ವಿರಾಟ್ ಕೊಹ್ಲಿ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿ ಉಳಿಯಲಿದ್ದಾರೆ: ಎಬಿ ಡಿವಿಲಿಯರ್ಸ್

ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಂಡು ಸಾಕಷ್ಟು ಚರ್ಚೆಯಲ್ಲಿದ್ದಾರೆ. ಈಗಾಗಲೇ ವಿಶ್ರಾಂತಿಯನ್ನು ಕೂಡ ಪಡೆದುಕೊಂಡಿರುವ ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲಿದ್ದಾರೆ. ಏಷ್ಯಾ ಕಪ್‌ನಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಬಗ್ಗೆ ದಿಗ್ಗಜ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಪ್ರತಿಕ್ರಿಯಿಸಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ನಡುವಿನ ಗೆಳೆತನದ ಬಗ್ಗೆ ಕ್ರಿಕೆಟ್ ಪ್ರೇಮಿಗಳಿಗೆ ಚೆನ್ನಾಗಿ ಗೊತ್ತಿದೆ. ಆರ್‌ಸಿಬಿ ತಂಡದಲ್ಲಿದ್ದಾಗ ಈ ಇಬ್ಬರು ಆಟಗಾರರ ಮಧ್ಯೆ ಅದ್ಭುತವಾದ ಬಾಂಧವ್ಯ ಬೆಳೆದಿದ್ದು ಇಬ್ಬರು ಕೂಡ ಆತ್ಮೀಯ ಗೆಳೆಯರಾಗಿದ್ದಾರೆ. ಮೈದಾನದಾಚೆಗೂ ಇವರಿಬ್ಬರ ಗೆಳೆತನ ಅತ್ಯುತ್ತಮವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಎನ್‌ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಮಾತನಾಡಿದ್ದಾರೆ.

ಕೊಹ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 2019ರಲ್ಲಿ ಶತಕ ಬಾರಿಸಿದ ನಳಿಕ ಮತ್ತೊಂದು ಶತಕ ಬಾರಿಸಲು ಅವರಿಂದ ಸಾಧ್ಯವಾಗಿಲ್ಲ. ಹಾಗಿದ್ದರೂ ವಿರಾಟ್ ಕೊಹ್ಲಿ ವಿಶ್ವಶ್ರೆಷ್ಠ ಕ್ರಿಕೆಟಿಗನಾಗಿಯೇ ವಿರಾಟ್ ಕೊಹ್ಲಿ ಉಳಿದುಕೊಳ್ಳಲಿದ್ದಾರೆ ಎಂದಿದ್ದಾರೆ ಎಬಿ ಡಿವಲಿಯರ್ಸ್. "ವಿಶ್ವ ಕ್ರಿಕೆಟ್‌ನ ಸರ್ವ ಶ್ರೇಷ್ಠ ಆಟಗಾರರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಫಾರ್ಮ್ ತಾತ್ಕಾಲಿಕವಾಗಿದ್ದು ಕ್ಲಾಸ್ ಶಾಶ್ವತ. ವಿರಾಟ್ ಕೊಹ್ಲಿ ವಿಶ್ವದರ್ಜೆಯ ಆಟಗಾರನಾಗಿ ಉಳಿಯಲಿದ್ದಾರೆ. ವಿರಾಟ್ ಮತ್ತು ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ನಾವಿಬ್ಬರು ಗೆಳೆಯರಾಗಿದ್ದೇವೆ. ಇಂಥಾ ಕೆಟ್ಟ ಸಂದರ್ಭದಲ್ಲಿ ಕಠಿಣ ಪರಿಶ್ರಮ ಪಡುವ ಅಗತ್ಯವಿದೆ ಎಂದು ಹೇಳುವ ಅವಶ್ಯಕತೆ ಅವರಿಗಿಲ್ಲ" ಎಂದಿದ್ದಾರೆ ಎಬಿ ಡಿವಿಲಿಯರ್ಸ್.

ಟಿ20 ಕ್ರಿಕೆಟ್‌ನ ಬೆಳವಣಿಗೆ ಬಗ್ಗೆ ಡಿವಿಲಿಯರ್ಸ್ ಮಾತು
ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಏಕದಿನ ಮಾದರಿಗೆ ನಿವೃತ್ತಿ ಘೋಷಣೆ ಮಾಡಿದ ಬಳಿಕ ಏಕದಿನ ಕ್ರಿಕೆಟ್‌ನ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು ಟಿ20 ಕ್ರಿಕೆಟ್ ಮತ್ತಷ್ಟು ಬೆಳವಣಿಗೆ ಸಾಧಿಸಲಿದೆ ಎಂದಿದ್ದಾರೆ. "ಟಿ20 ಕ್ರಿಕೆಟ್ ಮತ್ತಷ್ಟು ಬೆಳವಣಿಗೆ ಸಾಧಿಸಲಿದೆ. ಆದರೆ ಇತರ ಮಾದರಿಗಳು ಇದರ ಬೆಲೆ ತೆರುತ್ತದೆ." ಎಂದಿದ್ದಾರೆ ಎಬಿ ಡಿವಿಲಿಯರ್ಸ್.

ದಕ್ಷಿಣ ಆಪ್ರಿಕಾ ತಂಡಕ್ಕೆ ವಿಶ್ವಕಪ್ ಗೆಲ್ಲುವ ಸಾಮರ್ಥ್ಯವಿದೆ
ಇನ್ನು ಈ ಸಂದರ್ಭದಲ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಯಾವ ರೀತಿಯ ಪ್ರದರ್ಶನ ನೀಡಬಹುದು ಎಂಬ ಅಭಿಪ್ರಾಯವನ್ನು ಕುಡ ವ್ಯಕ್ತಪಡಿಸಿದರು. "ದಕ್ಷಿಣ ಆಪ್ರಿಕಾ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದ್ದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೂರ್ನಿ ಗೆಲ್ಲಲು ಉತ್ತಮ ಅವಕಾಶವಿದೆ. ಟಿ20 ಕ್ರಿಕೆಟ್‌ನಲ್ಲಿ ಗೆಲುವಿನ ಕ್ಷಣಗಳನ್ನು ಸೃಷ್ಟಿಸಿಕೊಳ್ಳುವುದು ದೊಡ್ಡ ಸವಾಲಾಗಿರುತ್ತದೆ" ಎಂದಿದ್ದಾರೆ ದಕ್ಷಿಣ ಆಪ್ರಿಕಾದ ಮಾಜಿ ದಿಗ್ಗಜ ಆಟಗಾರ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಎಬಿ ಡಿವಿಲಿಯರ್ಸ್ ನಿವೃತ್ತಿ
ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮೂರು ವರ್ಷಗಳ ಹಿಂದೆಯೇ ನಿವೃತ್ತಿ ಘೋಷಣೆ ಮಾಡಿದ್ದರೂ ಐಪಿಎಲ್ ಸೇರಿದಂತೆ ಲೀಗ್ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದರು. ಆದರೆ 2021ರ ಐಪಿಎಲ್‌ನ ಮುಕ್ತಾಯದ ಬಳಿಕ ಡಿವಿಲಿಯರ್ಸ್ ಲೀಗ್ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್‌ನಲ್ಲಿ ಸುದೀರ್ಘ ಕಾಲ ಆರ್‌ಸಿಬಿ ತಂಡದ ಭಾಗವಾಗಿದ್ದ ಅವರು ಭಾರತೀಯ ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಆಟಗಾರರು ಕೂಡ ಹೌದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications