Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷನಾಗಲಿ ಎಂದ ಕುಮಾರ ಸಂಗಕ್ಕರ

Kumar Sangakkara Believes Ganguly Is A ‘Very Suitable Candidate’ For Icc President

ಶಶಾಂಕ್ ಮನೋಹರ್ ಐಸಿಸಿ ಮುಖ್ಯಸ್ಥನ ಹುದ್ದೆ ತೊರೆದಿದ್ದು ಈ ಸ್ಥಾನಕ್ಕೆ ಇನ್ನಷ್ಟೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ಹಾಲಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಹೆಸರನ್ನು ಅನೇಕರು ಸೂಚಿಸುತ್ತಿದ್ದು ಇದಕ್ಕೆ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ್ ಸಂಗಕ್ಕರ ಕೂಡ ಸೇರ್ಪಡೆಯಾಗಿದ್ದಾರೆ.

ಸೌರವ್ ಗಂಗೂಲಿ ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಹೊಂದಿದ್ದಾರೆ. ಹೀಗಾಗಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.

ಗಂಗೂಲಿ ಬಗ್ಗೆ ಮಾತನಾಡುತ್ತಾ ಕುಮಾರ್ ಸಂಗಕ್ಕರ ತಾನೂ ಕೂಡ ಗಂಗೂಲಿ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ. ಸೌರವ್ ವಿಶಾಲ ಮನೋಭಾವ ಪ್ರವೃತ್ತಿಯನ್ನು ಬಿಸಿಸಿಐ ಅಧ್ಯಕ್ಷರಾಗಿ ವ್ಯಕ್ತಪಡಿಸಿದ್ದು, ಐಸಿಸಿ ಮುಖ್ಯಸ್ಥನ ಹುದ್ದೆಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬಲ್ಲರು ಎಂದು ಸಂಗಕ್ಕರ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಸೌರವ್ ಗಂಗೂಲಿವರನ್ನು ನಾನು ಬಿಸಿಸಿಐ ಅದ್ಯಕ್ಷರಾಗುವ ಮುನ್ನವೇ ನೋಡಿದ್ದೆ. ಕ್ರಿಕೆಟ್ ಆಟಗಾರರ ಮಧ್ಯೆ ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯ ಗಂಗೂಲಿ ಅವರಲ್ಲಿದೆ. ಬಿಸಿಸಿಐ ಅಧ್ಯಕ್ಷರಾಗಿಯೂ ಇದನ್ನು ಅವರು ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಹುದ್ದೆಗೂ ಇಂತಾ ಗುಣ ಅಗತ್ಯವಿದೆ ಎಂದು ಸಂಗಕ್ಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ದೇಶಕ ಗ್ರೇಮ್ ಸ್ಮಿತ್ ಕೂಡಾ ಗಂಗೂಲಿಯನ್ನು ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸೂಕ್ತ ಎಂದಿದ್ದರು.ಈ ಕುರಿತಂತೆ ಇತ್ತೀಚಿಗೆ ಪ್ರತಿಕ್ರಿಯಿಸಿದ್ದ ಗಂಗೂಲಿ, ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸ್ಪರ್ಧಿಸಲು ಆತುರವಿಲ್ಲ ಎಂದಿದ್ದರು.

Story first published: Monday, July 27, 2020, 10:09 [IST]
Other articles published on Jul 27, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+