LSG vs GT IPL 2024: ಯಶ್ ಠಾಕೂರ್ 5 ವಿಕೆಟ್ ಗೊಂಚಲು; ಗುಜರಾತ್ ವಿರುದ್ಧ ಲಕ್ನೋ ಜಯಭೇರಿ
ಭಾನುವಾರ, ಏಪ್ರಿಲ್ 7ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ 33 ರನ್‌ಗಳ ಅಮೋಘ ಗೆಲುವು ಸಾಧಿಸಿದೆ.
ಈ ಮೂಲಕ ಐಪಿಎಲ್ 2024ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಗುಜರಾತ್ ಟೈಟನ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಮೂರು ಸೋಲುಗಳ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮಾರ್ಕಸ್ ಸ್ಟೋಯಿನಿಸ್ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. 164 ರನ್‌ಗಳ ಸವಾಲಿ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡ 18.5 ಓವರ್‌ಗಳಲ್ಲಿ 130 ರನ್‌ಗಳಿಗೆ ಸರ್ವಪತನ ಕಂಡಿತು.
ಗುಜರಾತ್ ಟೈಟನ್ಸ್ ತಂಡದ ಪರ ಬ್ಯಾಟಿಂಗ್ ಮಾಡಿದ ಸಾಯಿ ಸುದರ್ಶನ್ ಮತ್ತು ನಾಯಕ ಶುಭ್ಮನ್ ಗಿಲ್ 6 ಓವರ್‌ಗಳಲ್ಲಿ 54 ರನ್ ರನ್‌ಗಳ ಜೊತೆಯಾಟ ನೀಡಿದರು. ಶುಭ್ಮನ್ ಗಿಲ್ 19 ರನ್, ಸಾಯಿ ಸುದರ್ಶನ್ 31 ರನ್ ಗಳಿಸಿ ಔಟಾದರು.
ನಂತರ ಬಂದ ಕೇನ್ ವಿಲಿಯಮ್ಸನ್ ಮತ್ತು ಚೊಚ್ಚಲ ಪಂದ್ಯವಾಡಿದ ಬಿಆರ್ ಶರತ್ ಅಬ್ಬರಿಸಲು ವಿಫಲರಾದರು. ಆಲ್‌ರೌಂಡರ್ ವಿಜಯ್ ಶಂಕರ್ 17 ರನ್, ದರ್ಶನ್ ನಲ್ಕಂಡೆ 12 ರನ್, ರಾಹುಲ್ ತೆವಾಟಿಯಾ 30 ರನ್ ಗಳಿಸಿದರೂ ಗೆಲುವಿನ ದಡ ಸೇರಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications