಿಕೆಟ್ ಅಕ್ಷರ್ ಪಟೇಲ್ ಹಾಗೂ ಮತ್ತೊಂದು ವಿಕೆಟ್ ಮುಕೇಶ್ ಕುಮಾರ್ ಪಾಲಾಗಿದೆ.

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ಒಶಾನೆ ಥಾಮಸ್,ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್

Story first published: Tuesday, August 8, 2023, 23:11 [IST]
Other articles published on Aug 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+