ಇಂಗ್ಲೆಂಡ್‌ನಲ್ಲಿ ಅತಿಹೆಚ್ಚು ಏಕದಿನ ರನ್ ಬಾರಿಸಿರುವ ಭಾರತೀಯ ಆಟಗಾರರ ಟಾಪ್ 5 ಪಟ್ಟಿ; ನಂ.1 ಯಾರು?

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈಗಾಗಲೇ ಇಂಗ್ಲೆಂಡ್ ತಲುಪಿದ್ದು, ಆಂಗ್ಲರ ವಿರುದ್ಧ ಒಂದು ಟೆಸ್ಟ್, 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಕಣಕ್ಕಿಳಿಯಲಿದೆ.
ಹೌದು, ಕಳೆದ ವರ್ಷ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ಶುರುವಾಗದೇ ಮುಂದೂಡಲ್ಪಟ್ಟಿತ್ತು. ಆ ಪಂದ್ಯವೇ ಈ ಜುಲೈ 1ರಂದು ಆರಂಭವಾಗಲಿದ್ದು, ರೋಹಿತ್ ಶರ್ಮಾ ಬಳಗ ಇದಕ್ಕೂ ಮುನ್ನ ಲೀಸೆಸ್ಟರ್ ಶೈರ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುತ್ತಿದೆ.
ಇದೇ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಒಳಗಾಗಿದ್ದು, ಸದ್ಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಈ ಟೆಸ್ಟ್ ಪಂದ್ಯ ಹಾಗೂ ಟಿ ಟ್ವೆಂಟಿ ಸರಣಿ ಮುಕ್ತಾಯವಾದ ನಂತರ ಜುಲೈ 12ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಈ ಸರಣಿಯು ವಿಶೇಷ ಮೈಲಿಗಲ್ಲೊಂದರಲ್ಲಿ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ನಡುವೆ ಪೈಪೋಟಿ ಏರ್ಪಡುವುದಕ್ಕೆ ಕಾರಣವಾಗಲಿದೆ. ಹೌದು, ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಏಕದಿನ ರನ್ ಕಲೆಹಾಕಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಈ ಸರಣಿ ಮೂಲಕ ಕೊಹ್ಲಿ ಮತ್ತು ರೋಹಿತ್ ನಡುವೆ ಪೈಪೋಟಿ ಏರ್ಪಡಲಿದೆ. ಹಾಗಿದ್ದರೆ, ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಏಕದಿನ ರನ್ ಕಲೆಹಾಕಿರುವ ಭಾರತೀಯ ಆಟಗಾರರ ಟಾಪ್ 5 ಪಟ್ಟಿ ಹೇಗಿದೆ ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ.

5. ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ನೆಲದಲ್ಲಿ ಒಟ್ಟು 26 ಏಕದಿನ ಪಂದ್ಯಗಳನ್ನಾಡಿದ್ದು, 1051 ರನ್ ಕಲೆಹಾಕಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಒಟ್ಟು 3 ಏಕದಿನ ಶತಕ ಹಾಗೂ 4 ಏಕದಿನ ಅರ್ಧಶತಕಗಳನ್ನು ಬಾರಿಸಿರುವ ಸಚಿನ್ ತೆಂಡೂಲ್ಕರ್ ಆಂಗ್ಲರ ನೆಲದಲ್ಲಿ ಅತಿ ಹೆಚ್ಚು ಏಕದಿನ ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

4. ಶಿಖರ್ ಧವನ್
ಶಿಖರ್ ಧವನ್ ಇಂಗ್ಲೆಂಡ್ ನೆಲದಲ್ಲಿ ಒಟ್ಟು 19 ಏಕದಿನ ಪಂದ್ಯಗಳನ್ನಾಡಿದ್ದು, 1101 ರನ್ ಕಲೆಹಾಕಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ತಲಾ 4 ಏಕದಿನ ಶತಕ ಹಾಗೂ ಅರ್ಧ ಶತಕಗಳನ್ನು ಬಾರಿಸಿರುವ ಶಿಖರ್ ಧವನ್ ಆಂಗ್ಲರ ನೆಲದಲ್ಲಿ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

3. ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್ ಇಂಗ್ಲೆಂಡ್ ನೆಲದಲ್ಲಿ ಒಟ್ಟು 32 ಏಕದಿನ ಪಂದ್ಯಗಳನ್ನಾಡಿದ್ದು, 1238 ರನ್ ಕಲೆಹಾಕಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ 2 ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿರುವ ರಾಹುಲ್ ದ್ರಾವಿಡ್ ಆಂಗ್ಲರ ತಾಣದಲ್ಲಿ ಅತಿ ಹೆಚ್ಚು ಏಕದಿನ ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

2. ವಿರಾಟ್ ಕೊಹ್ಲಿ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಒಟ್ಟು 31 ಏಕದಿನ ಪಂದ್ಯಗಳನ್ನಾಡಿದ್ದು, 1316 ರನ್ ಕಲೆಹಾಕಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಒಂದು ಶತಕ ಹಾಗೂ 12 ಅರ್ಧಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಆಂಗ್ಲರ ನೆಲದಲ್ಲಿ ಅತಿ ಹೆಚ್ಚು ಏಕದಿನ ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

1. ರೋಹಿತ್ ಶರ್ಮಾ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ರನ್ ಬಾರಿಸಿರುವ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿ ಒಟ್ಟು 32 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 1335 ರನ್ ಕಲೆಹಾಕಿದ್ದಾರೆ. ರೋಹಿತ್ ಶರ್ಮಾ ಇಂಗ್ಲೆಂಡ್ ನೆಲದಲ್ಲಿ ಒಟ್ಟು 7 ಏಕದಿನ ಶತಕ ಹಾಗೂ 6 ಏಕದಿನ ಅರ್ಧಶತಕಗಳನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications