ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬೈಕ್ ಅಪಘಾತದಲ್ಲಿ ಗಾಯಗೊಂಡ ಆಸ್ಟ್ರೇಲಿಯಾದ ದಿಗ್ಗಜ ಸ್ಪಿನ್ನರ್ ಶೇನ್ ವಾರ್ನ್

Legendary Australian spinner Shane Warne injured in a motorcycle accident with his son Jackson

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರ ದಿಗ್ಗಜ ಸ್ಪಿನ್ನರ್ ಶೇನ್ ವಾರ್ನ್ ತಮ್ಮ ಮಗ ಜಾಕ್ಸನ್ ಜೊತೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು ಬೈಕ್ ಅಪಘಾತದ ಸಂದರ್ಭದಲ್ಲಿ ಕೆಳಕ್ಕೆ ಬಿದ್ದ ವಾರ್ನ್ ಸುಮಾರು 15 ಮೀಟರ್‌ನಷ್ಟು ದೂರಕ್ಕೆ ಬಿದ್ದಾರೆ ಎಂದು ವರದಿಯಾಗಿದೆ.

ಆದರೆ ಅದೃಷ್ಟವಶಾತ್ ಶೇನ್ ವಾರ್ನ್‌ಗೆ ಗಂಭೀರ ಗಾಯಗಳಿಂದ ಪಾರಾಗುದ್ದು ಸಣ್ಣಪುಟ್ಟ ಗಾಯಗಳು ಉಂಟಾಗಿದೆ. ಆದರೆ ಸೋಮವಾರ ಬೆಳಗ್ಗೆ ಎದ್ದಾಗ ಸಾಕಷ್ಟು ನೋವು ಕಾಣಿಸಿಕೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶೇನ್ ವಾರ್ನ್ ಸೋಮವಾರ ಮುಂಜಾನೆ ಆಸ್ಪತ್ರೆಗೆ ತೆರಳಿದ್ದಾರೆ. ಕಾಲು ಅಥವಾ ಹಿಂಬಾಗದಲ್ಲಿ ಮೂಳೆ ಮುರಿತವಾಗಿರಬಹುತಾ ಎಂಬ ಆತಂಕ ಶೇನ್ ವಾರ್ನ್‌ಗೆ ಇದೆ ಎನ್ನಲಾಗಿದೆ. ಈ ಬಗ್ಗೆ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ. ಇನ್ನು ಈ ಅಪಘಾತದ ಬಗ್ಗೆ ನ್ಯೂಸ್ ಕಾರ್ಪ್ ಜೊತೆಗೆ ಶೇನ್ ವಾರ್ನ್ ಮಾತನಾಡಿದ್ದು ತೀವ್ರ ನೋವಿನಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

5ನೇ ದಿನವೂ ವಿಕೆಟ್ ಕೀಪಿಂಗ್‌ಗೆ ಕಣಕ್ಕಿಳಿಯದ ವೃದ್ದಿಮಾನ್ ಸಾಹ: ಕೆ.ಎಸ್‌ ಭರತ್‌ ಕಣಕ್ಕೆ5ನೇ ದಿನವೂ ವಿಕೆಟ್ ಕೀಪಿಂಗ್‌ಗೆ ಕಣಕ್ಕಿಳಿಯದ ವೃದ್ದಿಮಾನ್ ಸಾಹ: ಕೆ.ಎಸ್‌ ಭರತ್‌ ಕಣಕ್ಕೆ

ಕ್ರಿಕೆಟ್ ಕಂಡ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ 708 ವಿಕೆಟ್‌ಗಳನ್ನು ಅವರು ಪಡೆದುಕೊಂಡಿದ್ದು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

52 ವರ್ಷದ ಶೇನ್ ವಾರ್ನ್ ಶೀಘ್ರದಲ್ಲಿಯೇ ಚೇತರಿಸಿಕೊಳ್ಳುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದು ಮುಂದಿನ ಆಶಸ್ ಸರಣಿಯಲ್ಲಿ ಕಾಮೆಂಟರಿ ಕರ್ತವ್ಯದಲ್ಲಿ ನಿರತವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 8ರಿಂದ ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಆಶಸ್ ಸರಣಿಯ ಮೊದಲ ಪಂದ್ಯ ನಡೆಯಲಿದ್ದು ಈ ಸಂದರ್ಭದಲ್ಲಿ ಶೇನ್ ವಾರ್ನ್ ಫಾಕ್ಸ್ ಕ್ರಿಕೆಟ್‌ ವಾಹಿನಿಯಲ್ಲಿ ವೀಕ್ಷಕವಿವರಸಣೆಕಾರರಾಗಿ ಜವಾಬ್ಧಾರಿ ನಿರ್ವಹಿಸಲಿದ್ದಾರೆ.

ಬಹುಕಾಲದ ಗೆಳತಿ ಜೊತೆಗೆ, ಟೀಂ ಇಂಡಿಯಾ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥಬಹುಕಾಲದ ಗೆಳತಿ ಜೊತೆಗೆ, ಟೀಂ ಇಂಡಿಯಾ ಬೌಲರ್ ಶಾರ್ದೂಲ್ ಠಾಕೂರ್ ನಿಶ್ಚಿತಾರ್ಥ

ಇನ್ನು ಈ ಬಾರಿಯ ಆಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ನೂತನ ನಾಯಕನನ್ನು ನೇಮಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ವಿವಾದದ ಕಾರಣದಿಂದಾಗಿ ಆಸ್ಟ್ರೇಲಿಯಾದ ನಾಯಕನಾಗಿದ್ದ ಟಿಮ್ ಪೈನ್ ನಾಯಕತ್ವದ ಹೊಣೆಯಿಂದ ಕೆಳಗಿಳಿದಿದ್ದಾರೆ. ಅದಾದ ನಂತರ ಪೈನ್ ಕೆಲ ಕಾಲ ಕ್ರಿಕೆಟ್‌ನಿಂದಲೂ ದೂರವುಳಿಯುವುದಾಗಿ ಘೋಷಿಸಿದ್ದಾರೆ, ಮಾನಸಿಕ ಆರೋಗ್ಯದ ಕಾರಣದಿಂದಾಗಿ ಈ ನಿರ್ಧಾರವನ್ನು ಟಿಮ್ ಪೈನ್ ತೆಗೆದುಕೊಂಡಿದ್ದಾರೆ.

RCBಗೆ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎನ್ನುವುದೇ ತಲೆನೋವು | Oneindia Kannada

Story first published: Monday, November 29, 2021, 16:58 [IST]
Other articles published on Nov 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X