Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ

ಶುಕ್ರವಾರ, ಏಪ್ರಿಲ್ 19ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡದ ವಿರುದ್ಧ ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಸವಾಲಿನ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಅವರ ಅದ್ಭುತ ಫಿನಿಶಿಂಗ್ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 177 ರನ್‌ಗಳ ಗುರಿ ನೀಡಿದೆ.

LSG vs CSK IPL 2024 Lucknow Super Giants Need 177 Runs To Win Against Chennai Super Kings

ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಅಜಿಂಕ್ಯ ರಹಾನೆ ಮತ್ತು ರಚಿನ್ ರವೀಂದ್ರ ದೊಡ್ಡ ಆರಂಭ ನೀಡಲಿಲ್ಲ. ತಂಡದ ಮೊತ್ತ 4 ರನ್‌ಗಳಾಗಿದ್ದಾಗ ರಚಿನ್ ರವೀಂದ್ರ ಸೊನ್ನೆಗೆ ಔಟಾದರು.

ನಂತರ ಬಂದ ನಾಯಕ ರುತುರಾಜ್ ಗಾಯಕ್ವಾಡ್ 13 ಎಸೆತಗಳಲ್ಲಿ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಶಿವಂ ದುಬೆ 3 ರನ್, ಸಮೀರ್ ರಿಜ್ವಿ 1 ರನ್ ಗಳಿಸಿ ಬೇಗನೆ ಔಟಾದರು.

ಆ ಬಳಿಕ ಕ್ರೀಸ್‌ಗೆ ಬಂದ ರವೀಂದ್ರ ಜಡೇಜಾ 40 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 57 ರನ್ ಬಾರಿಸಿದರು.

ಮೊಯಿನ್ ಅಲಿ 20 ಎಸೆತಗಳಲ್ಲಿ 3 ಸಿಕ್ಸರ್ ಮೂಲಕ 30 ರನ್ ಗಳಿಸಿದರೆ, ಮಾಜಿ ನಾಯಕ ಎಂಎಸ್ ಧೋನಿ 9 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 28 ರನ್ ಬಾರಿಸಿ ಅಜೇಯರಾಗುಖಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕೃನಾಲ್ ಪಾಂಡ್ಯ 3 ಓವರ್‌ಗಳಲ್ಲಿ 16 ರನ್ ನೀಡಿ 2 ವಿಕೆಟ್ ಪಡೆದರೆ, ಮೊಹ್ಸಿನ್ ಖಾನ್, ಯಶ್ ಠಾಕೂರ್, ರವಿ ಬಿಷ್ಣೋಯಿ ಮತ್ತು ಮಾರ್ಕಸ್ ಸ್ಟೋಯಿನಿಸ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Friday, April 19, 2024, 21:24 [IST]
Other articles published on Apr 19, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+