WTC ಫೈನಲ್ ಆಡಲಿರುವ ಭಾರತ ತಂಡದಲ್ಲಿ ಕೊರತೆಯಿದೆ: ಪಾಕ್ ಮಾಜಿ ಕ್ರಿಕೆಟರ್

ನವದೆಹಲಿ: ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ಸಿದ್ಧವಾಗಿರುವ ಟೀಮ್ ಇಂಡಿಯಾದಲ್ಲಿ ಒಂದು ಕೊರತೆ ಎದ್ದು ಕಾಣುತ್ತಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ದನಿಶ್ ಕನೇರಿಯಾ ಹೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆಡಲಿರುವ ಭಾರತ ತಂಡದಲ್ಲಿ ರಿಸ್ಟ್ ಸ್ಪಿನ್ನರ್‌ಗಳಿಲ್ಲ ಎಂದು ಕನೇರಿಯಾ ಕಳವಳ ತೋರಿಕೊಂಡಿದ್ದಾರೆ.
ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕಳೆದ ವಾರ ತಂಡ ಪ್ರಕಟಿಸಿತ್ತು. ಈ ತಂಡದಲ್ಲಿ ರಿಸ್ಟ್ ಸ್ಪಿನ್ನರ್‌ಗಳಿಲ್ಲ. ಇದು ತಂಡದ ವೀಕ್ ಪಾಯಿಂಟ್ ಎಂದು ದನಿಶ್ ಕನೇರಿಯಾ ಹೇಳಿದ್ದಾರೆ.
'ಭಾರತ ಸ್ವಲ್ಪ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. ಒಟ್ಟಾರೆ ಅವರ ತಂಡ ಚೆನ್ನಾಗಿದೆ. ಆದರೆ ಗಮನಿಸಬೇಕಾದ ಅಂಶವೆಂದರೆ ಭಾರತ ತಂಡದಲ್ಲಿ ಅವರು ರಿಸ್ಟ್ ಸ್ಪಿನ್ನರ್‌ಗಳನ್ನು ಆರಿಸಿಲ್ಲ,' ಎಂದು ಕರಾಚಿಯಿಂದ ಪಿಟಿಐ ಜೊತೆ ಮಾತನಾಡಿದ ಕನೇರಿಯಾ ಅಭಿಪ್ರಾಯಿಸಿದ್ದಾರೆ.
ಭಾರತ ತಂಡ ಮುಂದಿನ ತಿಂಗಳಿನಿಂದ ಇಂಗ್ಲೆಂಡ್‌ಗೆ ಸುದೀರ್ಘ ಪ್ರವಾಸ ಕೈಗೊಳ್ಳಲಿದೆ. ಜೂನ್ 18ರಿಂದ 22ರ ವರೆಗೆ ನ್ಯೂಜಿಲೆಂಡ್ ವಿರುದ್ಧ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆದರೆ, ಆಗಸ್ಟ್ 4ರಿಂದ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications