ಕೊಹ್ಲಿ-ರವಿಶಾಸ್ತ್ರಿ ಕಾಂಬಿನೇಷನ್‌ನಲ್ಲಿ ಟೀಮ್ ಇಂಡಿಯಾ ಮಾಡಿರುವ ಈ ಸಾಧನೆಗಳನ್ನು ಮರೆಯೋಕಾಗಲ್ಲ

ನವೆಂಬರ್‌ 8ರಂದು ನಡೆದ ಭಾರತ ಮತ್ತು ನಮೀಬಿಯಾ ನಡುವಿನ ಪಂದ್ಯದ ಮೂಲಕ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಪಯಣವನ್ನು ಮುಗಿಸಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ವಿಫಲವಾಗಿದ್ದು ಸೂಪರ್ 12 ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಟೂರ್ನಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳಲ್ಲಿ ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸೆಣಸಾಟ ನಡೆಸಿ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲಲಿರುವ ತಂಡಗಳಲ್ಲೊಂದು ಎನಿಸಿಕೊಂಡಿತ್ತು.

ಸೋಲನ್ನೇ ಕಾಣದ ಪಾಕಿಸ್ತಾನಕ್ಕೆ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಈ 3 ವೀಕ್ನೆಸ್ ಕಾಡುತ್ತಿದೆ!ಸೋಲನ್ನೇ ಕಾಣದ ಪಾಕಿಸ್ತಾನಕ್ಕೆ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಈ 3 ವೀಕ್ನೆಸ್ ಕಾಡುತ್ತಿದೆ!

ಆದರೆ ಟೂರ್ನಿ ಆರಂಭವಾದ ನಂತರ ಟೀಮ್ ಇಂಡಿಯಾ ತನ್ನ ಮೊದಲೆರಡು ಪಂದ್ಯಗಳಲ್ಲಿ ಸತತವಾಗಿ ಸೋಲುವುದರ ಮೂಲಕ ಕೆಟ್ಟ ಆರಂಭವನ್ನು ಪಡೆದುಕೊಂಡಿತು. ಹೀಗೆ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದ್ದ ಟೀಮ್ ಇಂಡಿಯಾ ನಂತರ ನಡೆದ 3 ಪಂದ್ಯಗಳಲ್ಲಿ ಸತತವಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿತು. ಹೀಗೆ ಹ್ಯಾಟ್ರಿಕ್ ಗೆಲುವು ಕಂಡರೂ ಸಹ ಸೆಮಿಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಳ್ಳುವಷ್ಟು ಅಂಕಗಳನ್ನು ಸಂಪಾದಿಸದ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ನವೆಂಬರ್‌ 8ರಂದು ನಮೀಬಿಯಾ ವಿರುದ್ಧ ನಡೆದ ಪಂದ್ಯವೇ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಭಾರತದ ಪಾಲಿನ ಅಂತಿಮ ಪಂದ್ಯವಾಗಿತ್ತು. ಈ ಪಂದ್ಯ ಟೀಮ್ ಇಂಡಿಯಾಗೆ ಟೂರ್ನಿಯಲ್ಲಿ ಅಂತಿಮ ಪಂದ್ಯವಾದದ್ದು ಮಾತ್ರವಲ್ಲದೇ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡವನ್ನು ನಾಯಕನಾಗಿ ಮುನ್ನಡೆಸಿ ಅಂತಿಮ ಪಂದ್ಯವೂ ಕೂಡ ಆಗಿತ್ತು ಹಾಗೂ 2017ರಿಂದ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ರವಿಶಾಸ್ತ್ರಿ ಅವರ ಅಂತಿಮ ಪಂದ್ಯವೂ ಕೂಡ ಇದಾಗಿತ್ತು.

ಐಪಿಎಲ್ 2022: ಆರ್‌ಆರ್ ಫ್ರಾಂಚೈಸಿ ಜೊತೆ ಮುನಿಸಿಕೊಂಡ ನಾಯಕ ಸಂಜು ಸ್ಯಾಮ್ಸನ್?ಐಪಿಎಲ್ 2022: ಆರ್‌ಆರ್ ಫ್ರಾಂಚೈಸಿ ಜೊತೆ ಮುನಿಸಿಕೊಂಡ ನಾಯಕ ಸಂಜು ಸ್ಯಾಮ್ಸನ್?

ಹೀಗೆ ನಮೀಬಿಯಾ ವಿರುದ್ಧದ ಪಂದ್ಯ ಮುಗಿದ ನಂತರ ರವಿಶಾಸ್ತ್ರಿ ಮತ್ತು ವಿರಾಟ್ ಕೊಹ್ಲಿ ಪರಸ್ಪರ ಅಪ್ಪುಗೆಯನ್ನು ನೀಡುವುದರ ಮೂಲಕ ಭಾವುಕರಾದರು. ಟೀಮ್ ಇಂಡಿಯಾದ ಕೋಚ್ ಆಗಿ ಅಂತಿಮ ಪಂದ್ಯವನ್ನಾಡಿದ ರವಿ ಶಾಸ್ತ್ರಿಗೆ ತಂಡದ ಆಟಗಾರರು ಪಂದ್ಯ ಮುಗಿದ ನಂತರ ಬೀಳ್ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರವಿಶಾಸ್ತ್ರಿ ತಮ್ಮ ತರಬೇತಿಯಲ್ಲಿ ಟೀಮ್ ಇಂಡಿಯಾ ಸಾಧಿಸಿದ ವಿವಿಧ ಗೆಲುವುಗಳನ್ನು ಮೆಲುಕು ಹಾಕುವುದರ ಮೂಲಕ ಆಟಗಾರರನ್ನು ಹುರಿದುಂಬಿಸಿದರು.

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ: ನಿರೀಕ್ಷೆಗಳು ದುಪ್ಪಟ್ಟುಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ: ನಿರೀಕ್ಷೆಗಳು ದುಪ್ಪಟ್ಟು

ಹೌದು, ರವಿಶಾಸ್ತ್ರಿ ಮತ್ತು ವಿರಾಟ್ ಕೊಹ್ಲಿ ಜೋಡಿಯ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ಹಲವಾರು ಸರಣಿಗಳನ್ನು ಗೆಲ್ಲುವುದರ ಮೂಲಕ ಬಹು ದೊಡ್ಡ ಸಾಧನೆಗಳನ್ನು ಮಾಡಿದೆ. ಹೀಗೆ ಟೀಮ್ ಇಂಡಿಯಾ ರವಿಶಾಸ್ತ್ರಿ ಮತ್ತು ವಿರಾಟ್ ಕೊಹ್ಲಿ ಕಾಂಬಿನೇಷನ್‌ನಲ್ಲಿ ಗೆದ್ದಿರುವ ಹಲವಾರು ಸರಣಿಗಳ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ.

2018-19ರ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲುವು

2018-19ರ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲುವು

ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಕಾಂಬಿನೇಷನ್‌ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆದ್ದು ಬೀಗಿತ್ತು. ಈ ಮೂಲಕ ಆಸ್ಟ್ರೇಲಿಯಾ ನೆಲದಲ್ಲಿ ಬಲಿಷ್ಠ ಆಸ್ಟ್ರೇಲಿಯ ತಂಡವನ್ನು ಟೆಸ್ಟ್ ಸರಣಿಯಲ್ಲಿ ಮಣಿಸಿದ ಮೊದಲ ಏಷ್ಯಾ ತಂಡ ಎಂಬ ಕೀರ್ತಿಗೆ ಟೀಂ ಇಂಡಿಯಾ ಪಾತ್ರವಾಯಿತು.

ಸೆನಾ ರಾಷ್ಟ್ರಗಳಲ್ಲಿ ಟಿಟ್ವೆಂಟಿ ಸರಣಿ ಗೆಲುವು

ಸೆನಾ ರಾಷ್ಟ್ರಗಳಲ್ಲಿ ಟಿಟ್ವೆಂಟಿ ಸರಣಿ ಗೆಲುವು

ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ಸೌತ್ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನೆಲೆಗಳಲ್ಲಿ ಟಿ ಟ್ವೆಂಟಿ ಸರಣಿಯನ್ನು ಗೆಲ್ಲುವುದರ ಮೂಲಕ ಸಾಧನೆಯನ್ನು ಮಾಡಿದೆ. ಈ ದೇಶಗಳ ಪ್ರವಾಸವನ್ನು ಕೈಗೊಂಡು ಅವರ ನೆಲದಲ್ಲಿಯೇ ಸೋಲುಣಿಸುವುದು ಸುಲಭದ ಮಾತಾಗಿರಲಿಲ್ಲ. ಆದರೆ ಈ ಸಾಧನೆಯನ್ನು ರವಿಶಾಸ್ತ್ರಿ ತಮ್ಮ ತರಬೇತಿಯಲ್ಲಿ ಮಾಡಿ ತೋರಿಸಿದ್ದಾರೆ.

42 ತಿಂಗಳವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಂಬರ್ ಒನ್

42 ತಿಂಗಳವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಂಬರ್ ಒನ್

2016ರಿಂದ 2020ರವರೆಗೆ ಸುಮಾರು 42 ತಿಂಗಳುಗಳ ಕಾಲ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನವನ್ನು ಅಲಂಕರಿಸಿಕೊಂಡಿತ್ತು. ಹೀಗೆ ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಕಾಂಬಿನೇಷನ್‌ನಲ್ಲಿ ಈ ಮಹಾಸಾಧನೆಯನ್ನು ಕೂಡ ಟೀಮ್ ಇಂಡಿಯಾ ಮಾಡಿದೆ.

ಇತರೆ ಸಾಧನೆಗಳು

ಇತರೆ ಸಾಧನೆಗಳು

ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಜೋಡಿ ನಿರ್ಮಿಸಿರುವ ಇತರೆ ಸಾಧನೆಗಳ ವಿವರ ಈ ಕೆಳಕಂಡಂತಿದೆ..

2020-21ರಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮತ್ತೊಮ್ಮೆ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾ ನೆಲದಲ್ಲಿಯೇ ಸೋಲಿಸಿತು. ಈ ಸರಣಿಯಲ್ಲಿ ಮೊದಲ ಪಂದ್ಯದ ನಂತರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ತವರಿಗೆ ಪಯಣವನ್ನು ಬೆಳೆಸಿದ್ದರು ಹೀಗಾಗಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿತ್ತು. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿಯೂ ಕೂಡ ಟೀಮ್ ಇಂಡಿಯಾ ಈ ಸರಣಿಯನ್ನು ಗೆದ್ದು ಬೀಗಿತ್ತು.

ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಹಂತದವರೆಗೂ ಪ್ರವೇಶಿಸಿತ್ತು. ಆದರೆ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ಟೂರ್ನಿಯಿಂದ ಟೀಮ್ ಇಂಡಿಯಾ ಹೊರಬಿದ್ದಿತ್ತು.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಉದ್ಘಾಟನಾ ಆವೃತ್ತಿಯಲ್ಲಿ ಫೈನಲ್ ಹಂತವನ್ನು ತಲುಪಿತ್ತು. ಆದರೆ ಈ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲುಂಡಿತ್ತು.

ಇತ್ತೀಚೆಗಷ್ಟೇ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆಯನ್ನು ಸಾಧಿಸಿದೆ. ಈ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದ ಮುಂದೂಡಲ್ಪಟ್ಟಿದ್ದು ಮುಂದಿನ ವರ್ಷ ಇಂಗ್ಲೆಂಡ್ ನೆಲದಲ್ಲಿ ನಡೆಯಲಿದೆ.

ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಕಾಂಬಿನೇಷನ್‌ನಲ್ಲಿ ಟೀಮ್ ಇಂಡಿಯಾ ಮೊಟ್ಟಮೊದಲ ಬಾರಿಗೆ ವೆಸ್ಟ್ ಇಂಡೀಸ್ ನೆಲದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ವೈಟ್ ವಾಷ್ ಮಾಡಿತ್ತು.

For Quick Alerts
ALLOW NOTIFICATIONS
For Daily Alerts
Story first published: Wednesday, November 10, 2021, 14:03 [IST]
Other articles published on Nov 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X