Kuldeep Yadav: ಮೊದಲ ಬಾರಿಗೆ ತವರು ನೆಲದಲ್ಲಿ ಟೆಸ್ಟ್ ಆಡಲು ಚೈನಾಮನ್ ಬೌಲರ್ ತಯಾರು
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಸೋಲಿಸಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವಿನ ನಂತರ ಇಡೀ ಭಾರತ ತಂಡದಲ್ಲಿ ಭಾರಿ ಉತ್ಸಾಹ, ಸಂಭ್ರಮ ಮನೆ ಮಾಡಿದೆ.
ಇದೀಗ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೆ ಸಿದ್ಧತ ಕಾರ್ಯಗಳು ಅಂತಿಮ ಹಂತದಲ್ಲಿವೆ. ಉಭಯ ತಂಡಗಳು ಎರಡನೇ ಟೆಸ್ಟ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಭಾರೀ ಕುತೂಹಲ ಮೂಡಿಸಿದೆ.

ಮೊದಲ ಟೆಸ್ಟ್ ಪಂದ್ಯದ ಐತಿಹಾಸಿಕ ಗೆಲುವಿನ ನಂತರ ಎರಡನೇ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಮಿಂಚಿದ ಕೆಲವು ಯುವ ಪ್ರತಿಭೆಗಳಿಗೆ ಎರಡನೇ ಟೆಸ್ಟ್‌ನಲ್ಲಿ ಆಡುವ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ ಕ್ರಿಕೆಟ್ ಅಭಿಮಾನಿಗಳ ಈ ನಿರೀಕ್ಷೆ ಹುಸಿಯಾಗಿದೆ.
ಅಖಾಡಕ್ಕೆ ಚೈನಾಮನ್ ಬೌಲರ್?
ಈಗಾಗಲೇ ಪ್ರಕಟಿಸಿರುವ ಟೀಮ್ ಇಂಡಿಯಾದಲ್ಲಿ ಚೈನಾಮನ್ ಬೌಲರ್ ಖ್ಯಾತಿಯ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಅವರು ಇದೇ ಮೊದಲ ಬಾರಿಗೆ ತವರು ನೆಲದಲ್ಲಿ ಟೆಸ್ಟ್ ಪಂದ್ಯ ಆಡುವ ನಿರೀಕ್ಷೆಯಿದ್ದು, ಇಡೀ ನಗರದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಕುಲದೀಪ್ ಯಾದವ್ ಮೂಲತಃ ಉತ್ತರ ಪ್ರದೇಶದ ಕಾನ್ಪುರದವರು. ಹೀಗಾಗಿ ಮೊದಲ ಬಾರಿಗೆ ಅವರು ಟೀಮ್ ಇಂಡಿಯಾ ಪರ ತವರಿನಲ್ಲಿ ಟೆಸ್ಟ್ ಕ್ರಿಕೆಟ್ ಆಡುವ ಸಾಧ್ಯತೆಯಿದೆ. ಈ ವಿಷಯ ತಿಳಿದ ತಕ್ಷಣ ಕುಲದೀಪ್ ಸ್ನೇಹಿತರು ಹಾಗು ಅವರ ಅಭಿಮಾನಿಗಳು ಈ ಪಂದ್ಯಕ್ಕಾಗಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಕುಲದೀಪ್ ಅವರನ್ನು ಪ್ಲೇಯಿಂಗ್-11 ರಲ್ಲಿ ಅವಕಾಶ ಪಡೆಯುವುದು ಬಹುತೇಕ ಪಕ್ಕ ಎನ್ನಲಾಗುತ್ತಿದೆ. ಒಂದು ವೇಳೆ ನಾಯಕ ರೋಹಿತ್ ಶರ್ಮಾ, ಕುಲ್‌ದೀಪ್ ಅವರಿಗೆ ಆಡುವ ಅವಕಾಶ ನೀಡಿದರೆ, ಕಾನ್ಪುರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರ ಸ್ನೇಹಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದುವರೆಗೆ ಟೀಮ್ ಇಂಡಿಯಾ ಪರ ಕುಲ್‌ದೀಪ್ 12 ಟೆಸ್ಟ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, 53 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಗ್ರೀನ್ ಪಾರ್ಕ್ ಸ್ಟೇಡಿಯಂ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಹೀಗಾಗಿ ಅಲ್ಲಿಯವರೆಯಾದ ಕುಲ್‌ದೀಪ್ ಅವರಿಗೆ ಪಿಚ್ ಪರಿಸ್ಥಿತಿಗಳ ಬಗ್ಗೆ ತಿಳಿದಿದ್ದು, ಟೀಮ್ ಇಂಡಿಯಾ ಪಂದ್ಯವನ್ನು ಗೆಲ್ಲಲು ಅವರು ತಮ್ಮ ಬೌಲಿಂಗ್ ಪ್ರದರ್ಶನದ ಮೂಲಕ ನೆರವಾಗಬಹುದು. ಆದ್ದರಿಂದ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಆಡುವ ಸಾಧ್ಯತೆ ಹೆಚ್ಚಿದೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ ವಿಕೆಟ್ ಕೀಪರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications