LLC 2023: ಇಂಡಿಯಾ ಮಹಾರಾಜಸ್ vs ವರ್ಲ್ಡ್ ಜೈಂಟ್ಸ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಬುಧವಾರ, ಮಾರ್ಚ್ 15ರಂದು ಕತಾರ್‌ನ ದೋಹಾದಲ್ಲಿರುವ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್ (ಎಲ್ಎಲ್‌ಸಿ) ಮಾಸ್ಟರ್ಸ್‌ನ ಮೂರನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಇಂಡಿಯಾ ಮಹಾರಾಜಸ್ ಮತ್ತು ವರ್ಲ್ಡ್ ಜೈಂಟ್ಸ್ ತಂಡಗಳು ಎರಡನೇ ಬಾರಿಗೆ ಸೆಣಸಾಡುತ್ತಿವೆ.
ಟಾಸ್ ಗೆದ್ದ ವರ್ಲ್ಡ್ ಜೈಂಟ್ಸ್ ತಂಡದ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದು, ಹೀಗಾಗಿ ಹರ್ಭಜನ್ ಸಿಂಗ್ ನಾಯಕತ್ವದ ಇಂಡಿಯಾ ಮಹಾರಾಜಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಶನಿವಾರ, ಮಾರ್ಚ್ 11ರಂದು ನಡೆದ ಪಂದ್ಯದಲ್ಲಿ ವರ್ಲ್ಡ್ ಜೈಂಟ್ಸ್ ತಂಡವು ಇಂಡಿಯಾ ಮಹಾರಾಜಸ್ ತಂಡವನ್ನು 2 ರನ್‌ಗಳಿಂದ ಸೋಲಿಸಿತ್ತು.
ಇಂಡಿಯಾ ಮಹಾರಾಜಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತು, ಒಂದು ಪಂದ್ಯವನ್ನು ಗೆದ್ದಿದೆ. ವರ್ಲ್ಡ್ ಜೈಂಟ್ಸ್ ತಂಡವು ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆದ್ದು, ಒಂದು ಸೋತಿದೆ.
ಇದೀಗ ಕಳೆದ ಪಂದ್ಯದ ಸೋಲಿಗೆ ಗೌತಮ್ ಗಂಭೀರ್ ಪಡೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದರೆ. ಆರೋನ್ ಫಿಂಚ್ ವರ್ಲ್ಡ್ ಜೈಂಟ್ಸ್ ಇಂಡಿಯಾ ಮಹಾರಾಜಸ್ ವಿರುದ್ಧ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಗೌತಮ್ ಗಂಭೀರ್ ಅನುಪಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದಾರೆ.
LLC 2023 ಟಿವಿ ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್
ಲೆಜೆಂಡ್ ಲೀಗ್ ಕ್ರಿಕೆಟ್ ಪಂದ್ಯಗಳು ಡಿಸ್ನಿ + ಹಾಟ್‌ಸ್ಟಾರ್ ಮತ್ತು ಫ್ಯಾನ್‌ಕೋಡ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳು ಟಿವಿ ನೇರಪ್ರಸಾರ ಮಾಡಲಿವೆ.
ಬ್ರಿಟನ್‌ನಲ್ಲಿ ಲೆಜೆಂಡ್ ಲೀಗ್ ಕ್ರಿಕೆಟ್ ಪಂದ್ಯಗಳನ್ನು Psyched4 ಡಿಜಿಟಲ್ ಸ್ಟ್ರೀಮಿಂಗ್‌ನಲ್ಲಿ ವೀಕ್ಷಿಸಬಹುದು. ಇನ್ನು ಆಸ್ಟ್ರೇಲಿಯಾದಲ್ಲಿ ಫಾಕ್ಸ್ ಕ್ರಿಕೆಟ್ ಲೆಜೆಂಡ್ ಲೀಗ್‌ನ ಅಧಿಕೃತ ಪ್ರಸಾರಕವಾಗಿದೆ.
IPL 2023: ಪಂದ್ಯದ ಗತಿ ಬದಲಿಸಬಲ್ಲ ಇಬ್ಬರು ಮುಂಬೈ ಇಂಡಿಯನ್ಸ್ ಆಟಗಾರರನ್ನು ಹೆಸರಿಸಿದ ಸುನಿಲ್ ಗವಾಸ್ಕರ್
ಭಾರತ ಮಹಾರಾಜಸ್ vs ವರ್ಲ್ಡ್ ಜೈಂಟ್ಸ್ ಆಡುವ 11ರ ಬಳಗ
ಭಾರತ ಮಹಾರಾಜಸ್: ರಾಬಿನ್ ಉತ್ತಪ್ಪ(ವಿಕೆಟ್ ಕೀಪರ್), ಮನ್ವಿಂದರ್ ಬಿಸ್ಲಾ, ಸುರೇಶ್ ರೈನಾ, ಮೊಹಮ್ಮದ್ ಕೈಫ್, ಯೂಸುಫ್ ಪಠಾಣ್, ಸ್ಟುವರ್ಟ್ ಬಿನ್ನಿ, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್ (ನಾಯಕ), ರೀತಿಂದರ್ ಸೋಧಿ, ಅಶೋಕ್ ದಿಂಡಾ
ವರ್ಲ್ಡ್ ಜೈಂಟ್ಸ್: ಆರೋನ್ ಫಿಂಚ್ (ನಾಯಕ), ಕ್ರಿಸ್ ಗೇಲ್, ಶೇನ್ ವ್ಯಾಟ್ಸನ್, ರಾಸ್ ಟೇಲರ್, ಹಾಶಿಮ್ ಆಮ್ಲಾ, ಮೊರ್ನೆ ವ್ಯಾನ್ ವೈಕ್ (ವಿಕೆಟ್ ಕೀಪರ್), ಟಿನೊ ಬೆಸ್ಟ್, ಸಮಿತ್ ಪಟೇಲ್, ಬ್ರೆಟ್ ಲೀ, ಮಾಂಟಿ ಪನೇಸರ್, ಕ್ರಿಸ್ ಎಂಫೊಫು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications