ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ಕೀಪರ್‌ಗಳ ಪಟ್ಟಿ; 25 ಶತಕ ಹೊಂದಿರುವ ಈತ ನಂಬರ್ 1

ಕ್ರಿಕೆಟ್ ಇತಿಹಾಸದಲ್ಲಿ ವಿಕೆಟ್ ಕೀಪರ್‌ಗಳು ತಮ್ಮದೇ ಆದ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕೆಲ ವಿಕೆಟ್ ಕೀಪರ್‌ಗಳು ಆರಂಭಿಕರಾಗಿ ಕಣಕ್ಕಿಳಿಯುವ ಕಾರಣ ಹೆಚ್ಚು ರನ್ ಕಲೆಹಾಕಿದ್ದಾರೆ ಹಾಗೂ ಇನ್ನೂ ಕೆಲ ವಿಕೆಟ್ ಕೀಪರ್‌ಗಳು ಮಧ್ಯಮ ಕ್ರಮಾಂಕದಲ್ಲಿ ಹಾಗೂ ಕೆಳಕ್ರಮಾಂಕದಲ್ಲಿ ಕಣಕ್ಕಿಳಿಯುವ ಕಾರಣ ಹೆಚ್ಚು ರನ್ ಗಳಿಸದೇ ಇದ್ದರೂ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ಎಂ ಎಸ್ ಧೋನಿ ಕೂಡ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ವಿಕೆಟ್ ಕೀಪರ್ ಆಗಿದ್ದರು ಹಾಗೂ ಧೋನಿ ಅತಿಹೆಚ್ಚು ರನ್ ಬಾರಿಸಿದ ವಿಕೆಟ್ ಕೀಪರ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳದೇ ಇದ್ದರೂ ಹಲವಾರು ಪಂದ್ಯಗಳಲ್ಲಿ ತಂಡಕ್ಕೆ ಫಿನಿಶರ್ ಆಗಿ ಆಸರೆಯಾಗಿದ್ದಾರೆ.
ಹೌದು, ಎಂ ಎಸ್ ಧೋನಿ ಕ್ರಿಕೆಟ್ ಜಗತ್ತು ಕಂಡ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ನಾಯಕ ಎಂಬ ಖ್ಯಾತಿಯನ್ನು ಹೊಂದಿದ್ದು, ತಮ್ಮ ಹೆಸರಿನಲ್ಲಿ ಹಲವಾರು ದಾಖಲೆಯನ್ನು ಹೊಂದಿದ್ದಾರೆ. ಇನ್ನು ಇತ್ತೀಚಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ವಿಕೆಟ್ ಕೀಫರ್‌ಗಳ ಪೈಕಿ ಬಹುತೇಕರು ಆರಂಭಿಕರಾಗಿ ಹಾಗೂ ಮಧ್ಯಮ ಕ್ರಮಾಂಕದ ಆಟಗಾರರಾಗಿ ಕಣಕ್ಕಿಳಿಯುತ್ತಿದ್ದು, ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿಯುವ ವಿಕೆಟ್ ಕೀಪರ್‌ಗಳ ಸಂಖ್ಯೆ ತೀರಾ ಕಡಿಮೆ ಎನ್ನಬಹುದು.
ಇನ್ನು ವಿಕೆಟ್ ಕೀಪರ್‌ಗಳ ಪೈಕಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ದಾಖಲೆಯನ್ನು ಯಾರು ನಿರ್ಮಿಸಿದ್ದಾರೆ ಹಾಗೂ ಅತಿಹೆಚ್ಚು ಏಕದಿನ ಶತಕ ಸಿಡಿಸಿರುವ ವಿಕೆಟ್ ಆಟಗಾರರ ಟಾಪ್ 4 ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಶಾಯ್ ಹೋಪ್
ಪ್ರಸ್ತುತ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ ವೆಸ್ಟ್ ಇಂಡೀಸ್ ವಿಕೆಟ್ ಕೀಪರ್ ಶಾಯ್ ಹೋಪ್ ತನ್ನ 13ನೇ ಏಕದಿನ ಶತಕವನ್ನು ದಾಖಲಿಸಿದರು. ಒಟ್ಟಾರೆ 95 ಏಕದಿನ ಇನ್ನಿಂಗ್ಸ್ ಪೈಕಿ 13 ಶತಕ ದಾಖಲಿಸಿರುವ ಶಾಯ್ ಹೋಪ್ ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಆಡಂ ಗಿಲ್‌ಕ್ರಿಸ್ಟ್
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್‌ಕ್ರಿಸ್ಟ್ ಒಟ್ಟು 279 ಏಕದಿನ ಇನ್ನಿಂಗ್ಸ್ ಪೈಕಿ 16 ಶತಕ ಬಾರಿಸಿದ್ದು, ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಕ್ವಿಂಟನ್ ಡಿ ಕಾಕ್
ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಒಟ್ಟು 132 ಏಕದಿನ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿದ್ದು 17 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಕುಮಾರ್ ಸಂಗಕ್ಕಾರ
ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಒಟ್ಟು 380 ಏಕದಿನ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿದ್ದು, 23 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಕುಮಾರ್ ಸಂಗಕ್ಕಾರ ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿರುವ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.
ಇನ್ನು ಕುಮಾರ್ ಸಂಗಕ್ಕಾರ ಏಕದಿನ ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್‌ಗಳ ಪಟ್ಟಿಯಲ್ಲಿಯೂ ಸಹ ಅಗ್ರಸ್ಥಾನದಲ್ಲಿದ್ದು, ಒಟ್ಟು 14234 ರನ್ ಕಲೆಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 93 ಅರ್ಧಶತಕಗಳನ್ನು ಬಾರಿಸಿರುವ ಕುಮಾರ್ ಸಂಗಕ್ಕಾರ ಗಳಿಸಿರುವ ಗರಿಷ್ಠ ಏಕದಿನ ರನ್ 196.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications