ಅತಿಯಾದ ಒತ್ತಡ: ಬೆನ್ ಸ್ಟೋಕ್ಸ್ ರೀತಿಯೇ ನಿವೃತ್ತಿ ಹೇಳಲಿದ್ದಾರೆ ಈ ಐವರು ಸ್ಟಾರ್ ಕ್ರಿಕೆಟಿಗರು!

ಇತ್ತೀಚಿನ ದಿನಗಳಲ್ಲಿ ಅದರಲ್ಲಿಯೂ ಟಿ ಟ್ವೆಂಟಿ ಮತ್ತು ಫ್ರಾಂಚೈಸಿ ಕ್ರಿಕೆಟ್ ಟೂರ್ನಿಗಳು ಹೆಚ್ಚಾದ ನಂತರ ಕ್ರಿಕೆಟಿಗರು ಎಲ್ಲಾ ಮಾದರಿಯ ಸಾಲು ಸಾಲು ಪಂದ್ಯಗಳಲ್ಲಿ ಕಣಕ್ಕಿಳಿಯುತ್ತಿರುವುದರಿಂದ ಹೆಚ್ಚಿನ ಒತ್ತಡಕ್ಕೆ ಸಿಲುಕಿದ್ದಾರೆ ಎಂದೇ ಹೇಳಬಹುದು.
ಇದಕ್ಕೆ ತಾಜಾ ಉದಾಹರಣೆಯೆಂದರೆ ಇಂಗ್ಲೆಂಡ್ ತಂಡದ ವಿಶ್ವಕಪ್ ಹೀರೋ ಎಂದೇ ಖ್ಯಾತಿಯನ್ನು ಪಡೆದಿರುವ ಬೆನ್ ಸ್ಟೋಕ್ಸ್. ಈ ಹಿಂದೆ ಐಪಿಎಲ್ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಕಣಕ್ಕಿಳಿಯುತ್ತಿದ್ದ ಬೆನ್ ಸ್ಟೋಕ್ಸ್ ಇತ್ತೀಚಿನ ಐಪಿಎಲ್ ಆವೃತ್ತಿಯಿಂದ ದೂರ ಸರಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವುದರ ಮೂಲಕ ಆಶ್ಚರ್ಯವನ್ನುಂಟುಮಾಡಿದ್ದರು.
ಟೆಸ್ಟ್ ಮತ್ತು ಟಿ ಟ್ವೆಂಟಿ ಕ್ರಿಕೆಟ್ ಮಾದರಿಗಳತ್ತ ಹೆಚ್ಚಿನ ಗಮನ ಹರಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದ ಬೆನ್ ಸ್ಟೋಕ್ಸ್ ತಮ್ಮ ಪಾಲಿನ ಅಂತಿಮ ಏಕದಿನ ಪಂದ್ಯ ಆಡಿದ ನಂತರ 'ನಾವು ಕ್ರಿಕೆಟಿಗರು, ಪೆಟ್ರೋಲ್ ಅಥವಾ ಡೀಸೆಲ್ ತುಂಬಿಸಿ ಚಲಾಯಿಸುವುದಕ್ಕೆ ಕಾರ್ ಅಲ್ಲ' ಎಂಬ ಹೇಳಿಕೆ ನೀಡುವುದರ ಮೂಲಕ ತಾವು ತೀವ್ರ ಒತ್ತಡಕ್ಕೆ ಸಿಲುಕಿದ್ದನ್ನು ಬಹಿರಂಗಪಡಿಸಿದ್ದರು. ಹೀಗೆ ಬೆನ್ ಸ್ಟೋಕ್ಸ್ ರೀತಿ ವಿವಿಧ ತಂಡಗಳ ಹಲವು ಕ್ರಿಕೆಟಿಗರು ಅದೇ ರೀತಿಯ ಒತ್ತಡವನ್ನು ಅನುಭವಿಸುತ್ತಿದ್ದು, ಶೀಘ್ರದಲ್ಲಿಯೇ ಯಾವುದಾದರೊಂದು ಕ್ರಿಕೆಟ್ ಮಾದರಿಯಿಂದ ನಿವೃತ್ತಿ ತೆಗೆದುಕೊಳ್ಳುವ ಸಾಧ್ಯತೆಗಳು ದೊಡ್ಡ ಮಟ್ಟದಲ್ಲಿವೆ. ಅಂತಹ 5 ಆಟಗಾರರ ಪಟ್ಟಿ ಕೆಳಕಂಡಂತಿದೆ.

5. ಟ್ರೆಂಟ್ ಬೌಲ್ಟ್
ದೀರ್ಘಕಾಲದಿಂದ ನ್ಯೂಜಿಲೆಂಡ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ಟ್ರೆಂಟ್ ಬೌಲ್ಟ್ ಸದ್ಯ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ ಹಾಗೂ ಐಪಿಎಲ್ ಟೂರ್ನಿಯಲ್ಲಿಯೂ ಕಣಕ್ಕಿಳಿಯುತ್ತಿದ್ದಾರೆ. ಹೀಗೆ ಸಾಲು ಸಾಲು ಪಂದ್ಯಗಳಲ್ಲಿ ಟ್ರೆಂಟ್ ಬೌಲ್ಟ್ ಆಡುತ್ತಿದ್ದು, ಬೌಲ್ಟ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ. 78 ಟೆಸ್ಟ್ ಪಂದ್ಯಗಳನ್ನಾಡಿರುವ ಟ್ರೆಂಟ್ ಬೌಲ್ಟ್ 317 ವಿಕೆಟ್‍ಗಳನ್ನು ಕಬಳಿಸಿದ್ದು ಇದೇ ತಿಂಗಳ 22ಕ್ಕೆ 33 ವರ್ಷವನ್ನು ಪೂರೈಸಲಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಟಿ ಟ್ವೆಂಟಿ ಹಾಗೂ ಏಕದಿನ ವಿಶ್ವಕಪ್‌ಗಳಿಗಾಗಿ ಫಿಟ್ ಆಗಿ ಉಳಿದುಕೊಳ್ಳಲು ಬೌಲ್ಟ್ ಟೆಸ್ಟ್ ಕ್ರಿಕೆಟ್‍ನಿಂದ ದೂರ ಸರಿಯುವ ಸಾಧ್ಯತೆಗಳಿವೆ.

4. ಶಕಿಬ್ ಅಲ್ ಹಸನ್
ಕಳೆದ ಒಂದೂವರೆ ದಶಕದಿಂದ ಬಾಂಗ್ಲಾದೇಶದ ಆಲ್ ರೌಂಡರ್ ಆಟಗಾರನಾಗಿ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಕಣಕ್ಕಿಳಿಯುತ್ತಿರುವ ಶಕಿಬ್ ಅಲ್ ಹಸನ್ ಈ ವರ್ಷ ಹಲವು ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಮೊದಲಿಗೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ವೈಯಕ್ತಿಕ ಕಾರಣವನ್ನು ನೀಡಿ ಹೊರಗುಳಿದಿದ್ದ ಶಕಿಬ್ ಅಲ್ ಹಸನ್ ನಂತರ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಕುಟುಂಬ ಸದಸ್ಯರೋರ್ವರು ಆಸ್ಪತ್ರೆ ಪಾಲಾದ ಕಾರಣವನ್ನು ನೀಡಿ ಟೂರ್ನಿ ಮಧ್ಯದಲ್ಲಿಯೇ ವಾಪಸ್ ಆಗಿದ್ದರು. ಸದ್ಯ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಮುಂದಿನ ಟೆಸ್ಟ್ ಸರಣಿಗಳಲ್ಲಿ ಶಕಿಬ್ ಅಲ್ ಹಸನ್ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳು ಕಡಿಮೆಯಿದ್ದು, ಶಕಿಬ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ.

3. ಕೇನ್ ವಿಲಿಯಮ್ಸನ್
ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಸಕ್ರಿಯರಾಗಿದ್ದು ಅಂತಿಮವಾಗಿ ನಡೆದ ಟಿ ಟ್ವೆಂಟಿ ವಿಶ್ವಕಪ್ ಮತ್ತು ಏಕದಿನ ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಫೈನಲ್ ಹಂತದವರೆಗೂ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟೂರ್ನಿಯಲ್ಲಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ತಮ್ಮ ಲಯ ಕಳೆದುಕೊಂಡಿರುವ ಕೇನ್ ವಿಲಿಯಮ್ಸನ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬಳಿಕ ಟಿ20 ನಾಯಕತ್ವವನ್ನು ತ್ಯಜಿಸುವ ಸಾಧ್ಯತೆ ಹೆಚ್ಚಿದ್ದು, ಚುಟುಕು ಮಾದರಿಗೆ ನಿವೃತ್ತಿ ಘೋಷಿಸುವ ಸಾಧ್ಯತೆಗಳು ಕೂಡಾ ಹೆಚ್ಚಿವೆ. ಕೇನ್ ವಿಲಿಯಮ್ಸನ್ ಅಲಭ್ಯತೆಯಲ್ಲಿ ಮಿಚೆಲ್ ಸ್ಯಾಂಟ್ನರ್ ಟಿ 20 ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಕಾರಣ ಕೇನ್ ವಿಲಿಯಮ್ಸನ್ ನಿವೃತ್ತಿ ಘೋಷಿಸುವ ದಿನ ಸಮೀಪದಲ್ಲಿದೆ ಎನ್ನಬಹುದು.

2. ಸ್ಟೀವ್ ಸ್ಮಿತ್
ಕಳೆದೊಂದು ದಶಕದಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡದ ಆಧಾರಸ್ತಂಭವಾಗಿದ್ದಾರೆ. ಆಸ್ಟ್ರೇಲಿಯಾ ಪರ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‍ನಲ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಿರುವ ಸ್ಟೀವ್ ಸ್ಮಿತ್ ಚುಟುಕು ಮಾದರಿಯಲ್ಲಿ ಹೇಳಿಕೊಳ್ಳುವಂತಹ ಅಂಕಿಅಂಶವನ್ನೇನೂ ಹೊಂದಿಲ್ಲ. 57 ಟಿ ಟ್ವೆಂಟಿ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 26.51ರ ಸರಾಸರಿಯಲ್ಲಿ ಕೇವಲ 928 ರನ್ ಕಲೆಹಾಕಿದ್ದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಂತರ ಚುಟುಕು ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸುವುದು ಬಹುತೇಕ ಖಚಿತ.

1. ವಿರಾಟ್ ಕೊಹ್ಲಿ
ಕಳೆದೊಂದು ದಶಕದಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲೂ ಸಹ ತನ್ನ ದರ್ಬಾರ್ ನಡೆಸಿ ಕಿಂಗ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ತೀರಾ ಕೆಟ್ಟ ಫಾರ್ಮ್ ತಲುಪಿದ್ದಾರೆ. ಇತ್ತೀಚೆಗಷ್ಟೇ ನಡೆದ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ 2 ಪಂದ್ಯಗಳನ್ನಾಡಿ ಕೇವಲ 11 ರನ್ ಕಲೆ ಹಾಕಿದ್ದ ವಿರಾಟ್ ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದಲೂ ಹೊರಗುಳಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಸಾಕಷ್ಟು ಒತ್ತಡಕ್ಕೆ ಸಿಲುಕಿದ್ದು, ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಿಂದ ನಿವೃತ್ತಿ ಹೊಂದಿ ಟೆಸ್ಟ್ ಹಾಗೂ ಏಕದಿನ ಮಾದರಿಗಳತ್ತ ಹೆಚ್ಚಿನ ಗಮನ ಹರಿಸುವ ಸಾಧ್ಯತೆಗಳಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications