Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಂಡೀಸ್ ವಿರುದ್ಧದ 3ನೇ ಟಿ20 ಪಂದ್ಯಕ್ಕೆ ಸಿದ್ಧಾರ್ಥ್ ಕೌಲ್ ಆಯ್ಕೆ

Kuldeep Yadav, Umesh Yadav rested; Kaul back

ಚೆನ್ನೈ, ನವೆಂಬರ್ 09: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ(ನವೆಂಬರ್ 11)ದಂದು ನಡೆಯಲಿರುವ ಮೂರನೇ ಟಿ20ಐ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಮುಖ ವೇಗಿ ಜಸ್ ಪ್ರೀತ್ ಬೂಮ್ರಾ ಹಾಗೂ ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರ ಮುನ್ನಡೆಯಲ್ಲಿ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಮೂರನೇ ಪಂದ್ಯ ಔಪಚಾರಿಕವಾಗಿದ್ದು, ಹೀಗಾಗಿ ಪ್ರಮುಖ ಬೌಲರ್ ಗಳಿಗೆ ವಿಶ್ರಾಂತಿ ನೀಡಲಾಗಿದೆ. ತಂಡಕ್ಕೆ ವೇಗಿ ಸಿದ್ದಾರ್ಥ್ ಕೌಲ್ ರನ್ನು ಸೇರಿಸಿಕೊಳ್ಳಲಾಗಿದೆ.

3ನೇಟಿ20ಐ ಪಂದ್ಯಕ್ಕಾಗಿ ಭಾರತ ತಂಡ :
ರೋಹಿತ್ ಶರ್ಮ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಶಾಬಾಜ್ ನದೀಂ, ಸಿದ್ದಾರ್ಥ್ ಕೌಲ್.

ಪ್ರಮುಖ ವೇಗಿಗಳಿಗೆ ವಿಶ್ರಾಂತಿ ಅಗತ್ಯವಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಅವರು ಸಿಒಎ ಸಭೆಯಲ್ಲಿ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ವಿಶ್ವಕಪ್ 2019ಕ್ಕೆ ಸಮರ್ಥ ಆಟಗಾರರನ್ನು ಹೊಂದಲು ವೇಗಿಗಳಿಗೆ ವಿಶ್ರಾಂತಿ ಅಗತ್ಯವಿದೆ ಹೀಗಾಗಿ, ಐಪಿಎಲ್ ಆಡದಿದ್ದರೆ ಒಳ್ಳೆಯದು ಎಂದು ಸಲಹೆ ನೀಡಿದ್ದರು.

Story first published: Friday, November 9, 2018, 12:01 [IST]
Other articles published on Nov 9, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+