Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Team India: ಚಾಂಪಿಯನ್ಸ್‌ ಟ್ರೋಫಿ: ಎದುರಾಳಿಗಳಿಗೆ ಭಯ ಹುಟ್ಟಿಸುವ ಬೌಲರ್‌ ಟೀಮ್ ಇಂಡಿಯಾಕ್ಕೆ ಎಂಟ್ರಿ

ಜನವರಿಯಲ್ಲಿ ಕೊನೆಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗಳನ್ನು ಆಡಲಿದೆ. ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಇನ್ನು ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿಲ್ಲ. ಈ ವೇಳೆ ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಾಗಿದೆ. ಇವರ ಸ್ಥಾನವನ್ನು ತುಂಬಲು ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ರೆಡಿ ಆಗಿದ್ದಾರೆ.

ಇಂಗ್ಲೆಂಡ್ ಹಾಗೂ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಲು ಶಮಿ ಜೊತೆಗೆ ಮತ್ತೊಬ್ಬ ಸ್ಪಿನ್ನ ಬೌಲರ್‌ ಸಹ ತಂಡಕ್ಕೆ ಎಂಟ್ರಿ ನೀಡಲಿದ್ದಾರೆ. ಇವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು, ಬ್ಲ್ಯೂ ಜೆರ್ಸಿ ತೊಡಲು ಸಜ್ಜಾಗಿದ್ದಾರೆ. ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಗಾಯದಿಂದ ಚೇತರಿಸಿಕೊಂಡಿದ್ದಾರೆ ಎಂಬ ಸುದ್ದಿ ಬಂದಿದ್ದು, ಅಭಿಮಾನಿಗಳಲ್ಲಿ ಖುಷಿ ಮನೆ ಮಾಡಿದೆ.

Kuldeep Yadav Eyes ODI Comeback for Champions Trophy After Injury Recovery

ವಿಡಿಯೋ ಹಂಚಿಕೊಂಡ ಬೌಲರ್‌

ಟೀಮ್ ಇಂಡಿಯಾದ ರಿಸ್ಟ್‌ ಸ್ಪಿನ್ ಬೌಲರ್‌ ಕುಲ್‌ದೀಪ್ ಯಾದವ್ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅಲ್ಲದೆ ಇವರು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವ ಆಸೆಗೆ ಬಲ ಬಂದಿದೆ. ಇವರು ಏಕದಿನ ಪಂದ್ಯಗಳಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಬಲ್ಲ ಕ್ಷಮತೆಯನ್ನು ಹೊಂದಿದ್ದಾರೆ. ಇವರು ಗಾಯದಿಂದ ಚೇತರಿಸಿಕೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನವೇ ಅಭ್ಯಾಸ ಆರಂಭಿಸಲಿದ್ದಾರೆ.

ಕುಲ್ದೀಪ್‌ ಭಾರತದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಭಾರತ ತಂಡದಿಂದ ದೂರ ಉಳಿಯ ಬೇಕಾಗಿತ್ತು. ಈಗ ತಾವು ಫಿಟ್ ಆಗಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 45 ಸೆಕೆಂಡ್‌ಗಳದ್ದಾಗಿದ್ದು, ಇದರಲ್ಲಿ ಕುಲ್‌ದೀಪ್‌ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವುದನ್ನು ನೋಡಬಹುದಾಗಿದೆ. ಈ ದೃಶ್ಯವನ್ನು ನೋಡಿದ ಅಭಿಮಾನಿಗಳು ಇವರು ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸೇರಿಸಿಕೊಳ್ಳಬೇಕು ಎಂದು ತಿಳಿಸುತ್ತಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ

ಟೀಮ್ ಇಂಡಿಯಾದ ಚೈನಾ ಮೆನ್ ಬೌಲರ್ ಕುಲ್‌ದೀಪ್ ಯಾದವ್ ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ದಾಖಲೆಯನ್ನು ಹೊಂದಿದ್ದಾರೆ. ಇವರು ಏಕದಿನ ಕ್ರಿಕೆಟ್‌ನಲ್ಲಿ 106 ಪಂದ್ಯಗಳನ್ನು ಆಡಿದ್ದು 172 ವಿಕೆಟ್‌ ಕಬಳಿಸಿದ್ದಾರೆ. ಈ ವೇಳೆ ಇವರ ಎಕನಾಮಿ 4.99 ಆಗಿದೆ. ಈ ಬಾರಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಮಾದರಿಯಲ್ಲಿ ನಡೆಯುತ್ತಿದ್ದು ಈ ವೇಳೆ ಇವರು ಪರಿಣಾಮಕಾರಿ ಪ್ರದರ್ಶನ ನೀಡಬಹುದು. ಈಗಾಗಲೇ ಪ್ರಕಟಿಸಲಾಗಿರುವ ಟಿ20 ತಂಡದಲ್ಲಿ ಕುಲ್‌ದೀಪ್ ಯಾದವ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಈಗ ಅವರು ಏಕದಿನ ತಂಡವನ್ನು ಸೇರುವ ಕನಸು ಕಾಣುತ್ತಿದ್ದಾರೆ.

Kuldeep Yadav Eyes ODI Comeback for Champions Trophy After Injury Recovery

ಚಾಂಪಿಯನ್ಸ್‌ ಟ್ರೋಫಿಗೆ ಇದೇ ಶನಿವಾರ ಅಥವಾ ಭಾನುವಾರ ತಂಡವನ್ನು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಈ ವೇಳೆಗೆ ಟೀಮ್ ಇಂಡಿಯಾದ ವೇಗಿ ಜಸ್ಪ್ರಿತ್ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಯಾವುದೇ ಅಪ್‌ಡೇಟ್ ಇಲ್ಲ. ಟೂರ್ನಿಯಲ್ಲಿ ಯಾವೆಲ್ಲಾ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Story first published: Thursday, January 16, 2025, 17:55 [IST]
Other articles published on Jan 16, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+