LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
ಶುಕ್ರವಾರ, ಏಪ್ರಿಲ್ 19ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 6 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋಲಿನ ನಂತರ, ಪ್ರಸ್ತುತ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 6 ಪಂದ್ಯಗಳಲ್ಲಿ 4 ಗೆಲುವು ಮತ್ತು 2 ಸೋಲುಗಳೊಂದಿಗೆ ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕನೇ ಸ್ಥಾನದಲ್ಲಿದೆ.

ಎಲ್‌ಎಸ್‌ಜಿ vs ಸಿಎಸ್‌ಕೆ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಎಲ್‌ಎಸ್‌ಜಿ vs ಸಿಎಸ್‌ಕೆ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ/ ವಿಕೆಟ್ ಕೀಪರ್), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾನ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications