For Quick Alerts
ALLOW NOTIFICATIONS  
For Daily Alerts
 

ಲೆಜೆಂಡ್ಸ್ ಲೀಗ್ ಕ್ರಿಕೆಟ್‌ ಪಂದ್ಯಗಳಲ್ಲಿ ಬದಲಾವಣೆ, ಇಂಡಿಯಾ ಮಹಾರಾಜಾಸ್ ಪಂದ್ಯ ಮುಂದೂಡಿಕೆ

Legends League cricket 2022: schedule for last 2 league matches gets changed

ಕ್ರಿಕೆಟ್‍ನಿಂದ ನಿವೃತ್ತಿ ಹೊಂದಿರುವ ವಿಶ್ವದ ಹಲವಾರು ಮಾಜಿ ಕ್ರಿಕೆಟಿಗರು ಮತ್ತೊಮ್ಮೆ ಮೈದಾನದಲ್ಲಿ ಸೆಣಸಾಡುವುದನ್ನು ನೋಡಲು ಕಾಯುತ್ತಿದ್ದ ಕ್ರಿಕೆಟ್ ಪ್ರೇಕ್ಷಕರಿಗೆ ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಟೂರ್ನಮೆಂಟ್ ದೊಡ್ಡ ಮನರಂಜನೆಯನ್ನು ತಂದಿದೆ ಎಂದು ಹೇಳಬಹುದು.

ಈ ಟೂರ್ನಿಯಲ್ಲಿ 3 ತಂಡಗಳಾದ ಇಂಡಿಯಾ ಮಹಾರಾಜಸ್, ಏಷ್ಯಾ ಲಯನ್ಸ್ ಮತ್ತು ವರ್ಲ್ಡ್ ಜಿಯಂಟ್ಸ್ ತಂಡಗಳು ಕಣಕ್ಕಿಳಿಯುತ್ತಿದ್ದು ಟೂರ್ನಿಯ ಮೊದಲನೇ ಪಂದ್ಯ ಜನವರಿ 20ರಂದು ಆರಂಭವಾಗಿದ್ದು ಅಂತಿಮ ಪಂದ್ಯ ಜನವರಿ 29ರಂದು ನಡೆಯಲಿದೆ.

ಇಂಡಿಯಾ ಮಹಾರಾಜಸ್ ತಂಡ ಭಾರತದ ನಿವೃತ್ತ ಕ್ರಿಕೆಟಿಗರನ್ನು ಒಳಗೊಂಡ ತಂಡವಾಗಿದ್ದರೆ, ಏಷ್ಯಾ ಲಯನ್ಸ್ ಭಾರತದ ಕ್ರಿಕೆಟಿಗರನ್ನು ಹೊರತುಪಡಿಸಿ ಏಷ್ಯಾ ಖಂಡದ ಉಳಿದ ಕ್ರಿಕೆಟ್ ತಂಡಗಳ ಮಾಜಿ ಆಟಗಾರರನ್ನು ಒಳಗೊಂಡಿದೆ ಹಾಗೂ ವರ್ಲ್ಡ್ ಜಿಯಂಟ್ಸ್ ಏಷ್ಯಾ ಖಂಡವನ್ನು ಹೊರತುಪಡಿಸಿ ವಿಶ್ವದ ಉಳಿದ ಕ್ರಿಕೆಟ್ ತಂಡಗಳ ಮಾಜಿ ಆಟಗಾರರನ್ನು ಒಳಗೊಂಡಿರುವ ತಂಡವಾಗಿದೆ.

ಇನ್ನು ಈ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದ್ದು, ಐದನೇ ಮತ್ತು ಆರನೇ ಪಂದ್ಯಗಳು ಜನವರಿ 26 ಮತ್ತು 27ರಂದು ನಡೆಯಲಿವೆ. ಈ ಹಿಂದೆ ಪ್ರಕಟಿಸಲಾಗಿದ್ದ ವೇಳಾಪಟ್ಟಿಯ ಪ್ರಕಾರ ಜನವರಿ 26ರಂದು ಇಂಡಿಯಾ ಮಹಾರಾಜಾಸ್ ಮತ್ತು ವರ್ಲ್ಡ್ ಜಿಯಂಟ್ಸ್ ತಂಡಗಳು ಸೆಣಸಾಟವನ್ನು ನಡೆಸಬೇಕಿತ್ತು ಹಾಗೂ ಜನವರಿ 27ರಂದು ಏಷ್ಯಾ ಲಯನ್ಸ್ ಮತ್ತು ವರ್ಲ್ಡ್ ಜಿಯಂಟ್ಸ್ ತಂಡಗಳು ಕಣಕ್ಕಿಳಿಯಬೇಕಿತ್ತು. ಆದರೆ ಇಂಡಿಯಾ ಮಹಾರಾಜಾಸ್ ತಂಡದ ಆಟಗಾರರು ಗಾಯದ ಸಮಸ್ಯೆಗೆ ಒಳಗಾಗಿದ್ದು, ಕಣಕ್ಕಿಳಿಯಲು ಬೇಕಾದ ಆಟಗಾರರ ಸಂಖ್ಯೆಯಲ್ಲಿ ಕೊರತೆಯುಂಟಾಗಿರುವ ಕಾರಣ ಇಂದು ( ಜನವರಿ 26 ) ನಡೆಯಬೇಕಿದ್ದ ಇಂಡಿಯಾ ಮಹಾರಾಜಾಸ್ ಮತ್ತು ವರ್ಲ್ಡ್ ಜಯಂಟ್ಸ್ ತಂಡಗಳ ನಡುವಿನ ಪಂದ್ಯ ನಾಳೆಗೆ ( ಜನವರಿ 27 ) ಮುಂದೂಡಿಕೆಯಾಗಿದ್ದು, ನಾಳೆ ನಡೆಯಬೇಕಿದ್ದ ವರ್ಲ್ಡ್ ಜಿಯಂಟ್ಸ್ ಮತ್ತು ಏಷ್ಯಾ ಲಯನ್ಸ್ ತಂಡಗಳ ನಡುವಿನ ಪಂದ್ಯ ಇಂದು ನಡೆಯಲಿದೆ. ಹಾಗೂ ಟೂರ್ನಿಯ ಅಂತಿಮ ಪಂದ್ಯವಾದ ಫೈನಲ್ ಹಣಾಹಣಿ ಈ ಹಿಂದೆ ನಿಗದಿಪಡಿಸಿದಂತೆ ಜನವರಿ 29ರಂದು ನಡೆಯಲಿದೆ.

ಇನ್ನು ಈ ವೇಳೆಗೆ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಅಂಕಪಟ್ಟಿಯಲ್ಲಿ ಇಂಡಿಯಾ ಮಹಾರಾಜಾಸ್ ತಂಡ ಕೊನೆಯ ಸ್ಥಾನದಲ್ಲಿದೆ. ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಇಂಡಿಯಾ ಮಹಾರಾಜಾಸ್ ಮೊದಲನೇ ಪಂದ್ಯದಲ್ಲಿ ಏಷ್ಯಾ ಲಯನ್ಸ್ ವಿರುದ್ಧ ಜಯ ಸಾಧಿಸಿತ್ತು ಆದರೆ, ನಂತರ ನಡೆದ ವರ್ಲ್ಡ್ ಜಯಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುಂಡ ಇಂಡಿಯಾ ಮಹಾರಾಜಾಸ್ ಮತ್ತೊಮ್ಮೆ ತೃತೀಯ ಪಂದ್ಯದಲ್ಲಿ ಏಷ್ಯ ಲಯನ್ಸ್ ವಿರುದ್ಧ ಸೆಣಸಾಟ ನಡೆಸಿ ಸೋಲುಂಡಿತು. ಹೀಗೆ ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಇಂಡಿಯಾ ಮಹಾರಾಜಾಸ್ ಒಟ್ಟು 3 ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋತು, 2 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಹಾಗೂ 3 ಪಂದ್ಯಗಳನ್ನಾಡಿ ಎರಡರಲ್ಲಿ ಜಯ ಸಾಧಿಸಿರುವ ಏಷ್ಯಾ ಲಯನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 2 ಪಂದ್ಯಗಳನ್ನಾಡಿ ಒಂದರಲ್ಲಿ ಗೆದ್ದು ಮತ್ತೊಂದರಲ್ಲಿ ಸೋತಿರುವ ವರ್ಲ್ಡ್ ಜಯಂಟ್ಸ್ ದ್ವಿತೀಯ ಸ್ಥಾನದಲ್ಲಿದೆ.

ಹೀಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಇಂಡಿಯಾ ಮಹಾರಾಜಾಸ್ ತಂಡ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಳ್ಳಬೇಕೆಂದರೆ ವರ್ಲ್ಡ್ ಜಿಯಂಟ್ಸ್ ತಂಡ ಇಂದು ನಡೆಯಲಿರುವ ಏಷ್ಯಾ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲಲೇಬೇಕು ಹಾಗೂ ನಾಳೆ ನಡೆಯಲಿರುವ ವರ್ಲ್ಡ್ ಜಿಯಂಟ್ಸ್ ಮತ್ತು ಇಂಡಿಯಾ ಮಹಾರಾಜಾಸ್ ತಂಡಗಳ ನಡುವಿನ ಪಂದ್ಯದಲ್ಲಿ ಇಂಡಿಯಾ ಮಹಾರಾಜಾಸ್ ಕಡ್ಡಾಯವಾಗಿ ಗೆಲ್ಲಲೇಬೇಕಿದೆ.

Story first published: Wednesday, January 26, 2022, 13:47 [IST]
Other articles published on Jan 26, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+