ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಟಾಪ್ 5 ಭಾರತೀಯ ಬ್ಯಾಟ್ಸ್‌ಮನ್‌ಗಳು

ಇಂಗ್ಲೆಂಡ್ ವಿರುದ್ಧ ಟೆಸ್ಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್‌ಮನ್‌ ಯಾರು? | Oneindia Kannada

ಬಹುನಿರೀಕ್ಷಿತ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದ್ದು ಮೊದಲನೇ ಟೆಸ್ಟ್ ಪಂದ್ಯ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಬಾರಿ ಭಾರತದ ಪ್ರವಾಸ ಕೈಗೊಂಡು 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-2 ಅಂತರದಿಂದ ಭಾರತದ ವಿರುದ್ಧ ಸೋಲನ್ನು ಅನುಭವಿಸಿದ್ದ ಇಂಗ್ಲೆಂಡ್ ತಂಡ ಈ ಬಾರಿಯ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದರ ಮೂಲಕ ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.

ಭಾರತ vs ಇಂಗ್ಲೆಂಡ್: ಅಶ್ವಿನ್‌ರನ್ನು ಕೊಹ್ಲಿ ತಂಡದಿಂದ ಕೈಬಿಟ್ಟಿದ್ದು ತಪ್ಪು ಎನ್ನುತ್ತಿವೆ ಈ 3 ಅಂಶಗಳು!ಭಾರತ vs ಇಂಗ್ಲೆಂಡ್: ಅಶ್ವಿನ್‌ರನ್ನು ಕೊಹ್ಲಿ ತಂಡದಿಂದ ಕೈಬಿಟ್ಟಿದ್ದು ತಪ್ಪು ಎನ್ನುತ್ತಿವೆ ಈ 3 ಅಂಶಗಳು!

ಅತ್ತ ಟೀಮ್ ಇಂಡಿಯಾ ಇತ್ತೀಚಿಗಷ್ಟೆ ನಡೆದ ನ್ಯೂಜಿಲೆಂಡ್ ವಿರುದ್ಧದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಸೋತಿದ್ದು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವುದರ ಮೂಲಕ ಯಶಸ್ಸಿನ ಹಾದಿಗೆ ಮರಳುವ ತವಕದಲ್ಲಿದೆ. ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಇಂಗ್ಲೆಂಡ್ ನೆಲದಲ್ಲಿ ಸೋತಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಸಹ ಸೋಲಲಿದೆ ಎಂದು ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

 ಭಾರತ vs ಇಂಗ್ಲೆಂಡ್: ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಭಾರತ vs ಇಂಗ್ಲೆಂಡ್: ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು

ಹೀಗಾಗಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವುದರ ಮೂಲಕ ಈ ಟೀಕೆಗಳಿಗೆಲ್ಲ ಉತ್ತರಿಸುವ ಪ್ರಯತ್ನದಲ್ಲಿ ಟೀಮ್ ಇಂಡಿಯಾ ಇದ್ದು ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಈಗಾಗಲೇ ಭಾರತ ತಂಡದ ಬೌಲರ್‌ಗಳು ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಯಾವ ಆಟಗಾರರು ಟೆಸ್ಟ್ ಇತಿಹಾಸದಲ್ಲಿ ಉತ್ತಮ ಆಟವನ್ನು ಆಡಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿದೆ. ಹೀಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಭಾರತದ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ..

5. ವಿರಾಟ್ ಕೊಹ್ಲಿ

5. ವಿರಾಟ್ ಕೊಹ್ಲಿ

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ನಿರತರಾಗಿರುವ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬ್ಯಾಟ್ಸ್‌ಮನ್‌ ಆಗಿ ಈಗಾಗಲೇ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಇದುವರೆಗೂ ಒಟ್ಟು 41 ಟೆಸ್ಟ್ ಇನ್ನಿಂಗ್ಸ್‌ ಆಡಿರುವ ವಿರಾಟ್ ಕೊಹ್ಲಿ 1742 ರನ್ ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ 5 ಟೆಸ್ಟ್ ಶತಕಗಳು ಮತ್ತು 7 ಟೆಸ್ಟ್ ಅರ್ಧಶತಕಗಳನ್ನು ಬಾರಿಸಿದ್ದಾರೆ.

4. ಗುಂಡಪ್ಪ ವಿಶ್ವನಾಥ್

4. ಗುಂಡಪ್ಪ ವಿಶ್ವನಾಥ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಟಾಪ್ 5 ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಮ್ಮ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗುಂಡಪ್ಪ ವಿಶ್ವನಾಥ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಒಟ್ಟು 54 ಟೆಸ್ಟ್ ಇನ್ನಿಂಗ್ಸ್‌ ಆಡಿರುವ ಗುಂಡಪ್ಪ ವಿಶ್ವನಾಥ್ 1880 ರನ್ ಬಾರಿಸಿದ್ದಾರೆ.

3. ರಾಹುಲ್‌ ದ್ರಾವಿಡ್

3. ರಾಹುಲ್‌ ದ್ರಾವಿಡ್

1996ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವೊಂದರ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧ ಒಟ್ಟು 37 ಟೆಸ್ಟ್ ಇನ್ನಿಂಗ್ಸ್‌ ಆಡಿದ್ದು 1950 ರನ್ ಬಾರಿಸಿದ್ದಾರೆ. ಹಾಗೂ ರಾಹುಲ್ ದ್ರಾವಿಡ್ ಇಂಗ್ಲೆಂಡ್ ವಿರುದ್ಧ 7 ಟೆಸ್ಟ್ ಶತಕ ಮತ್ತು 8 ಟೆಸ್ಟ್ ಅರ್ಧಶತಕಗಳನ್ನು ಬಾರಿಸಿದ್ದಾರೆ.

2. ಸುನಿಲ್ ಗವಾಸ್ಕರ್

2. ಸುನಿಲ್ ಗವಾಸ್ಕರ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 67 ಇನ್ನಿಂಗ್ಸ್‌ನಲ್ಲಿ 2483 ರನ್ ಬಾರಿಸಿರುವ ಸುನೀಲ್ ಗವಾಸ್ಕರ್ 4 ಟೆಸ್ಟ್ ಶತಕ ಮತ್ತು 16 ಟೆಸ್ಟ್ ಅರ್ಧಶತಕಗಳನ್ನು ಬಾರಿಸಿದ್ದಾರೆ.

1. ಸಚಿನ್ ತೆಂಡೂಲ್ಕರ್

1. ಸಚಿನ್ ತೆಂಡೂಲ್ಕರ್

ಕ್ರಿಕೆಟ್ ಜಗತ್ತಿನ ಬಹುತೇಕ ಸಾರ್ವಕಾಲಿಕ ದಾಖಲೆ ಗಳಲ್ಲಿ ಸಚಿನ್ ತೆಂಡೂಲ್ಕರ್ ಟಾಪ್ 1 ಸ್ಥಾನವನ್ನು ಪಡೆದುಕೊಳ್ಳುವುದು ಸರ್ವೇ ಸಾಮಾನ್ಯ. ಹೀಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿಯೂ ಸಹ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ 53 ಇನ್ನಿಂಗ್ಸ್‌ ಆಡಿರುವ ಸಚಿನ್ ತೆಂಡೂಲ್ಕರ್ 2535 ರನ್ ಬಾರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಸಚಿನ್ ತೆಂಡೂಲ್ಕರ್ 7 ಟೆಸ್ಟ್ ಶತಕ ಮತ್ತು 13 ಟೆಸ್ಟ್ ಅರ್ಧಶತಕಗಳನ್ನು ಬಾರಿಸಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Wednesday, August 4, 2021, 23:12 [IST]
Other articles published on Aug 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X