ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಲೆಜೆಂಡ್ಸ್ ಲೀಗ್ ಫೈನಲ್: ಸ್ಯಾಮಿ vs ಮಿಸ್ಬಾ ತಂಡಗಳ ಮುಖಾಮುಖಿಯಲ್ಲಿ ಟ್ರೋಫಿ ಯಾರಿಗೆ?

Legends league cricket Final: World Giants vs Asia Lions match preview and predicted playing XI

ಈ ಬಾರಿ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಮೂಲಕ ಮತ್ತೊಮ್ಮೆ ವಿಶ್ವ ಕ್ರಿಕೆಟ್‌ನ ಎಲ್ಲಾ ಮಾಜಿ ಕ್ರಿಕೆಟಿಗರ ಆಟವನ್ನು ಮೈದಾನದಲ್ಲಿ ವೀಕ್ಷಿಸಬಹುದಾದ ಅವಕಾಶ ಕ್ರಿಕೆಟ್ ಅಭಿಮಾನಿಗಳಿಗೆ ಸಿಕ್ಕಿದೆ. ಈ ಬಾರಿಯ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಜನವರಿ 20ರಂದು ಆರಂಭವಾಗಿದ್ದು ಇಂದು ( ಜನವರಿ 29 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ. ಇನ್ನು ಈ ಟೂರ್ನಿಯಲ್ಲಿ ಇಂಡಿಯಾ ಮಹಾರಾಜಾಸ್, ಏಷ್ಯಾ ಲಯನ್ಸ್ ಮತ್ತು ವರ್ಲ್ಡ್ ಜಿಯಂಟ್ಸ್ ತಂಡಗಳು ಭಾಗವಹಿಸಿವೆ. ಇಂಡಿಯಾ ಮಹಾರಾಜಸ್ ತಂಡ ಭಾರತದ ನಿವೃತ್ತ ಕ್ರಿಕೆಟಿಗರನ್ನು ಒಳಗೊಂಡ ತಂಡವಾಗಿದ್ದರೆ, ಏಷ್ಯಾ ಲಯನ್ಸ್ ಭಾರತದ ಕ್ರಿಕೆಟಿಗರನ್ನು ಹೊರತುಪಡಿಸಿ ಏಷ್ಯಾ ಖಂಡದ ಉಳಿದ ಕ್ರಿಕೆಟ್ ತಂಡಗಳ ಮಾಜಿ ಆಟಗಾರರನ್ನು ಒಳಗೊಂಡಿದೆ ಹಾಗೂ ವರ್ಲ್ಡ್ ಜಿಯಂಟ್ಸ್ ಏಷ್ಯಾ ಖಂಡವನ್ನು ಹೊರತುಪಡಿಸಿ ವಿಶ್ವದ ಉಳಿದ ಕ್ರಿಕೆಟ್ ತಂಡಗಳ ಮಾಜಿ ಆಟಗಾರರನ್ನು ಒಳಗೊಂಡಿರುವ ತಂಡವಾಗಿದೆ.

ಭಾರತ vs ವೆಸ್ಟ್ ಇಂಡೀಸ್: ಚೆನ್ನಾಗಿ ‌ಆಡಿದ್ರೂ ಅವಕಾಶ ಸಿಗದೇ ಕಡೆಗಣಿಸಲ್ಪಟ್ಟ ಭಾರತದ 5 ಆಟಗಾರರುಭಾರತ vs ವೆಸ್ಟ್ ಇಂಡೀಸ್: ಚೆನ್ನಾಗಿ ‌ಆಡಿದ್ರೂ ಅವಕಾಶ ಸಿಗದೇ ಕಡೆಗಣಿಸಲ್ಪಟ್ಟ ಭಾರತದ 5 ಆಟಗಾರರು

ಈ ಲೆಜೆಂಡ್ಸ್ ಲೀಗ್ ಟೂರ್ನಿಯಲ್ಲಿ ಲೀಗ್ ಹಂತ ಈಗಾಗಲೇ ಮುಕ್ತಾಯವಾಗಿದ್ದು, ಲೀಗ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ವರ್ಲ್ಡ್ ಜಯಂಟ್ಸ್ ಮತ್ತು ಏಷ್ಯಾ ಲಯನ್ಸ್ ತಂಡಗಳು ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿವೆ. ಹೌದು, ಟೂರ್ನಿಯಲ್ಲಿ ಭಾಗವಹಿಸಿದ್ದ 3 ತಂಡಗಳ ನಡುವೆ ಒಟ್ಟು 6 ಪಂದ್ಯಗಳು ನಡೆದಿದ್ದವು. ಇನ್ನು ಲೀಗ್ ಹಂತದಲ್ಲಿ ಒಟ್ಟು 4 ಪಂದ್ಯಗಳನ್ನಾಡಿದ ವರ್ಲ್ಡ್ ಜಯಂಟ್ಸ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋಲುವುದರ ಮೂಲಕ 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಗಳಿಸಿ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದೆ. ಅತ್ತ ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು 4 ಪಂದ್ಯಗಳನ್ನಾಡಿದ ಏಷ್ಯಾ ಲಯನ್ಸ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿ ಇನ್ನುಳಿದ 2 ಪಂದ್ಯಗಳಲ್ಲಿ ಸೋಲುವುದರ ಮೂಲಕ 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಹೊಂದಿ ಫೈನಲ್ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಯಿತು. ಅತ್ತ ಇಂಡಿಯಾ ಮಹಾರಾಜಾಸ್ ತಂಡ ಟೂರ್ನಿಯಲ್ಲಿ ಒಟ್ಟು 4 ಪಂದ್ಯಗಳನ್ನಾಡಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋಲುವುದರ ಮೂಲಕ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡು ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿದೆ.

ವಿರಾಟ್ ಕೊಹ್ಲಿ ನಾಯಕನಾಗಿದ್ದಾಗ ಕರೆ ತಂದಿದ್ದ ಈ 5 ಆಟಗಾರರಲ್ಲಿ ಈಗ ಒಬ್ಬನೂ ಕೂಡ ತಂಡದಲ್ಲಿಲ್ಲ!ವಿರಾಟ್ ಕೊಹ್ಲಿ ನಾಯಕನಾಗಿದ್ದಾಗ ಕರೆ ತಂದಿದ್ದ ಈ 5 ಆಟಗಾರರಲ್ಲಿ ಈಗ ಒಬ್ಬನೂ ಕೂಡ ತಂಡದಲ್ಲಿಲ್ಲ!

ಇನ್ನು ವರ್ಲ್ಡ್ ಜಯಂಟ್ಸ್ ಮತ್ತು ಏಷ್ಯಾ ಲಯನ್ಸ್ ತಂಡಗಳ ನಡುವಿನ ಫೈನಲ್ ಪಂದ್ಯ ಇಂದು ( ಜನವರಿ 29 ) ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ಈ ಪಂದ್ಯವು ಅಲ್ ಎಮಿರೇಟ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ನೇರಪ್ರಸಾರವನ್ನು ಸೋನಿ ಸ್ಪೋರ್ಟ್ ನೆಟ್‌ವರ್ಕ್ ಚಾನೆಲ್ ಹಾಗೂ ಸೋನಿ ಲೀವ್ ಅಪ್ಲಿಕೇಶನ್‌ಗಳಲ್ಲಿ ವೀಕ್ಷಿಸಬಹುದಾಗಿದೆ.

ಇನ್ನು ಈ ಬಾರಿಯ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಒಟ್ಟು 6 ಪಂದ್ಯಗಳ ಪೈಕಿ 4 ಪಂದ್ಯಗಳನ್ನು ದ್ವಿತೀಯ ಬ್ಯಾಟಿಂಗ್ ನಡೆಸಿದ ತಂಡ ಗೆದ್ದಿದ್ದರೆ, 2 ಪಂದ್ಯಗಳನ್ನು ಪ್ರಥಮ ಬ್ಯಾಟಿಂಗ್ ನಡೆಸಿದ್ದ ತಂಡ ಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಚೇಸಿಂಗ್ ಮಾಡುವ ತಂಡ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಬಹುದು.

ಸಂಭಾವ್ಯ ತಂಡಗಳು:

ವರ್ಲ್ಡ್ ಜಯಂಟ್ಸ್ ಸಂಭಾವ್ಯ ಆಡುವ ಬಳಗ: ಕೆವಿನ್ ಪೀಟರ್ಸನ್, ಹರ್ಷಲ್ ಗಿಬ್ಸ್, ಫಿಲ್ ಮಸ್ಟರ್ಡ್ (ವಿಕೆಟ್ ಕೀಪರ್), ಜಾಂಟಿ ರೋಡ್ಸ್, ಅಲ್ಬಿ ಮೊರ್ಕೆಲ್, ಕೆವಿನ್ ಓ ಬ್ರಿಯಾನ್, ಡೇರೆನ್ ಸ್ಯಾಮಿ (ಸಿ), ಮೋರ್ನೆ ಮೊರ್ಕೆಲ್, ಬ್ರೆಟ್ ಲೀ, ಮಾಂಟಿ ಪನೇಸರ್, ರಯಾನ್ ಜೇ ಸೈಡ್‌ಬಾಟಮ್

Sachin Tendulkarಗೆ DRS ಇದ್ದಿದ್ದರೆ ಕಥೆಯೇ ಬೇರೆ ಆಗುತ್ತಿತ್ತು | Oneindia Kannada

ಏಷ್ಯ ಲಯನ್ಸ್ ಸಂಭಾವ್ಯ ಆಡುವ ಬಳಗ: ಸನತ್ ಜಯಸೂರ್ಯ, ತಿಲಕರತ್ನೆ ದಿಲ್ಶನ್, ರೋಮೇಶ್ ಕಲುವಿತಾರಣ, ಉಪುಲ್ ತರಂಗ ( ವಿಕೆಟ್ ಕೀಪರ್ ), ಅಸ್ಗರ್ ಅಫ್ಘಾನ್, ಮಿಸ್ಬಾ-ಉಲ್-ಹಕ್ (ನಾಯಕ), ಮೊಹಮ್ಮದ್ ರಫೀಕ್, ನುವಾನ್ ಕುಲಶೇಖರ, ಚಾಮಿಂದಾ ವಾಸ್, ಮುತ್ತಯ್ಯ ಮುರಳೀಧರನ್, ದಿಲ್ಹಾರಾ ಫೆರ್ನಾಂಡೋ

Story first published: Saturday, January 29, 2022, 14:07 [IST]
Other articles published on Jan 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X