ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ : ಬೆನ್ ಸ್ಟೋಕ್ಸ್

ಇತ್ತೀಚೆಗಷ್ಟೇ ಮುಕ್ತಾಯವಾದ ಇಂಗ್ಲೆಂಡ್ ಮತ್ತು ಇಂಡಿಯಾ ನಡುವಿನ ಎಲ್ಲಾ ಸರಣಿಗಳಲ್ಲಿಯೂ ಭಾರತ ತಂಡ ಜಯಸಾಧಿಸಿದೆ. ಟಿ ಟ್ವೆಂಟಿ , ಟೆಸ್ಟ್ ಮತ್ತು ಏಕದಿನ ಸರಣಿಗಳು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದಿದ್ದವು. ಮೂರೂ ಸರಣಿಗಳಲ್ಲಿಯೂ ಸಹ ಭಾರತ ಜಯ ಸಾಧಿಸಿತ್ತು.
ಇದೀಗ ಭಾರತದ ವಿರುದ್ಧ ಏಕದಿನ ಸರಣಿಯನ್ನು ಸೋತ ಇಂಗ್ಲೆಂಡ್ ತಂಡದಲ್ಲಿ ಭಾಗವಾಗಿದ್ದ ಬೆನ್ ಸ್ಟೋಕ್ಸ್, ಇಂಗ್ಲೆಂಡ್‌ನಲ್ಲಿ ಮುಂದೆ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ವಿರುದ್ಧ ಎಲ್ಲಾ ಸರಣಿಗಳಲ್ಲಿಯೂ ಸೋತ ಸೇಡನ್ನು ಮುಂದೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲ್ಲುವುದರ ಮೂಲಕ ತೀರಿಸಿಕೊಳ್ಳಲು ಕಾಯುತ್ತಿದ್ದೇವೆ ಎಂದು ಬೆನ್ ಸ್ಟೋಕ್ಸ್ ತಿಳಿಸಿದ್ದಾರೆ.
ಮುಂಬರುವ ಆಗಸ್ಟ್ 04ರಿಂದ ಇಂಗ್ಲೆಂಡ್‌ನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿ ಭಾರತ ಮತ್ತು ಇಂಗ್ಲೆಂಡ್ ದೇಶಗಳ ನಡುವೆ ನಡೆಯಲಿದೆ. ಈ ಸರಣಿಯಲ್ಲಿ ಇಂಗ್ಲೆಂಡ್ ತಂಡ ಭಾರತ ನೆಲದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳುತ್ತಾ ಅಥವಾ ಪುನಃ ಭಾರತ ತಂಡಕ್ಕೆ ಸೋತು ಶರಣಾಗುತ್ತಾ ಕಾದು ನೋಡಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications