ಏಕದಿನ ಕ್ರಿಕೆಟ್‌ನಲ್ಲಿ ಹಲವು ಬಾರಿ 5 ವಿಕೆಟ್ ಗೊಂಚಲು ಪಡೆದ ಬ್ಯಾಟ್ಸ್‌ಮನ್‌ಗಳಿವರು

ಕ್ರಿಕೆಟ್‌ನಲ್ಲಿ ಹಲವಾರು ಶ್ರೇಷ್ಠ ಬೌಲರ್ ಮತ್ತು ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿ ಅಬ್ಬರಿಸಿದ್ದು, ಅತಿಹೆಚ್ಚು ವಿಕೆಟ್ ಪಡೆದ ಹಾಗೂ ಅತಿಹೆಚ್ಚು ರನ್ ಕಲೆಹಾಕಿ ದಾಖಲೆ ನಿರ್ಮಿಸಿದ್ದಾರೆ. ಇನ್ನು ಕೆಲ ಆಟಗಾರರು ಮಾತ್ರ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡನ್ನೂ ಕರಗತ ಮಾಡಿಕೊಂಡು ಉತ್ತಮ ಆಲ್‌ರೌಂಡರ್ ಆಟಗಾರ ಎನಿಸಿಕೊಂಡಿದ್ದಾರೆ.
ಹೌದು, ಆಟಗಾರನೋರ್ವ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡನ್ನೂ ನಿಭಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದರೆ, ಅದು ತಂಡಕ್ಕೆ ಅತಿದೊಡ್ಡ ಪ್ಲಸ್ ಪಾಯಿಂಟ್ ಆಗಲಿದ್ದು, ಕೆಲ ದಿಗ್ಗಜ ಬ್ಯಾಟ್ಸ್‌ಮನ್‌ಗಳೂ ಸಹ ಬೌಲಿಂಗ್ ಮಾಡಿ ಕೆಲ ಪಂದ್ಯಗಳಲ್ಲಿ ಎದುರಾಗಳಿಗಳಿಗೆ ಸಿಂಹಸ್ವಪ್ನದಂತೆ ಕಾಡಿದ ಉದಾಹರಣೆಗಳಿವೆ. ಇನ್ನು ಬೌಲರ್‌ಗಳೇ ಏಕದಿನ ಪಂದ್ಯಗಳಲ್ಲಿ ಐದು ವಿಕೆಟ್ ಗೊಂಚಲನ್ನು ಪಡೆಯುವುದು ಸುಲಭದ ಮಾತಲ್ಲ. ಅಂತದ್ದರಲ್ಲಿ ಕೆಲ ಬ್ಯಾಟ್ಸ್‌ಮನ್‌ಗಳು ಕೇವಲ ಒಂದು ಬಾರಿ ಮಾತ್ರವಲ್ಲದೇ ಅನೇಕ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದು ಮಿಂಚಿದ್ದಾರೆ.
ಹೀಗೆ ಪ್ರಮುಖವಾಗಿ ಓರ್ವ ಬ್ಯಾಟ್ಸ್‌ಮನ್ ಆಗಿದ್ದುಕೊಂಡು ಹಲವು ಬಾರಿ ಏಕದಿನ ಪಂದ್ಯಗಳಲ್ಲಿ ಐದು ವಿಕೆಟ್ ಗೊಂಚಲು ವಿಕೆಟ್ ಪಡೆದ ಐವರು ಆಟಗಾರರ ಪಟ್ಟಿ ಈ ಕೆಳಕಂಡಂತಿದೆ. ಓದಿ..

1. ಸನತ್ ಜಯಸೂರ್ಯ
ಜಯಸೂರ್ಯ ಕ್ರಿಕೆಟ್ ಜಗತ್ತು ಕಂಡ ಓರ್ವ ಅತ್ಯದ್ಭುತ ಬ್ಯಾಟ್ಸ್‌ಮನ್. ವಿಶೇಷವಾಗಿ ಏಕದಿನ ಕ್ರಿಕೆಟ್‌ನಲ್ಲಿ ರನ್ ಹೊಳೆಯನ್ನೇ ಹರಿಸಿರುವ ಜಯಸೂರ್ಯ 13430 ರನ್ ಬಾರಿಸಿದ್ದು, ಬೌಲಿಂಗ್‌ನ್ನೂ ಕೂಡ ಮಿಂಚಿದ್ದಾರೆ. ಶ್ರೀಲಂಕಾದ ಸ್ಪೋಟಕ ಆಟಗಾರ ಒಟ್ಟು ನಾಲ್ಕು ಬಾರಿ 5 ವಿಕೆಟ್ ಗೊಂಚಲನ್ನು ಪಡೆದಿದ್ದಾರೆ. 2004ರಲ್ಲಿ ಪಾಕಿಸ್ತಾನದ ವಿರುದ್ಧ, 1997ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ, 1999ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮತ್ತು 1993ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಜಯಸೂರ್ಯ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 29 ರನ್ ನೀಡಿ 6 ವಿಕೆಟ್ ಪಡೆದದ್ದು ಜಯಸೂರ್ಯ ಅವರ ಬೆಸ್ಟ್ ಬೌಲಿಂಗ್ ಅಂಕಿಅಂಶವಾಗಿದೆ.

2. ಗ್ರೆಗ್ ಚಾಪೆಲ್
ಆಸ್ಟ್ರೇಲಿಯಾದ ಮಾಜಿ ನಾಯಕ ಗ್ರೆಗ್ ಚಾಲೆಪ್ ಒಟ್ಟು ಎರಡು ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ. 1981ರಲ್ಲಿ ಟೀಮ್ ಇಂಡಿಯಾ ವಿರುದ್ಧ ಮೊದಲ ಬಾರಿಗೆ ಚಾಪೆಲ್ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದರು, ನಂತರ 1987ರಲ್ಲಿ ಇಂಗ್ಲೆಂಡ್ ವಿರುದ್ಧದ ಪಟ್ಟಿಯಲ್ಲಿ ಪಂದ್ಯದಲ್ಲು ಕೂಡ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ.

3. ಸರ್ ವಿವಿಯನ್ ರಿಚರ್ಡ್ಸ್
1987ರಲ್ಲಿ ನ್ಯೂಹಿಲೆಂಡ್ ವಿರುದ್ಧ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದ ಸರ್ ವಿವಿಯನ್ ರಿಚರ್ಡ್ಸ್ 1989ರಲ್ಲಿ ಟೀಮ್ ಇಂಡಿಯಾ ವಿರುದ್ಧ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ.

4. ಸೌರವ್ ಗಂಗೂಲಿ
ದಾದಾ ಎಂದೇ ಖ್ಯಾತಿಯನ್ನು ಪಡೆದಿರುವ ಸೌರವ್ ಗಂಗೂಲಿ ಒಟ್ಟು ಎರಡು ಏಕದಿನ ಪಂದ್ಯಗಳಲ್ಲಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದಾರೆ. 1997ರಲ್ಲಿ ಪಾಕಿಸ್ತಾನದ ವಿರುದ್ಧ ಮೊದಲಿಗೆ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದ ಗಂಗೂಲಿ 2000ದಲ್ಲಿ ಜಿಂಬಾಬ್ವೆ ವಿರುದ್ಧ ಐದು ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದರು. ಅದರಲ್ಲಿಯೂ ಪಾಕಿಸ್ತಾನದ ವಿರುದ್ಧ ಕೇವಲ 16 ರನ್ ನೀಡಿದ್ದ ಗಂಗೂಲಿ ಐದು ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದರು.

5. ಸಚಿನ್ ತೆಂಡೂಲ್ಕರ್
ಗಾಡ್ ಆಫ್ ಕ್ರಿಕೆಟ್ ಎಂದೇ ಖ್ಯಾತಿಯನ್ನು ಪಡೆದಿರುವ ಹಲವಾರು ಬ್ಯಾಟಿಂಗ್ ದಾಖಲೆಗಳನ್ನು ತನ್ನ ಹೆಸರಿನಲ್ಲಿ ಬರೆದಿರುವ ಸಚಿನ್ ತೆಂಡೂಲ್ಕರ್ ಎರಡು ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಐದು ವಿಕೆಟ್ ಗೊಂಚಲು ಪಡೆದಿದ್ದಾರೆ. 1998ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದಿದ್ದ ಸಚಿನ್ 2005ರಲ್ಲಿ ಪಾಕಿಸ್ತಾನದ ವಿರುದ್ಧ ಐದು ವಿಕೆಟ್ ಗೊಂಚಲು ಪಡೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications