For Quick Alerts
ALLOW NOTIFICATIONS  
For Daily Alerts
 

ಅಫ್ಘಾನ್ ವಿರುದ್ಧದ ಏಕದಿನ ಸರಣಿಗೆ ಲಿಟನ್ ದಾಸ್ ನಾಯಕ: ತಮಿಮ್ ಇಕ್ಬಾಲ್ ನಿವೃತ್ತಿಗೆ ಟ್ವಿಸ್ಟ್!

ಬಾಂಗ್ಲಾದೇಶ ತಂಡದ ನಾಯಕನಾಗಿದ್ದ ತಮಿಮ್ ಇಕ್ಬಾಲ್ ಗುರುವಾರ ಇದ್ದಕ್ಕಿದ್ದಂತೆ ಪತ್ರಿಕಾಗೋಷ್ಠಿ ಕರೆದು ತಮ್ಮ ನಿವೃತ್ತಿಯನ್ನು ಘೋಷಿಸಿ ಬಾಂಗ್ಲಾದೇಶ ಅಭಿಮಾನಿಗಳಿಗೆ ಆಘಾತ ನೀಡಿದ್ದರು. ವಿಶ್ವಕಪ್‌ಗೆ ಮೂರು ತಿಂಗಳು ಇರುವ ಈ ಸಂದರ್ಭದಲ್ಲಿ ಬಾಂಗ್ಲಾದೇಶ ನಾಯಕನ ಈ ನಿರ್ಧಾರ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಅಲ್ಲದೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರನಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಈ ನಿರ್ಧಾರವನ್ನು ಪ್ರಕಟಿಸಿದ್ದರು ತಮಿಮ್ ಇಕ್ಬಾಲ್. ಹೀಗಾಗಿ ಬಾಂಗ್ಲಾದೇಶ ತಂಡ ನೂತನ ನಾಯಕನನ್ನು ಇದೀಗ ಹೆಸರಿಸಿದೆ.

ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರನಿಯ ಉಳಿದ ಪಂದ್ಯಗಳಿಗೆ ಲಿಟನ್ ದಾಸ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಬಾಕಿಯಿದ್ದು ಈ ಎರಡು ಪಂದ್ಯಗಳಲ್ಲಿ ಲಿಟನ್ ದಾಸ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಪ್ರವಾಸಿ ಅಫ್ಘಾನಿಸ್ತಾನದ ವಿರುದ್ಧ ಡಕ್ವರ್ತ್ ಲೂಯಿಸ್ ನಯಮದ ಆಧಾರದಲ್ಲಿ 17 ರನ್‌ಗಳ ಅಂತರದ ಸೋಲು ಅನುಭವಿಸಿತ್ತು. ಹೀಗಾಗಿ ಈ ಸರಣಿಯಲ್ಲಿ ಬಾಂಗ್ಲಾದೇಶ ಸದ್ಯ 0-1 ಅಂತರದ ಹಿನ್ನಡೆಯಲ್ಲಿದೆ.

Litton Das named captain for remainder of ODI series against Afganistan; twist in Tamim Iqbals retirement

ಅಫ್ಘಾನಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಗುರುವಾರ ಸುದ್ದಿಗೋಷ್ಠಿ ನಡೆಸಿದ ತಮಿಮ್ ಇಕ್ಬಾಲ್ ಇದ್ದಕ್ಕಿದ್ದಂತೇ ತಮ್ಮ ರಾಜೀನಾಮೆ ಘೋಷಣೆ ಮಾಡಿ ಎಲ್ಲರನ್ನೂ ಅಚ್ಚರಿಗೆ ಕೆಡವಿದರು. ಹಿರಿಯ ಕ್ರಿಕೆಟಿಗನ ಈ ಹಠಾತ್ ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ನಜ್ಮುಲ್ ಹಸನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂರ್ಭದಲ್ಲಿ ಅವರು ತಮಿಮ್ ಇಕ್ಬಾಲ್ ಈ ನಿರ್ಧಾರವನ್ನು ತೆಗೆದುಕೊಂಡ ಸಂದರ್ಭವನ್ನು ಉಲ್ಲೇಖಿಸಿ ಟೀಕಿಸಿದ್ದು ಅವರ ವೃತ್ತಿಪರತೆಯನ್ನು ಪ್ರಶ್ನಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ತಮಿಮ್ ಇಕ್ಬಾಲ್ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಮನವಿ ಮಾಡಿದ್ದು ನಿವೃತ್ತಿ ನಿರ್ಧಾರವನ್ನು ವಾಪಸ್ ಪಡೆಯಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಪರವಾಗಿ ಮನವಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ತಮಿಮ್ ಇಕ್ಬಾಲ್ ನಿವೃತ್ತಿ ಘೋಷಣೆಯ ಬಳಿಕ ಸಂಪರ್ಕಕ್ಕೆ ಸಿಕ್ಕಿಲ್ಲವಾದ್ದರಿಂದ ಅವರ ಸೋದರನ ಜೊತೆಗೆ ಈ ಬಗ್ಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇನ್ನು ಕುತೂಹಲಕಾರಿ ಬೆಳವಣಿಗೆಯಲ್ಲಿ ಗುರುವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದ ತಮಿಮ್ ಇಕ್ಬಾಲ್ ನಿವೃತ್ತಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಅವರೇ ಈ ವಿಚಾರವಾಗಿ ಮಧ್ಯ ಪ್ರವೇಶ ಮಾಡಿ ತಮಿಮ್ ಇಕ್ಬಾಲ್ ಜೊತೆಗೆ ಮಾತುಕತೆ ನಡೆಸಿದ ಬಳಿಕ ತಮಿಮ್ ಇಕ್ಬಾಲ್ ನಿವೃತ್ತಿ ನಿರ್ಧಾರವನ್ನು ವಾಪಾಸ್ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇನ್ನು ತಮಿಮ್ ಇಕ್ಬಾಲ್ ನಿವೃತ್ತಿ ನಿರ್ಧಾರ ವಾಪಸ್ ಪಡೆದುಕೊಂಡಿರುವ ಕಾರಣ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಮುಂದುವರಿಯಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

Story first published: Friday, July 7, 2023, 18:27 [IST]
Other articles published on Jul 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+