ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯ ಮತ್ತೊಂದು ಲೋಸ್ಕೋರಿಂಗ್ ಥ್ರಿಲ್ಲರ್‌ಗೆ ಸಾಕ್ಷಿಯಾಗುವ ಸಾಧ್ಯತೆ ದಟ್ಟವಾಗಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಆಟಗಾರರು ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದೆ ಸಾಧಾರಣ ಗುರಿಯಿದೆ.
ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕುವ ನಿರೀಕ್ಷೆಯಲ್ಲಿತ್ತು. ಆದರೆ ಯುವ ಆಟಗಾರ ಆಯುಷ್ ಬದೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದರು. ಕೊನೆಯ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬದೋನಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡ ಗೌರವಯುತ ಮೊತ್ತ ಗಳಿಸಲು ಕಾರಣವಾದರು. ಸದ್ಯ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು 19.2 ಓವರ್ ಮುಕ್ತಾಯಕ್ಕೆ ಲಕ್ನೋ ಸೂಪರ್ ಜೈಂಟ್ಸ್ 125 ರನ್‌ಗಳಿಸಿದ್ದು 7 ವಿಕೆಟ್ ಕಳೆದುಕೊಂಡಿದೆ.

ಲಕ್ನೋ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಮನನ್ ವೋಹ್ರಾ, ಕರಣ್ ಶರ್ಮಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ (ನಾಯಕ), ಕೃಷ್ಣಪ್ಪ ಗೌತಮ್, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್
ಬೆಂಚ್: ಕ್ವಿಂಟನ್ ಡಿ ಕಾಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ಪ್ರೇರಕ್ ಮಂಕಡ್, ದೀಪಕ್ ಹೂಡಾ, ಅವೇಶ್ ಖಾನ್, ಮಾರ್ಕ್ ವುಡ್, ಜಯದೇವ್ ಉನದ್ಕತ್, ಸ್ವಪ್ನಿಲ್ ಸಿಂಗ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಯುಧ್ವೀರ್ ಸಿಂಗ್ ಚರಕ್, ಅಮಿತ್ ಮಿಶ್ರಾ
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಅಂಬಾಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಆರ್‌ಎಸ್ ಹಂಗರ್ಗೇಕರ್, ಸಿಸಂದಾ ಮಗಳ, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು