For Quick Alerts
ALLOW NOTIFICATIONS  
For Daily Alerts
 

Kusal Perera: ಕುಸಲ್ ಪೆರೆರಾ ಬ್ಯಾಟ್‌ನಿಂದ ಹೊಸ ವರ್ಷದ ಮೊದಲ ಶತಕ; 14 ವರ್ಷ ದಾಖಲೆ ಬ್ರೇಕ್

ಶ್ರೀಲಂಕಾ ತಂಡದ ಸ್ಪೋಟಕ ಬ್ಯಾಟರ್ ಕುಸಲ್ ಪೆರೆರಾ ಹೊಸ ವರ್ಷದಂದು ದಾಖಲೆ ಮಾಡಿದ್ದಾರೆ. ಕುಸಲ್ ಪರೆರಾ 2025ರ ವರ್ಷದ ಮೊದಲ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿದ್ದಾರೆ. ಗುರುವಾರ ನೆಲ್ಸನ್‌ನ ಸ್ಯಾಕ್ಸ್ಟನ್ ಓವಲ್ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಕುಸಲ್ ಪೆರೇರಾ 44 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಸಿದ್ದಾರೆ. ಕುಸಲ್ ಪೆರರಾ ತಮ್ಮ ಇನ್ನಿಂಗ್ಸ್‌ನಲ್ಲಿ ಕೇವಲ 46 ಎಸೆತಗಳಲ್ಲಿ 219.57 ಸ್ಟ್ರೈಕ್ ರೇಟ್‌ನಲ್ಲಿ 13 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ 101 ರನ್ ಬಾರಿಸಿದ್ದಾರೆ. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕುಸಾಲ್ ಪೆರೆರಾ ಅವರ ಮೊದಲ ಶತಕವಾಗಿದೆ.

ನ್ಯೂಜಿಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಕುಸಾಲ್ ಪೆರೆರಾ ಅವರು ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದಾರೆ. ಕುಸಾಲ್ ಪೆರೆರಾ ಅವರ ಈ ಇನ್ನಿಂಗ್ಸ್ ಆಧಾರದ ಮೇಲೆ ನ್ಯೂಜಿಲೆಂಡ್ ತಂಡವನ್ನು ಶ್ರೀಲಂಕಾ 7 ರನ್‌ಗಳಿಂದ ಸೋಲಿಸಿದೆ.

Kusal Perera scores first century with the bat on New Year s Day

ಕುಸಾಲ್ ಪೆರೆರಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಶ್ರೀಲಂಕಾದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಕುಸಾಲ್ ಪೆರೆರಾ ಅವರು ತಮ್ಮ ತಂಡದ ಮಾಜಿ ಬ್ಯಾಟರ್ ತಿಲಕರತ್ನೆ ದಿಲ್ಶಾನ್ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮರಿದಿದ್ದಾರೆ. ತಿಲಕರತ್ನೆ ದಿಲ್ಶಾನ್ 2011 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 55 ಎಸೆತಗಳಲ್ಲಿ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ್ದರು. ಇದು ಇಲ್ಲಿವರೆಗೆ ಶ್ರೀಲಂಕ ಪರ ಅತಿವೇಗದ ಶತಕವಾಗಿತ್ತು. ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 44 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಕುಸಾಲ್ ಪೆರೆರಾ ತಿಲಕರತ್ನೆ ದಿಲ್ಶಾನ್ ಅವರನ್ನು ಹಿಂದಿಕ್ಕಿದ್ದಾರೆ.

ಕುಸಲ್ ಪೆರೆರಾ ಶ್ರೀಲಂಕಾ ಪರ ಇದುವರೆಗೆ 77 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅವರು 28.16ರ ಸರಾಸರಿಯಲ್ಲಿ ಮತ್ತು 134.12 ಸ್ಟ್ರೈಕ್ ರೇಟ್‌ನಲ್ಲಿ 2056 ರನ್ ಗಳಿಸಿದ್ದಾರೆ. ಈ ಸಂದರ್ಭಗಳಲ್ಲಿ ಅವರು 1 ಶತಕ ಮತ್ತು 15 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಅವರ ಅತ್ಯುತ್ತಮ ಸ್ಕೋರ್ ಈಗ 101 ರನ್ ಆಗಿದೆ.

ನ್ಯೂಜಿಲೆಂಡ್ ಬಗ್ಗು ಬಡಿದ ಲಂಕಾ

ನೆಲ್ಸನ್‌ನ ಸ್ಯಾಕ್ಸ್ಟನ್ ಓವಲ್ ಮೈದಾನದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ 7 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಶ್ರೀಲಂಕಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 211 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಶ್ರೀಲಂಕಾ ಗೆದ್ದಿದ್ದರೂ, ನ್ಯೂಜಿಲೆಂಡ್ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.

Story first published: Thursday, January 2, 2025, 15:40 [IST]
Other articles published on Jan 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+