Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs DC: ಟಿ20ಯಲ್ಲಿ ತನ್ನ ಅತ್ಯಂತ ನಿಧಾನಗತಿಯ ಇನ್ನಿಂಗ್ಸ್ ಆಡಿದ ರಿಷಬ್ ಪಂತ್

LSG vs DC: Delhi Capitals skipper Rishabh Pant plays his slowest ever T20 innings
Rishab Pant ಅವರಿಗೆ ದಂಡ ವಿಧಿಸಿಲು ಅಸಲಿ ಕಾರಣವೇನು | Oneindia Kannada

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುರುವಾರ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದು ಗೆಲುವಿಗಾಗಿ ಎರಡೂ ತಂಡಗಳು ಪೈಪೋಟಿ ನಡೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್‌ಗೆ 150 ರನ್‌ಗಳ ಸಾಧಾರಣ ಗುರಿ ನಿಗದಿಪಡಿಸಿದೆ. ಈ ಪಂದ್ಯದಲ್ಲಿ ಲಕ್ನೋ ತಂಡದ ಬೌಲರ್‌ಗಳು ಡಿಸಿ ದಾಂಡಿಗರ ವಿರುದ್ಧ ಅದ್ಭುತ ರೀತಿಯಲ್ಲಿ ಮೇಲುಗೈ ಸಾಧಿಸಿದರು.

ಈ ಪಂದ್ಯದಲ್ಲಿ ಪೃಥ್ವಿ ಶಾ ಅದ್ಭುತ ಆರಂಭ ಒದಗಿಸಿದರೂ ಇತರ ಬ್ಯಾಟರ್‌ಗಳಿಂದ ವೇಗವಾಗಿ ರನ್ ಗಳಿಸಲು ಸಾಧ್ಯವಾಗದ ಕಾರಣ ನಿರೀಕ್ಷಿತ ಗುರಿ ನೀಡಲು ಡೆಲ್ಲಿ ತಂಡಕ್ಕೆ ಅಸಾಧ್ಯವಾಯಿತು. ಅದರಲ್ಲೂ ನಾಯಕ ರಿಷಬ್ ಪಂತ್ ತಮ್ಮ ಎಂದಿನ ಶೈಲಿಯ ಬ್ಯಾಟಿಂಗ್‌ಗೆ ವಿರುದ್ಧವಾಗಿ ಇಂದು ಆಡಿದರು. 8.3 ಓವರ್ ಆಗುವಷ್ಟರಲ್ಲಿ ಡೇವಿಡ್ ವಾರ್ನರ್ ಅವರನ್ನು ಕಳೆದುಕೊಂಡ ನಂತರ ರಿಷಭ್ ಪಂತ್ ಕಣಕ್ಕಿಳಿದರು. ಬಳಿಕ ಪಂತ್ ಇನ್ನಿಂಗ್ಸ್‌ನ ಕೊನೆಯವರೆಗೂ ಬ್ಯಾಟಿಂಗ್ ನಡೆಸಿದರೂ ಪಂತ್ ಬ್ಯಾಟ್‌ನಿಂದ ಬಂದಿದ್ದು 39 ರನ್ ಮಾತ್ರ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್‌ಗಳ ಅದ್ಭುತ ದಾಳಿಯ ಮುಂದೆ ರಿಷಭ್ ಪಂತ್ ರನ್‌ಗಳಿಸಲು ಪರದಾಡಿದರು. ಮೂರು ಬೌಂಡರಿ ಎರಡು ಸಿಕ್ಸರ್ ಬಾರಿಸಿದ ಪಂತ್ ಕಢವಲ 108.33ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದರು. ಈ ಮೂಲಕ ಪಂತ್ ತಮ್ಮ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ ನಡೆಸಿದಂತಾಗಿದೆ. ಪಂತ್ ಮಾತ್ರವಲ್ಲದೆ ಇನ್ನೊಂದು ತುದಿಯಲ್ಲಿದ್ದ ಸರ್ಫರಾಜ್ ಖಾನ್ ಕೂಡ 36 ರನ್‌ಗಳಿಸಲು 28 ಎಸೆತ ಬಳಸಿಕೊಂಡಿದ್ದರು.

LSG vs DC: Delhi Capitals skipper Rishabh Pant plays his slowest ever T20 innings

ಈ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅದ್ಭುತ ಪ್ರದರ್ಶನ ನಿಡಿದ್ದು ಫಾರ್ಮ್‌ಗೆ ಮರಳಿದ್ದಾರೆ. ಡೇವಿಡ್ ವಾರ್ನರ್ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದ ಶಾ 34 ಎಸೆತಗಳಲ್ಲಿ 61 ರನ್ ಸಿಡಿಸಿ ಮಿಂಚಿದರು. ಪೃಥ್ವಿ ಶಾ ಅಬ್ಬರ ಹೇಗಿತ್ತೆಂದರೆ 67 ರನ್‌ಗಳ ಮೊದಲ ವಿಕೆಟ್‌ ಜೊತೆಯಾಟದಲ್ಲಿ 61 ರನ್‌ಗಳನ್ನು ಪೃಥ್ವಿ ಶಾ ಅವರೇ ಗಳಿಸಿದ್ದರು.

ಪೃಥ್ವಿ ಶಾ ವಿಕೆಟ್ ಕಳೆದುಕೊಂಡ ನಂತರ ಡೇವಿಡ್ ವಾರ್ನರ್ ಹಾಗೂ ರೋವ್ಮನ್ ಪೋವೆಲ್ ವಿಕೆಟ್ ಕೂಡ ಶೀಘ್ರವಾಗಿ ಕಳೆದುಕೊಂಡಿತು ಡಿಸಿ. ಈ ಇಬ್ಬರು ಆಟಗಾರರು ಕೂಡ ಒಂದಂಕಿಗೆ ವಿಕೆಟ್ ಕಳೆದುಕೊಂಡರು. ನಂತರ ನಾಯಕ ರಿಷಬ್ ಪಂತ್ ಹಾಗೂ ಸರ್ಫರಾಜ್ ಖಾನ್ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ 75 ರನ್‌ಗಳ ಅಜೇಯ ಜೊತೆಯಾಟವನ್ನು ನೀಡಿದೆ. ಈ ಇಬ್ಬರು ಸ್ಪೋಟಕ ಆಟಗಾರರು ಕ್ರೀಸ್‌ನಲ್ಲಿದ್ದರೂ ದೊಡ್ಡ ಪ್ರಮಾಣದಲ್ಲಿ ರನ್‌ ಹರಿದು ಹೋಗದಂತೆ ತಡೆಯುವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್‌ಗಳು ಯಶಸ್ವಿಯಾಗಿದ್ದಾರೆ.

ಇನ್ನು ಈ ಪಂದ್ಯದ ಮೂಲಕ ಮೊದಲ ಬಾರಿಗೆ ಈ ಬಾರಿಯ ಐಪಿಎಲ್‌ನಲ್ಲಿ ಕಣಕ್ಕಿಳಿದಿರುವ ಕನ್ನಡಿಗ ಕೃಷ್ಣಪ್ಪ ಗೌತಮ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಒಂದು ವಿಕೆಟ್ ಪಡೆದಿರುವ ಗೌತಮ್ ಒಂದು ಮೇಡನ್ ಜೊತೆಗೆ ಕೇವಲ 23 ರನ್ ಬಿಟ್ಟುಕೊಟ್ಟರು.

ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಟಿಮ್ ಸೌಥಿ, ಶಿವಂ ಮಾವಿ

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ಅಶ್ವಿನ್ ಹೆಬ್ಬಾರ್, ಮಿಚೆಲ್ ಮಾರ್ಷ್, ಶ್ರೀಕರ್ ಭರತ್, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಟಿಮ್ ಸೀಫರ್ಟ್, ಮನ್ದೀಪ್ ಸಿಂಗ್, ಖಲೀಲ್ ಅಹ್ಮದ್, ಲುಂಗಿ ಎನ್ಗಿಡಿ

Story first published: Friday, April 8, 2022, 10:04 [IST]
Other articles published on Apr 8, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+