ಲಾರ್ಡ್ಸ್ ಟೆಸ್ಟ್: ಮೊದಲ ಇನ್ನಿಂಗ್ಸ್‌ನಲ್ಲಿ 325 ರನ್‌ಗೆ ಇಂಗ್ಲೆಂಡ್ ಆಲೌಟ್: ಆಸಿಸ್‌ಗೆ ಮಹತ್ವದ ಮುನ್ನಡೆ
ಆಶಸ್ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಮಹತ್ವದ ಮುನ್ನಡೆ ಸಾಧಿಸಿದೆ. ಎರಡನೇ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಮುನ್ನುಗ್ಗುತ್ತಿದ್ದ ಇಂಗ್ಲೆಂಡ್ ತಂಡವನ್ನು ಮೂರನೇ ದಿನದಾಟದ ಮೊದಲ ಸೆಶನ್‌ನಲ್ಲಿಯೇ ಕಟ್ಟಿಹಾಕುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. 325 ರನ್‌ಗಳಿಗೆ ಇಂಗ್ಲೆಂಡ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 105 ರನ್‌ಗಳ ಹಿನ್ನಡೆ ಅನುಭವಿಸಿದೆ.
2ನೇ ದಿನದಾಟದ ಅಂತ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 278 ರನ್‌ಗಳನ್ನು ಗಳಿಸಿತ್ತು. ಹ್ಯಾರಿ ಬ್ರೂಕ್ ಹಾಗೂ ಬೆನ್ ಸ್ಟೋಕ್ಸ್ ಅವರಂತಾ ಪ್ರಮುಖ ದಾಂಡಿಗರು ಕ್ರೀಸ್‌ನಲ್ಲಿದ್ದರು. ಆದರೆ ಈ ಇಬ್ಬರು ಆಟಗಾರನ್ನು ಕುಡ ಶೀಗ್ರದಲ್ಲಿಯೇ ಔಟ್ ಮಾಡುವಲ್ಲಿ ಯಶಸ್ವಿಯಾದ ಇಂಗ್ಲೆಂಡ್ ತಂಡ ನಂತರ ಜಾನಿ ಬೈರ್‌ಸ್ಟೋವ್ ಅವರನ್ನು ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದಂತೆ ಮಾಡುವಲ್ಲಿ ಆಸಿಸ್ ಬೌಲರ್‌ಗಳು ಯಶಸ್ವಿಯಾದರು. ನಂತರ ಇಂಗ್ಲೆಂಡ್ ಬಾಲಂಗೋಚಿಗಳನ್ನು ಸುಲಭವಾಗಿ ಔಟ್ ಮಾಡುವಲ್ಲಿ ಆಸಿಸ್ ಬೌಲರ್‌ಗಳು ಯಶಸ್ವಿಯಾದರು.

ಹೀಗಾಗಿ ಇಂಗ್ಲೆಂಡ್ ತಂಡ ಲಾರ್ಡ್ಸ್ ಮೈದಾನದಲ್ಲಿ 325 ರನ್‌ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಮಹತ್ವದ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆಸ್ಟ್ಏಲಿಯಾ ಪರವಾಗಿ ಮಿಚೆಲ್ ಸ್ಟಾರ್ಕ್ ಮೂರು ವಿಕೆಟ್ ಕಬಳಿಸಿದರೆ ಹೇಜಲ್‌ವುಡ್ ಮತ್ತು ಟ್ರೇವಿಸ್ ಹೆಡ್ ತಲಾ ಎರಡು ವಿಕೆಟ್ ಪಡೆದರು. ನಾಯಕ ಪ್ಯಾಟ್ ಕಮ್ಮಿನ್ಸ್, ನಾಥನ್ ಲಿಯಾನ್, ಹಾಘೂ ಕ್ಯಾಮರೂನ್ ಗ್ರೀನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಿದೆ.
ಇನ್ನು ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ 416 ರನ್‌ಗಳನ್ನು ಕಲೆಹಾಕಿತ್ತು. ಸ್ಟೀವ್ ಸ್ಮಿತ್ ಅಮೋಘ ಪ್ರದ್ಶನ ನೀಡಿ 110 ರನ್‌ಗಳ ಕೊಡುಗೆ ನೀಡುವ ಮೂಲಕ ಆಸಿಸ್ ತಂಡ ದೊಡ್ಡ ಮೊತ್ತಗಳಿಸಲು ಕಾರಣವಾದರು. ಇನ್ನು ಅವರಿಗೆ ಟ್ರೆವಿಸ್ ಹೆಡ್ ಉತ್ತಮವಾಗಿ ಸಾಥ್ ನೀಡಿದ್ದು 77 ರನ್‌ಗಳನ್ನು ಗಳಿಸಿದರು. ಈ ಜೋಡಿ ಆಸಿಸ್ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಲು ಕಾರಣವಾಯಿತು.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸ್ಟುವರ್ಟ್ ಬ್ರಾಡ್, ಓಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡೇನಿಯಲ್ ಲಾರೆನ್ಸ್, ಮ್ಯಾಥ್ಯೂ ಪಾಟ್ಸ್, ರೆಹಾನ್ ಅಹ್ಮದ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮ್ಯಾಟ್ ರೆನ್ಶಾ, ಜೋಶ್ ಇಂಗ್ಲಿಸ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications