IPL 2025: ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ; ಯಾರಿಗೆ ಒಲಿಯಲಿದೆ ಅದೃಷ್ಟ?
ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 2025ರ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಮುಂದಿನ ವಾರಾಂತ್ಯ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ದಿನ. ಒಂದೆಡೆ, ಪರ್ತ್‌ನಲ್ಲಿ ನಡೆಯಲಿರುವ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಮುಖಾಮುಖಿಯಾಗಲಿವೆ. ಮತ್ತೊಂದೆಡೆ, ಐಪಿಎಲ್ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರ ಅದೃಷ್ಟ ಬದಲಾಗುವ ಸಾಧ್ಯತೆಯಿದೆ. ಇದಕ್ಕೂ ಐಪಿಎಲ್ ಮೆಗಾ ಹರಾಜಿಗೆ ನೊಂದಾಯಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆಗೆ ಎರಡು ದಿನಾಂಕಗಳನ್ನು ಘೋಷಿಸಿದೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯೂ ನವೆಂಬರ್ 22 ರಂದು ಆರಂಭವಾಗಲಿದೆ. ಹೀಗಿರುವಾಗ ಭಾನುವಾರ ಅಭಿಮಾನಿಗಳಿಗೆ ಸೂಪರ್ ಆಗಿರಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಹರಾಜು ಆರಂಭವಾಗಲಿದೆ. ಇದನ್ನು ಐಪಿಎಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಐಪಿಎಲ್ 2025ರ ಆವೃತ್ತಿಯಲ್ಲಿ ಆಡಲು ಯುವ ಆಟಗಾರರಿಗೆ ಸುವರ್ಣಾವಕಾಶವಿದೆ. ಐಪಿಎಲ್ 2025ರ ಮೆಗಾ ಹರಾಜಿಗೆ 574 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ 366 ಭಾರತೀಯ ಆಟಗಾರರಿದ್ದು, 208 ವಿದೇಶಿ ಆಟಗಾರರನ್ನು ಸೇರಿಸಲಾಗಿದೆ. ಭಾರತದ 318 ಅನ್‌ಕ್ಯಾಪ್ಡ್ ಆಟಗಾರರು ಐಪಿಎಲ್ ಮೆಗಾ ಹರಾಜು ಅಖಾಡದಲ್ಲಿದ್ದಾರೆ. ಜೊತೆಗೆ 12 ಅನ್‌ಕ್ಯಾಪ್ಡ್ ವಿದೇಶಿ ಆಟಗಾರರನ್ನು ಸೇರಿಸಲಾಗಿದೆ. 574 ಆಟಗಾರರ ಪಟ್ಟಿಯಲ್ಲಿ ಕೇವಲ 204 ಆಟಗಾರರಿಗೆ ಅದೃಷ್ಟ ಒಲಿಯಲಿದೆ. ಇದರಲ್ಲಿ 70 ಸ್ಲಾಟ್‌ಗಳು ವಿದೇಶಿ ಆಟಗಾರರಿಗೆ ಇರಲಿದೆ. ಆಟಗಾರರ ಗರಿಷ್ಠ ಮೂಲ ಬೆಲೆ 2 ಕೋಟಿ ರೂ. ಈ ಮೂಲ ಬೆಲೆಯೊಂದಿಗೆ 81 ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೆಗಾ ಹರಾಜಿನಲ್ಲಿ ಭಾರತದ ಸ್ಟಾರ್ ಆಟಗಾರರು
ಐಪಿಎಲ್ 2025ರ ಮೆಗಾ ಹರಾಜು ಅಖಾಡದಲ್ಲಿ ಟೀಮ್ ಇಮಡಿಯಾದ ಸ್ಟಾರ್ ಆಟಗಾರರು ಕಾಣಿಸಿಕೊಂಡಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ತರಿಸಿದೆ. ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಇಶಾನ್ ಕಿಶನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಾಲ್ ಸೇರಿದಂತೆ ಹಲವು ಸ್ಟಾರ್ ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಎಲ್ಲಾ ಸ್ಟಾರ್ ಆಟಗಾರರ ಮೇಲೆ ಐಪಿಎಲ್ ಫ್ರಾಂಚೈಸಿಗಳು ಹಣದ ಸುರಿಮಳೆ ಸುರಿಸುವ ಸಾಧ್ಯತೆಯಿದೆ. ಈ ಆಟಗಾರರ ಪೈಕಿ ಕೆಎಲ್ ರಾಹುಲ್ ಮೇಲೆ ಆರ್‌ಸಿಬಿ ಕಣ್ಣಿಟ್ಟಿದ್ದು, ಜೊತೆಗೆ ರಿಷಬ್ ಪಂತ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ತಂತ್ರ ರೂಪಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications