6,6,6,6,6: RCB ಆಲ್‌ರೌಂಡರ್ ಸ್ಫೋಟಕ ಬ್ಯಾಟಿಂಗ್: ಬರ್ಮಿಂಗ್‌ಹ್ಯಾಮ್ ತಂಡಕ್ಕೆ ಜಯ
ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಟೂರ್ನಿಯಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ. ಇವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬರ್ಮಿಂಗ್‌ಹ್ಯಾಮ್ ಫೀನಿಕ್ಸ್ 4 ವಿಕೆಟ್‌ಗಳಿಂದ ಓವಲ್ ಇನ್ವಿನ್ಸಿಬಲ್ಸ್ ತಂಡವನ್ನು ಮಣಿಸಿದೆ.
181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಬರ್ಮಿಗ್‌ಹ್ಯಾಮ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿ ಬೆನ್ ಡಕೆಟ್ (7) ಸಿಂಗಲ್ ಡಿಜಿಟ್‌ನಲ್ಲಿ ಆಟ ಮುಗಿಸಿದರು. ಆರಂಭಿಕ ವಿಲ್ ಸಮೀದ್ ಹಾಗೀ ವಿಕೆಟ್ ಕೀಪವ್ ಜೋ ಕ್ಲರ್ಕ್ ಜೋಡಿ ಎರಡನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ 27 ರನ್ ಬಾರಿಸಿದ್ದ ಕ್ಲರ್ಕ್ ಸ್ಯಾಮ್ ಕರನ್‌ಗೆ ವಿಕೆಟ್ ಒಪ್ಪಿಸಿದರು. ಆರಮಭಿಕ ವಿಲ್ ಸಮೀದ್ ಸಹ ಸಹ ಮೈಚಳಿ ಬಿಟ್ಟು ಬ್ಯಾಟ್ ಮಾಡಿದರು ಇವರು 29 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಸಹಾಯದಿಂದ 51 ರನ್ ಬಾರಿಸಿ ಔಟ್ ಆದರು.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ನಾಯಕ ಲಿಯಾಮ್ ಲಿವಿಂಗ್‌ಸ್ಟೋನ್ ಆರ್ಭಟಿಸಿದರು. ತಂಡಕ್ಕೆ ಅಗತ್ಯವಿದ್ದ ರನ್ ರೇಟ್ ಸರಾಸರಿಯಲ್ಲಿ ಬ್ಯಾಟ್ ಮಾಡಿದ ಇವರು ಅಭಿಮಾನಿಗಳನ್ನು ರಂಜಿಸಿದರು. ಇವರು ಕೇವಲ 27 ಎಸೆತಗಳಲ್ಲಿ 7 ಬೌಂಡರಿ, 5 ಸಿಕ್ಸರ್ ಸಹಾಯದಿಂದ ಅಜೇಯ 69 ರನ್ ಬಾರಿಸಿ ಗೆಲುವಿನಲ್ಲಿ ಮಿಂಚಿದರು. ಅಮತಿಮವಾಗಿ ಬರ್ಮಿಂಗ್‌ಹ್ಯಾಮ್ ತಂಡ ಇನ್ನು 2 ಎಸೆತಗಳು ಬಾಕಿ ಇರುವಂತೆ 6 ವಿಕೆಟ್ ಕಳೆದುಕೊಂಡು 182 ರನ್ ಸೇರಿಸಿತು.
ಕಳಪೆ ಆರಂಭ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಓವಲ್ ಇನ್ವಿನ್ಸಿಬಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರು ಸಿಂಗಲ್ ಡಿಜಿಟ್‌ನಲ್ಲಿ ಆಟ ಮುಗಿಸಿದರು. ನಾಲ್ಕನೇ ವಿಕೆಟ್‌ಗೆ ಜೋರ್ಡಾನ್ ಕಾಕ್ಸ್ ಹಾಗೂ ಸ್ಯಾಮ್ ಬಿಲ್ಲಿಂಗ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 37 ರನ್ ಸೇರಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಶ್ರಮಿಸಿತು. ನಾಯಕ ಸ್ಯಾಮ್ ಬಿಲ್ಲಿಂಗ್ 14, ಜೋರ್ಡಾನ್ ಕಾಕ್ಸ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 44 ರನ್ ಬಾರಿಸಿ ಔಟ್ ಆದರು.
ಮಧ್ಯಮ ಕ್ರಮಾಂಕದಲ್ಲಿ ಡೊನೊವನ್ ಫೆರೀರಾ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಇವರು 29 ಎಸೆತಗಳಲ್ಲಿ 4 ಬೌಂಡರಿ, 6 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದರು. ಅಂತಿಮವಾಗಿ ಓವಲ್ ತಂಡ 100 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 180 ರನ್ ಬಾರಿಸಿತು.
ಬರ್ಮಿಂಗ್‌ಹ್ಯಾಮ್‌ಗೆ ಮೊದಲ ಜಯ
ಈ ಮೂಲಕ ಓವಲ್ ತಂಡದ ಹ್ಯಾಟ್ರಿಕ್ ಗೆಲುವಿನ ಆಸೆ ಮಣ್ಣು ಪಾಲಾಯಿತು. ಓವಲ್ ತಂಡ ಈ ಟೂರ್ನಿಯಲ್ಲಿ ಮೊದಲ ಸೋಲು ಕಂಡು ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಆಡಿದ 3 ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿರುವ ಓವಲ್ 8 ಅಂಕ ಕಲೆ ಹಾಕಿದೆ. ಇನ್ನು ಬರ್ಮಿಂಗ್‌ಹ್ಯಾಮ್ ತಂಡ ಟೂರ್ನಿಯಲ್ಲಿ ಮೊದಲ ಜಯ ಸಾಧಿಸಿ ಹ್ಯಾಟ್ರಿಕ್ ಸೋಲಿನ ಭೀತಿಯಿಂದ ಪಾರಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications