For Quick Alerts
ALLOW NOTIFICATIONS  
For Daily Alerts
 

'ಮತ್ತೊಮ್ಮೆ ಕಪ್ ಗೆದ್ದು ಇತಿಹಾಸ ಸೃಷ್ಟಿಸೋಣ' ಎಂದು ರೋಹಿತ್ ಶರ್ಮಾಗೆ ಹೇಳಿದ ಸೂರ್ಯಕುಮಾರ್ ಯಾದವ್

Let’s win t20 worldcup together and make history again says Suryakumar Yadav

2016ರ ನಂತರ ಯಾವುದೇ ವರ್ಷಗಳಲ್ಲಿಯೂ ಅಂತರರಾಷ್ಟ್ರೀಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಆಯೋಜಿಸಿರಲಿಲ್ಲ. ಹೀಗೆ ಕಳೆದ 4 ವರ್ಷಗಳಿಂದ ನಡೆಯದೇ ಇದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಈ ವರ್ಷ ಆಯೋಜಿಸಲಾಗಿದ್ದು ಮುಂಬರಲಿರುವ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಈ ಬಹುನಿರೀಕ್ಷಿತ ಟೂರ್ನಿ ನಡೆಯಲಿದೆ.

ಸದ್ಯ ಈ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ಯುಎಇಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಪಂದ್ಯಗಳು ನಡೆಯುತ್ತಿದ್ದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸದ್ಯಕ್ಕೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಪ್ರಯತ್ನದಲ್ಲಿದೆ.

ಹೀಗೆ ಯುಎಇಯಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ 2007ರಲ್ಲಿ ಟೀಮ್ ಇಂಡಿಯಾ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದಿದ್ದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹೌದು, ಸೆಪ್ಟೆಂಬರ್ 24, 2007ರಲ್ಲಿ ಉದ್ಘಾಟನಾ ಆವೃತ್ತಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವನ್ನು ಸಾಧಿಸುವುದರ ಮೂಲಕ ಉದ್ಘಾಟನಾ ಆವೃತ್ತಿಯಲ್ಲಿಯೇ ತನ್ನ ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನ ತಂಡದ ವಿರುದ್ಧ ಫೈನಲ್ ಪಂದ್ಯದಲ್ಲಿ ರೋಚಕವಾಗಿ ಗೆಲ್ಲುವುದರ ಮೂಲಕ ಟ್ರೋಫಿಯನ್ನು ಗೆದ್ದದ್ದು ಮತ್ತಷ್ಟು ವಿಶೇಷವಾಗಿತ್ತು.

ಆಗಿನ್ನೂ ಟೀಮ್ ಇಂಡಿಯಾದ ಯುವ ಆಟಗಾರನಾಗಿ ಗುರುತಿಸಿಕೊಂಡಿದ್ದ ರೋಹಿತ್ ಶರ್ಮಾ ತಂಡದ ಹಿರಿಯ ಆಟಗಾರರ ಜೊತೆ ಟ್ರೋಫಿಯನ್ನು ಎತ್ತಿ ಹಿಡಿದು ಸಂಭ್ರಮಿಸಿದ್ದರು. ಹೀಗೆ ತಾವು ಹಿರಿಯ ಆಟಗಾರರ ಜೊತೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯೊಂದಿಗೆ ಸಂಭ್ರಮಾಚರಣೆ ಮಾಡಿದ ಫೋಟೋವೊಂದನ್ನು ರೋಹಿತ್ ಶರ್ಮಾ ಹಂಚಿಕೊಂಡಿದ್ದು ಈ ಪೋಸ್ಟ್‌ಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾಗೂ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಸೂರ್ಯಕುಮಾರ್ ಯಾದವ್ ಕಾಮೆಂಟ್ ಮಾಡಿದ್ದು ಮತ್ತೊಮ್ಮೆ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸೋಣ ಎಂದಿದ್ದಾರೆ.

'ನಿಮ್ಮೊಡನೆ ಮೈದಾನಕ್ಕಿಳಿದು ಚೆಂಡನ್ನು ಬೌಂಡರಿಯ ಆಚೆಗೆ ಬಾರಿಸಲು ಹಾತೊರೆಯುತ್ತಿದ್ದೇನೆ, ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವುದರ ಮೂಲಕ ಮತ್ತೊಮ್ಮೆ ಇತಿಹಾಸವನ್ನು ನಿರ್ಮಿಸೋಣ' ಎಂದು ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾ ಫೋಟೋಗೆ ಕಾಮೆಂಟ್ ಮಾಡಿದ್ದಾರೆ. ಸದ್ಯ ಸೂರ್ಯಕುಮಾರ್ ಯಾದವ್ ವಿಶ್ವಾಸದಿಂದ ಮಾಡಿರುವ ಈ ಕಾಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

sky

ಪ್ಲೇ ಆಫ್ ಪ್ರವೇಶಿಸಲು ಮುಂಬೈ ಇಂಡಿಯನ್ಸ್ ಎಷ್ಟು ಪಂದ್ಯಗಳನ್ನು ಗೆಲ್ಲಬೇಕಿದೆ?

ಸೆಪ್ಟೆಂಬರ್ 28ರಂದು ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಗೆಲುವನ್ನು ಸಾಧಿಸುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ತನ್ನ ಐದನೇ ಗೆಲುವನ್ನು ದಾಖಲಿಸಿದೆ. ಈ ಮೂಲಕ 10 ಅಂಕಗಳನ್ನು ಪಡೆದು ಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದ್ದು, ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಅರ್ಹತೆ ಪಡೆಯಬೇಕೆಂದರೆ ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

Story first published: Wednesday, September 29, 2021, 22:25 [IST]
Other articles published on Sep 29, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+