For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ ನೀಡಿದ ಮಾಜಿ ಕ್ರಿಕೆಟಿಗ ಆಡಂ ಗಿಲ್‌ಕ್ರಿಸ್ಟ್

Lack Of Attacking Mindset In Middle Overs Affecting Australia: Adam Gilchrist

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ತನ್ನ ಕಳಪೆ ಪ್ರದರ್ಶನವನ್ನು ಇಂಗ್ಲೆಂಡ್‌ನಲ್ಲೂ ಮುಂದಿವರಿಸಿದೆ. ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯಲ್ಲಿ ಒಂದು ಪಂದ್ಯವನ್ನು ಮಾತ್ರವೇ ಗೆಲ್ಲಲು ಸಾದ್ಯವಾಯಿತು. ಹೀಗಾಗಿ ಟಿ20 ಸರಣಿಯನ್ನು ಆಸ್ಟ್ರೇಲಿಯಾ ಇಂಗ್ಲೆಂಡ್‌ಗೆ ಬಿಟ್ಟುಕೊಟ್ಟಿದೆ. ಇದೀಗ ಏಕದಿನ ಸರಣಿಯಲ್ಲಿ ಅದೃಷ್ಠ ಪರೀಕ್ಷೆಗೆ ಇಳಿದಿದೆ.

ಟಿ20 ಸರಣಿ ಸೋಲಿನ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಆಟಗಾರ ಆಡಂ ಗಿಲ್‌ಕ್ರಿಸ್ಟ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಂದ್ಯದ ಮಧ್ಯ ಭಾಗದಲ್ಲಿ ಆಕ್ರಮಣಕಾರಿ ಆಟದ ಕೊರತೆಯಿಂದಾಗಿ ಆಸ್ಟ್ರೇಲಿಯಾ ತಂಡ ಎಡವುತ್ತಿದೆ. ಈ ಸಂದರ್ಭದಲ್ಲಿ ಆಕ್ರಮಣಕಾರಿ ಆಟ ಎದುರಾಳಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಇದನ್ನು ಆಸ್ಟ್ರೇಲಿಯಾ ತಂಡ ಕಂಡುಕೊಳ್ಳಬೇಕಿದೆ ಎಂದು ಗಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಆಸ್ಟ್ರೇಲಿಯಾ ತಂಡ ಮಂದಗಯಮ ಓವರ್‌ಗಳಲ್ಲಿ ಸಣ್ಣ ಮಟ್ಟಿನ ಹ್ಯಾಂಡ್ ಬ್ರೇಕ್ ಅಳವಡಿಸಿಕೊಂಡಂತೆ ಭಾಸವಾಗುತ್ತದೆ. ಆದರೆ ಅವರು ಈ ಸಂದರ್ಭದಲ್ಲಿ ಹೆಚ್ಚು ಆಕ್ರಮಣಕಾರಿಯಾಗಬೇಕು ಎಂದು ಗಿಲ್‌ಕ್ರಿಸ್ ಹೇಳಿಕೆಯನ್ನು ನೀಡಿದ್ದಾರೆ.

ಮಧ್ಯಮ ಓವರ್‌ಗಳಲ್ಲಿ ಅದರಲ್ಲೂ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ಆಸ್ಟ್ರೇಲಿಯಾ ಆಟಗಾರರು ಎಡವುತ್ತಿದ್ದಾರೆ. ರನ್‌ರೇಟ್ ವಿಚಾರದಲ್ಲಿ ಮಾತ್ರವೇ ಇದು ನಡೆಯುತ್ತಿಲ್ಲ. ಈ ಸಂದರ್ಭದಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳುವ ಪ್ರವೃತ್ತಿಯೂ ಇದೆ. ಮೊದಲ ಟಿ20 ಪಂದ್ಯದಲ್ಲೂ ಇದು ನಡೆದಿದೆ ಎಂದು ಗಿಲ್‌ಕ್ರಿಸ್ಟ್ ಹೇಳಿದ್ದಾರೆ.

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಗಿಲ್‌ಕ್ರಿಸ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟಿಂಗ್ ವಿಭಾಗ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ನೀರಸ ಪ್ರದರ್ಶನವನ್ನು ನೀಡುತ್ತಿದೆ.

Story first published: Saturday, September 12, 2020, 9:41 [IST]
Other articles published on Sep 12, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+