LLC 2023: ಕ್ರಿಸ್ ಗೇಲ್ ಅರ್ಧಶತಕ; ಇಂಡಿಯಾ ಮಹಾರಾಜಸ್ ವಿರುದ್ಧ ವರ್ಲ್ಡ್ ಜೈಂಟ್ಸ್ ತಂಡಕ್ಕೆ ಗೆಲುವು

ಬುಧವಾರ, ಮಾರ್ಚ್ 15ರಂದು ಕತಾರ್‌ನ ದೋಹಾದಲ್ಲಿರುವ ಏಷ್ಯನ್ ಟೌನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್ (ಎಲ್ಎಲ್‌ಸಿ) ಮಾಸ್ಟರ್ಸ್‌ನ ಮೂರನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಇಂಡಿಯಾ ಮಹಾರಾಜಸ್ ತಂಡದ ವಿರುದ್ಧ ವರ್ಲ್ಡ್ ಜೈಂಟ್ಸ್ ತಂಡವು ಮತ್ತೊಮ್ಮೆ ಗೆಲುವು ಸಾಧಿಸಿದೆ.
ಹರ್ಭಜನ್ ಸಿಂಗ್ ನಾಯಕತ್ವದ ಇಂಡಿಯಾ ಮಹಾರಾಜಸ್ ನೀಡಿದ್ದ 137 ರನ್‌ಗಳ ಗುರಿ ಬೆನ್ನಟ್ಟಿದ ಆರೋನ್ ಫಿಂಚ್ ನಾಯಕತ್ವದ ವರ್ಲ್ಡ್ ಜೈಂಟ್ಸ್ ತಂಡ 18.4 ಓವರ್‌ಗಳಲ್ಲಿ 139 ರನ್ ಗಳಿಸಿ, 3 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
ಆರಂಭಿಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ 46 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 57 ರನ್ ಬಾರಿಸಿದರೆ, ಶೇನ್ ವ್ಯಾಟ್ಸನ್ 16 ಎಸೆತಗಳಲ್ಲಿ 26 ರನ್ ಗಳಿಸಿದರು.
ಕೊನೆಯಲ್ಲಿ ಸಮಿತ್ ಪಟೇಲ್ 12 ರನ್, ವ್ಯಾನ್ ವ್ಯಾಕ್ 10 ರನ್ ಗಳಿಸುವ ಮೂಲಕ ವರ್ಲ್ಡ್ ಜೈಂಟ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರು.

ಬೌಲಿಂಗ್‌ನಲ್ಲಿ ಇಂಡಿಯಾ ಮಹಾರಾಜಸ್ ತಂಡದ ಪರ ಯೂಸುಫ್ ಪಠಾಣ್ 4 ಓವರ್‌ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರೆ, ಹರ್ಭಜನ್ ಸಿಂಗ್, ಅಶೋಕ್ ದಿಂಡಾ, ಪ್ರವೀಣ್ ತಾಂಬೆ ಮತ್ತು ಸುರೇಶ್ ರೈನಾ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹರ್ಭಜನ್ ಸಿಂಗ್ ನಾಯಕತ್ವದ ಇಂಡಿಯಾ ಮಹಾರಾಜಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 136 ರನ್ ಪೇರಿಸಿತ್ತು.
ಇಂಡಿಯಾ ಮಹಾರಾಜಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ರಾಬಿನ್ ಉತ್ತಪ್ಪ ಮತ್ತು ಮನ್ವಿಂದರ್ ಬಿಸ್ಲಾ ಉತ್ತಮ ಅಡಿಪಾಯ ಹಾಕುವಲ್ಲಿ ವಿಫಲರಾದರು. 1.4 ಓವರ್‌ಗಳಲ್ಲಿ 11 ರನ್‌ಗಳಾಗಿದ್ದಾಗ ರಾಬಿನ್ ಉತ್ತಪ್ಪ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ರೀತಿಂದರ್ ಸೋಧಿ ಸಹ 2 ರನ್ ಗಳಿಸಿ ಔಟಾದರು.

ಆರಂಭಿಕ ಬ್ಯಾಟರ್ ಮನ್ವಿಂದರೆ ಬಿಸ್ಲಾ 34 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 36 ರನ್ ಬಾರಿಸಿ ವಿಕೆಟ್ ನೀಡಿದರು. ಇನ್ನು ಸುರೇಶ್ ರೈನಾ 41 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 49 ರನ್ ಗಳಿಸಿದರು.
ಇನ್ನು ಆಲ್‌ರೌಂಡರ್ ಇರ್ಫಾನ್ ಪಠಾಣ್ 20 ಎಸೆತಗಳಲ್ಲಿ 25 ರನ್ ಗಳಿಸಿ ತಂಡದ ಮೊತ್ತ 130 ಗಡಿ ದಾಟುವಲ್ಲಿ ನೆರವಾದರು. ಉಳಿದಂತೆ ಯಾವುದೇ ಬ್ಯಾಟ್ಸ್‌ಮನ್‌ಗಳು ವರ್ಲ್ಡ್ ಜೈಂಟ್ಸ್ ತಂಡದ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು.
ಬೌಲಿಂಗ್‌ನಲ್ಲಿ ವರ್ಲ್ಡ್ ಜೈಂಟ್ಸ್ ತಂಡದ ಪರ ಬ್ರೆಟ್ ಲೀ 3 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರು. ಟಿನೋ ಬೆಸ್ಟ್ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರೆ, ಸಮಿತ್ ಪಟೇಲ್ ಮತ್ತು ಮಾಂಟಿ ಪನೇಸರ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications