IND vs ENG 5ನೇ ಟೆಸ್ಟ್: ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ 8ನೇ ಟೆಸ್ಟ್; ಹಳೇ 7 ಪಂದ್ಯಗಳ ಫಲಿತಾಂಶವೇನು?

ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಕಳೆದ ವರ್ಷ ಮುಂದೂಡಲ್ಪಟ್ಟಿದ್ದ ಟೆಸ್ಟ್ ಪಂದ್ಯವೊಂದರಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಹೌದು, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಕಳೆದ ವರ್ಷ ಆಯೋಜನೆಯಾಗಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟು ಇದೀಗ ಮರು ಆಯೋಜನೆಯಾಗಿದೆ.
ಇತ್ತಂಡಗಳ ನಡುವಿನ ಈ ಪಂದ್ಯ ಎಡ್ಜ್‌ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದು, ಈ ಪಂದ್ಯದ ಫಲಿತಾಂಶ ಸರಣಿಯ ವಿಜೇತ ತಂಡ ಯಾವುದು ಎಂಬುದನ್ನು ನಿರ್ಧರಿಸಲಿದೆ. ಹೌದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಈ ಪಂದ್ಯದಲ್ಲಿ ಗೆದ್ದರೆ ಅಥವಾ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ ಅಥವಾ ಈ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿದರೆ ಸಮಬಲ ಸಾಧಿಸಲಿದ್ದು, ಸರಣಿ ನೀರಸ ಡ್ರಾನಲ್ಲಿ ಅಂತ್ಯಗೊಳ್ಳಲಿದೆ.
ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೂ ಮಹತ್ವದ ಹಣಾಹಣಿಯಾಗಿ ಪರಿಣಮಿಸಿದ್ದು, ಯಾವ ತಂಡ ಗೆಲ್ಲಲಿದೆ ಎಂಬ ಕುತೂಹಲ ಮೂಡಿದೆ. ಇನ್ನು ಈ ಎಡ್ಜ್‌ಬಾಸ್ಟನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವ ಎಂಟನೇ ಟೆಸ್ಟ್ ಪಂದ್ಯ ಇದಾಗಿದ್ದು, ಕಳೆದ 7 ಟೆಸ್ಟ್ ಪಂದ್ಯಗಳ ಫಲಿತಾಂಶ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ ಓದಿ.

ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಟೆಸ್ಟ್ ಪಂದ್ಯಗಳ ಫಲಿತಾಂಶ
ಎಡ್ಜ್‌ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಇಲ್ಲಿಯವರೆಗೂ ಒಟ್ಟು 7 ಟೆಸ್ಟ್ ಪಂದ್ಯಗಳು ನಡೆದಿದ್ದು, ಆ ಎಲ್ಲಾ ಪಂದ್ಯಗಳ ಫಲಿತಾಂಶದ ಪಟ್ಟಿ ಕೆಳಕಂಡಂತಿದೆ.
1. ಭಾರತ vs ಇಂಗ್ಲೆಂಡ್ - 1967 - ಇಂಗ್ಲೆಂಡ್ ಜಯ
2. ಭಾರತ vs ಇಂಗ್ಲೆಂಡ್ - 1974 - ಇಂಗ್ಲೆಂಡ್ ಜಯ
3. ಭಾರತ vs ಇಂಗ್ಲೆಂಡ್ - 1979 - ಇಂಗ್ಲೆಂಡ್ ಜಯ
4. ಭಾರತ vs ಇಂಗ್ಲೆಂಡ್ - 1986 - ಡ್ರಾ
5. ಭಾರತ vs ಇಂಗ್ಲೆಂಡ್ - 1996 - ಇಂಗ್ಲೆಂಡ್ ಗೆಲುವು
6. ಭಾರತ vs ಇಂಗ್ಲೆಂಡ್ - 2011 - ಇಂಗ್ಲೆಂಡ್ ಗೆಲುವು
7. ಭಾರತ vs ಇಂಗ್ಲೆಂಡ್ - 2018 - ಇಂಗ್ಲೆಂಡ್ ಗೆಲುವು

ಗೆಲುವಿನ ಖಾತೆ ತೆರೆಯಬೇಕಿದೆ ಟೀಮ್ ಇಂಡಿಯಾ
ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಎಡ್ಜ್‌ಬಾಸ್ಟನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿರುವ ಒಟ್ಟು 7 ಟೆಸ್ಟ್ ಪಂದ್ಯಗಳ ಪೈಕಿ 6 ಪಂದ್ಯಗಳಲ್ಲಿ ಇಂಗ್ಲೆಂಡ್ ಜಯ ಸಾಧಿಸಿದ್ದರೆ, ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ ಹಾಗೂ ಟೀಮ್ ಇಂಡಿಯಾ ಯಾವುದೇ ಪಂದ್ಯದಲ್ಲಿಯೂ ಜಯ ಸಾಧಿಸಲಾಗದೇ ತೀವ್ರ ಹಿನ್ನಡೆ ಅನುಭವಿಸಿದೆ. ಸದ್ಯ ಮತ್ತೊಮ್ಮೆ ಇದೇ ಕ್ರೀಡಾಂಗಣದಲ್ಲಿ ಈ ಬಾರಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಎದುರಿಸುತ್ತಿದ್ದು, ಗೆದ್ದು ಕೆಟ್ಟ ಇತಿಹಾಸವನ್ನು ಅಳಿಸಿ ಹಾಕಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು ಕೆಳಕಂಡಂತಿವೆ.
ಭಾರತ: ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ(ನಾಯಕ)
ಇಂಗ್ಲೆಂಡ್: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications