Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB: ಆರ್‌ಸಿಬಿ ಅಭಿಮಾನಿಗಳನ್ನು ಗೇಲಿ ಮಾಡಿದ ಕುಲದೀಪ್ ಯಾದವ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಒಮ್ಮೆಯೂ ಪ್ರಶಸ್ತಿ ಗೆಲ್ಲದ ತಂಡಗಳಲ್ಲಿ ಒಂದಾಗಿದೆ. ಆರ್‌ಸಿಬಿ ಮೂರು ಬಾರಿ ಫೈನಲ್‌ಗಳನ್ನು ಆಡಿದೆ. ಆದರೆ ಮೂರೂ ಬಾರಿ ಸೋಲು ಕಂಡಿದೆ. ಆರ್‌ಸಿಬಿ ಅಭಿಮಾನಿಗಳು ಪ್ರತಿ ಆವೃತ್ತಿಯಲ್ಲೂ ತಮ್ಮ ತಂಡವನ್ನು ಉತ್ಸಾಹದಿಂದ ಬೆಂಬಲಿಸುತ್ತಾರೆ. ಆದರೆ ಟೀಮ್ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಆರ್‌ಸಿಬಿ ಮತ್ತು ಅಭಿಮಾನಿಗಳನ್ನು ಗೇಲಿ ಮಾಡಿದ್ದಾರೆ.

ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಿದ್ದ ಕುಲದೀಪ್‌ ಯಾದವ್‌ಗೆ ಆರ್‌ಸಿಬಿ ಅಭಿಮಾನಿಯೊಬ್ಬರು ಏನನ್ನೋ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕುಲದೀಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಗೇಲಿ ಮಾಡಿದ್ದಾರೆ. ಇದಾದ ಬಳಿಕ ಕುಲದೀಪ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗಿದ್ದಾರೆ.

Kuldeep Yadav mocks RCB fans

ಯೂಟ್ಯೂಬ್ ಲೈವ್ ವೇಳೆ ಆರ್‌ಸಿಬಿ ಅಭಿಮಾನಿಯೊಬ್ಬರು ಕುಲದೀಪ್ ಅವರನ್ನು ಆರ್‌ಸಿಬಿ ಫ್ರಾಂಚೈಸ್‌ಗೆ ಸೇರಬೇಕು ಮತ್ತು ಗೋಲ್‌ಕೀಪರ್ ಆಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕುಲದೀಪ್, ನಿಮಗೆ ಟ್ರೋಫಿ ಬೇಕು, ಗೋಲ್ ಕೀಪರ್ ಅಲ್ಲ, ಸಹೋದರ ಎಂದು ಪೋಸ್ಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ.

ಕುಲದೀಪ್ ಯಾದವ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕುಲದೀಪ್ ಕುಲದೀಪ್ ಅವರನ್ನು ಸುತ್ತುವರೆದಿರುವ ಆರ್‌ಸಿಬಿ ಅಭಿಮಾನಿಗಳು ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಸುಮ್ಮನಾಗದ ಕುಲದೀಪ್ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಬೆಂಕಿಗೆ ತುಪ್ಪ ಸುರಿದ್ದಾರೆ. ಈ ಪೋಸ್ಟ್ ಆರ್‌ಸಿಬಿ ಅಭಿಮಾನಿಗಳನ್ನು ಮತ್ತೆ ಸಿಡಿಯುವಂತೆ ಮಾಡಿದೆ. "ಚಿಲ್ ಮ್ಯಾನ್ ಆರ್‌ಸಿಬಿ ಅಭಿಮಾನಿಗಳೇ, ಟ್ರೋಫಿ ನಿಮ್ಮದಾಗಿದೆ. ಆದರೆ ನಾನು ಗೋಲ್ ಕೀಪರ್ ಅಲ್ಲ ಎಂದು ಬರೆಯುವ ಮೂಲಕ ಕುಲ್‌ದೀಪ್ ಪೋಸ್ಟ್ ಮಾಡಿದ್ದಾರೆ.

ಐಪಿಎಲ್‌ನಲ್ಲಿ ಕುಲದೀಪ್ ಒಮ್ಮೆ ಕಪ್ ಗೆದ್ದ ತಂಡದ ಭಾಗವಾಗಿದ್ದಾರೆ. 2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ಪ್ರಶಸ್ತಿ ಗೆದ್ದಾಗ ಕುಲದೀಪ್ ತಂಡದ ಭಾಗವಾಗಿದ್ದರು. ಆದರೆ, ಸದ್ಯ ಅವರಿರುವ ತಂಡ ಒಮ್ಮೆಯೂ ಐಪಿಎಲ್ ಗೆದ್ದಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ 2020 ರಲ್ಲಿ ಮೊದಲ ಬಾರಿಗೆ ಐಪಿಎಲ್ ಫೈನಲ್ ಆಡಿತು. ಆದರೆ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು.

Story first published: Saturday, January 25, 2025, 13:00 [IST]
Other articles published on Jan 25, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+