LSG vs GT IPL 2024: ಗುಜರಾತ್ ಓಟಕ್ಕೆ ಬ್ರೇಕ್ ಹಾಕುತ್ತಾ ಲಕ್ನೋ; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ಏಪ್ರಿಲ್ 7ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಸೂಪರ್ ಸಂಡೇ ರಾತ್ರಿಯ ಲಕ್ನೋ ತಂಡದ ಹೊಸ ವೇಗದ ಸೆನ್ಸೇಷನ್ ಮಯಾಂಕ್ ಯಾದವ್ ಮತ್ತು ಗುಜರಾತ್ ನಾಯಕ ಶುಬ್ಮನ್ ಗಿಲ್ ಮೇಲೆ ಎಲ್ಲರ ಕಣ್ಣುಗಳ ನೆಟ್ಟಿರಲಿವೆ.
ಐಪಿಎಲ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಬಳಿಕ 92 ಅಥವಾ ಅದಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 3000 ರನ್‌ಗಳನ್ನು ತಲುಪಿದ ಎರಡನೇ ಬ್ಯಾಟರ್ ಆಗಲು ಶುಭ್ಮನ್ ಗಿಲ್ ಅವರಿಗೆ ಕೇವಲ ಆರು ರನ್‌ಗಳ ಅವಶ್ಯಕತೆ ಇದೆ.
ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮಯಾಂಕ್ ಈಗಾಗಲೇ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಎರಡು ಪಂದ್ಯಗಳಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಬೃಹತ್ ದಾಖಲೆಯನ್ನು ದಾಖಲಿಸಿದ್ದಾರೆ. ಇದೀಗ ಹ್ಯಾಟ್ರಿಕ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.
ಐಪಿಎಲ್ 2024ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಗುಜರಾತ್ ಟೈಟನ್ಸ್ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಎರಡು ಸೋಲುಗಳ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳು ಗೆಲುವಿನ ಮೂಲಕ ಅಂಕಗಳನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿವೆ.
ಎಲ್‌ಎಸ್‌ಜಿ vs ಜಿಟಿ ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಐಪಿಎಲ್ 2024ರ ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟನ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಎಲ್‌ಎಸ್‌ಜಿ vs ಜಿಟಿ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ಗುಜರಾತ್ ಟೈಟನ್ಸ್: ಶುಭ್ಮನ್ ಗಿಲ್(ನಾಯಕ), ಶರತ್ ಬಿಆರ್(ವಿಕೆಟ್ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications