IPL 2024: ಮುಂದಿನ ಐಪಿಎಲ್‌ನಲ್ಲಿ ಈ ಸ್ಟಾರ್ ಬ್ಯಾಟರ್ ಮುಂಬೈ ತಂಡದಲ್ಲಿರುವುದಿಲ್ಲ; ಭವಿಷ್ಯ ನುಡಿದ ದಿಗ್ಗಜ ಕ್ರಿಕೆಟಿಗ
ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) ಟೂರ್ನಿಯಲ್ಲಿ ಸುಮಾರು 57 ಪಂದ್ಯಗಳು ಯಶಸ್ವಿಯಾಗಿ ಮುಗಿದಿವೆ. ಈ ಆವೃತ್ತಿಯಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು, ಅಂಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಈ ಟೂರ್ನಿಗೂ ಮುನ್ನ ಮುಂಬೈ ತನ್ನ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಿತ್ತು. ರೋಹಿತ್ ಶರ್ಮಾ ಅವರನ್ನು ತಂಡದ ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿತ್ತು. ಇದಕ್ಕೂ ಮೊದಲು ಹಾರ್ದಿಕ್ ಅವರನ್ನು ಗುಜರಾತ್ ಟೈಟಾನ್ಸ್ (ಜಿಟಿ) ತಂಡದಿಂದ ಟ್ರೇಟ್ ಮಾಡಲಾಗಿತ್ತು. ಇದೀಗ ಪಾಕಿಸ್ತಾನ ಕ್ರಿಕೆಟ್ ತಂಡ ಮಾಜಿ ನಾಯಕ ಹಾಗು ವಿಶ್ವದ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ವಾಸಿಂ ಅಕ್ರಂ ಅವರು ಮುಂಬೈ ಇಂಡಿಯನ್ಸ್ ತಂಡ ಭವಿಷ್ಯ ನುಡಿದ್ದಾರೆ.

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿರುವು ವಾಸಿಂ ಅಕ್ರಮ್ ಅವರು, ಮುಂದಿನ ಋತುವಿನ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲಿ ಇರುವುದಿಲ್ಲ ಎಂದು ಕೊಂಡಿದ್ದೇನೆ. ನಾನು ರೋಹಿತ್ ಶರ್ಮಾ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಲ್ಲಿ ನೋಡಲು ಇಷ್ಟಪಡುತ್ತೇನೆ.
ಗೌತಮ್ ಗಂಭೀರ್ ಮಾರ್ಗದರ್ಶಕರಾಗಿ ಮತ್ತು ಅಯ್ಯರ್ ನಾಯಕರಾಗಿ ರೋಹಿತ್ ಅವರನ್ನು ತಂಡದಲ್ಲಿ ಹೊಂದಿರುತ್ತಾರೆ ಎಂದು ಕಲ್ಪಿಸಿಕೊಳ್ಳಿ. ರೋಹಿತ್ ಅತ್ಯಂತ ಬಲಿಷ್ಠ ಬ್ಯಾಟಿಂಗ್ ಶಕ್ತಿಯನ್ನು ಹೊಂದಿದ್ದಾರೆ. ಯಾವುದೇ ಪಿಚ್‌ನಲ್ಲಿಯೂ ಉತ್ತರಮವಾಗಿ ಬ್ಯಾಟಿಂಗ್ ಮಾಡುತ್ತಾರೆ. ಆದರೆ ರೋಹಿತ್ ಅವರನ್ನು ಕೆಕೆಆರ್‌ನಲ್ಲಿ ನೋಡುವುದು ಒಳ್ಳೆಯದು ಎಂದು ವಸಿಂ ಆಕ್ರಮ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ಋತುವಿನಲ್ಲಿ ರೋಹಿತ್ ಶರ್ಮಾ ಅವರು ಶತಕ ಗಳಿಸಿದ್ದಾರೆ ಎಂದು ನಾವು ನಿಮಗೆ ಹೇಳೋಣ, ಆದಾಗ್ಯೂ, ಅವರ ಬ್ಯಾಟ್ ಹೆಚ್ಚಿನ ಸಮಯ ವಿಫಲವಾಗಿದೆ. ಇದರ ಹೊರತಾಗಿ ಅವರು ಒಂದೇ ಒಂದು ಪ್ರಮುಖ ಇನ್ನಿಂಗ್ಸ್‌ಗಳನ್ನು ಆಡಿಲ್ಲ. ಆದಾಗ್ಯೂ, ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 49 ರನ್‌ಗಳ ಇನ್ನಿಂಗ್ಸ್ ಆಡಿದರು. 2024 ರ ಟಿ20 ವಿಶ್ವಕಪ್‌ಗೆ ರೋಹಿತ್ ಭಾರತ ತಂಡದ ನಾಯಕರಾಗಿದ್ದಾರೆ.
ಈ ಋತುವಿನಲ್ಲಿ ಅಬ್ಬರಿಸಿದ ರೋಹಿತ್
ರೋಹಿತ್ ಶರ್ಮಾ ಈ ಋತುವಿನಲ್ಲಿ ಒಂದು ಶತಕವನ್ನು ಗಳಿಸಿದ್ದು ಬಿಟ್ಟರೆ ನಿರಂತರವಾಗಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಕೇವಲ 33 ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು ರೋಹಿತ್ ಶರ್ಮಾ ಒಂದು ಋತುವಿನಲ್ಲಿ ಗೋಲ್ಡನ್ ಡಕ್ ಔಟ್ ಕೂಡ ಆಗಿದ್ದರು. ನಂತರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಜೇಯ 105 ರನ್‌ಗಳ ಇನ್ನಿಂಗ್ಸ್ ಅನ್ನು ಆಡಿದ್ದರು. ಅದರೆ ಚೆನ್ನೈ ಎದುರು ಈ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಸೋತಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications