ಶ್ರೀಶಾಂತ್ ಮೇಲಿನ ನಿಷೇಧ: ಬಿಸಿಸಿಐಗೆ ಸುಪ್ರೀಂನಿಂದ ನೋಟಿಸ್

Posted By:
Life ban on Sreesanth: SC gives BCCI four weeks to respond

ನವದೆಹಲಿ, ಫೆಬ್ರವರಿ 02: ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್, ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪದ ಮೇಲೆ ಭಾರತದ ಮಾಜಿ ವೇಗಿ ಶ್ರೀಶಾಂತ್ ಅವರ ಮೇಲಿನ ನಿಷೇಧ ಬಗ್ಗೆ ತೀರ್ಮಾನ ಕೈಗೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಸುಪ್ರೀಂಕೋರ್ಟ್ ನಾಲ್ಕು ವಾರಗಳ ಗಡುವು ನೀಡಿದೆ.

ತಮ್ಮ ಮೇಲೆ ಬಿಸಿಸಿಐ ಹೇರಿರುವ ಅಜೀವ ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ. ಶ್ರೀಶಾಂತ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ಫೆಬ್ರವರಿ 05ರಂದು ನಡೆಯಿತು.

ಎಸ್ ಶ್ರೀಶಾಂತ್ ಕ್ರಿಕೆಟ್ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟ ಬಿಸಿಸಿಐ

ವಿಚಾರಣೆ ಬಳಿಕ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಎಎಂ ಖಾವಿಲ್ಕರ್ ಹಾಗೂ ಜಸ್ಟೀಸ್ ಡಿ ವೈ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ಬಿಸಿಸಿಐಗೆ ನೋಟಿಸ್ ಜಾರಿ ಮಾಡಿ, ನಾಲ್ಕು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.

2013ರ ಐಪಿಎಲ್ ಹಗರಣಕ್ಕೆ ಸಂಬಂಧಿಸಿದಂತೆ ನಿಷೇಧಕ್ಕೆ ಒಳಗಾಗಿದ್ದ ಶ್ರೀಶಾಂತ್ ಆವರ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಬಿಸಿಸಿಐಗೆ ಪಟಿಯಾಲ ಹೈಕೋರ್ಟ್ ಹಾಗೂ ಕೇರಳ ಹೈಕೋರ್ಟ್ ಸೂಚಿಸಿದೆ.

ಈ ಎರಡು ಕೋರ್ಟ್ ಗಳಿಂದ ಶ್ರೀಶಾಂತ್, ಅಂಕಿತ್ ಚೌಹಾಣ್, ಅಜಿತ್ ಚಾಂಡಿಲ ಸೇರಿದಂತೆ ಎಲ್ಲಾ 36 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಆದರೆ, ಬಿಸಿಸಿಐ ಮಾತ್ರ ಶ್ರೀಶಾಂತ್ ಅವರು ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಿದೆ.(ಪಿಟಿಐ)

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Monday, February 5, 2018, 18:17 [IST]
Other articles published on Feb 5, 2018
POLLS

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ