LSG vs DC IPL 2024: ಕುಲದೀಪ್ ಯಾದವ್ ಮಾರಕ ಬೌಲಿಂಗ್; ಡೆಲ್ಲಿ ತಂಡಕ್ಕೆ ಸಾಧಾರಣ ಗುರಿ ನೀಡಿದ ಲಕ್ನೋ
ಶುಕ್ರವಾರ, ಏಪ್ರಿಲ್ 12ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 26ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸಾಧಾರಣ ಮೊತ್ತ ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಯುಷ್ ಬದೊನಿ ಅವರ ಏಕೈಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 168 ರನ್‌ಗಳ ಗುರಿ ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಲು ಮುಂದಾದರು. ಈ ಜೋಡಿ ಮೊದಲ ವಿಕೆಟ್‌ಗೆ 2.5 ಓವರ್‌ಗಳಲ್ಲಿ 28 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 13 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 19 ರನ್ ಗಳಿಸಿದ್ದ ಕ್ವಿಂಟನ್ ಡಿ ಕಾಕ್ ವಿಕೆಟ್ ಒಪ್ಪಿಸಿದರು.
ನಂತರ ಬಂದ ದೇವದತ್ ಪಡಿಕ್ಕಲ್ ಕೇವಲ 3 ರನ್ ಗಳಿಸಿ ಮತ್ತೊಮ್ಮೆ ವಿಫಲರಾದರು. ಆ ಬಳಿಕ ಮಾರ್ಕಸ್ ಸ್ಟೋಯಿನಿಸ್ 8 ರನ್, ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಸೊನ್ನೆಗೆ ಔಟಾದರು. ಇನ್ನು ನಾಯಕ ಕೆಎಲ್ ರಾಹುಲ್ 22 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 39 ರನ್ ಗಳಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಕೇವಲ 10 ರನ್ ಗಳಿಸಿದರೆ, ಆಯುಷ್ ಬದೊನಿ ಅವರ ಅರ್ಧಶತಕವು 160ರ ಗಡಿ ದಾಟಿಸಲು ನೆರವಾಯಿತು. 35 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಅಜೇಯ 55 ರನ್ ಬಾರಿಸಿದರು. ಕೃನಾಲ್ ಪಾಂಡ್ಯ 3 ರನ್ ಮತ್ತು ಅರ್ಷದ್ ಖಾನ್ 16 ಎಸೆತಗಳಲ್ಲಿ 20 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕುಲದೀಪ್ ಯಾದವ್ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಖಲೀಲ್ ಅಹ್ಮದ್ 4 ಓವರ್‌ಗಳಲ್ಲಿ 41 ರನ್ ನೀಡಿ 2 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications