LSG vs KKR IPL 2024: ತವರಿನಲ್ಲೇ ಮುಖಭಂಗ ಅನುಭವಿಸಿದ ಲಕ್ನೋ; ಅಗ್ರಸ್ಥಾನಕ್ಕೇರಿದ ಕೆಕೆಆರ್
ಭಾನುವಾರ, ಮೇ 5ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 54ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಪ್ರವಾಸಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ 98 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಈ ಮೂಲಕ ಐಪಿಎಲ್ 2024ರಲ್ಲಿ ಕೆಕೆಆರ್ ತಂಡ ಆಡಿದ 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳನ್ನು ಕಂಡಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಎಲ್‌ಎಸ್‌ಜಿ ತಂಡ ಆಡಿದ 11 ಪಂದ್ಯಗಳಲ್ಲಿ 6 ಗೆಲುವು ಮತ್ತು 5 ಸೋಲು ಅನುಭವಿಸಿದ್ದು, 12 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸುನಿಲ್ ನರೈನ್ ಅವರ ಸ್ಫೋಟಕ ಅರ್ಧಶತಕ ಮತ್ತು ಫಿಲಿಪ್ ಸಾಲ್ಟ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು.
236 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಎಲ್ಲ ಬ್ಯಾಟರ್‌ಗಳ ವೈಫಲ್ಯದ ಕಾರಣ 16.1 ಓವರ್‌ಗಳಲ್ಲಿ 137 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು 98 ರನ್‌ಗಳ ಭಾರೀ ಅಂತರದಿಂದ ತವರಿನ ಅಭಿಮಾನಿಗಳ ಎದುರು ಮುಖಭಂಗ ಅನುಭವಿಸಿತು.
ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಅರ್ಶಿನ್ ಕುಲಕರ್ಣಿ ಆರಂಭ ಉತ್ತಮವಾಗಿದ್ದರೂ, ಅದನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಈ ಜೋಡಿ 2 ಓವರ್‌ಗಳಲ್ಲಿ 20 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ 9 ರನ್ ಗಳಿಸಿ ಆಡುತ್ತಿದ್ದ ಅರ್ಶಿನ್ ಕುಲಕರ್ಣಿ ಔಟಾದರು.
ಇನ್ನು ನಾಯಕ ಕೆಎಲ್ ರಾಹುಲ್ 21 ಎಸೆತಗಳಲ್ಲಿ 3 ಬೌಂಡರಿ ಸಮೇತ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಮಾರ್ಕಸ್ ಸ್ಟೋಯಿನಿಸ್ ಅಬ್ಬರದ ಬ್ಯಾಟಿಂಗ್ ಮಾಡಿದರು ಮತ್ತು 21 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 36 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಉಳಿದಂತೆ ದೀಪಕ್ ಹೂಡಾ 5 ರನ್, ನಿಕೋಲಸ್ ಪೂರನ್ 10 ರನ್, ಆಯುಷ್ ಬಡೋನಿ 15 ರನ್, ಆಶ್ಟನ್ ಟರ್ನರ್ 16 ರನ್, ಕೃನಾಲ್ ಪಾಂಡ್ಯ 5 ರನ್, ಯುಧ್‌ವೀರ್ ಸಿಂಗ್ 7 ರನ್ ಮತ್ತು ರವಿ ಬಿಷ್ಣೋಯಿ 2 ರನ್ ಮಾತ್ರ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಕೆಕೆಆರ್ ತಂಡದ ಪರ ಹರ್ಷಿತ್ ರಾಣಾ 3.1 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 3 ಓವರ್‌ಗಳಲ್ಲಿ 30 ರನ್ ನೀಡಿ 3 ವಿಕೆಟ್ ಕಬಳಿಸಿದರು. ಆಂಡ್ರೆ ರಸೆಲ್ 2 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಮಿಚೆಲ್ ಸ್ಟಾರ್ಕ್ ಮತ್ತು ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಕೆಕೆಆರ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಫಿಲಿಪ್ ಸಾಲ್ಟ್ ಮತ್ತು ಸುನಿಲ್ ನರೈನ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 61 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 14 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 32 ರನ್ ಗಳಿಸಿ ಔಟಾದರು.

ನಂತರ ಬಂದ ಆಂಗ್‌ಕ್ರಿಶ್ ರಘುವಂಶಿ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 32 ರನ್ ಗಳಿಸಿದರು ಮತ್ತು ಸುನಿಲ್ ನರೈನ್ ಜೊತೆಗೂಡಿ ಎರಡನೇ ವಿಕೆಟ್‌ಗೆ 106 ರನ್‌ಗಳ ಜೊತೆಯಾಟ ಸೇರಿಸಿದರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಕ್ರೀಸ್‌ಗೆ ಬಂದ ಆಂಡ್ರೆ ರಸೆಲ್ 8 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ಆರಂಭಿಕ ಬ್ಯಾಟರ್ ಸುನಿಲ್ ನರೈನ್ 39 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 81 ರನ್‌ಗಳ ಅರ್ಧಶತಕ ಬಾರಿಸಿ ಔಟಾದರು.
ನಂತರ ಬಂದ ರಿಂಕು ಸಿಂಗ್ 11 ಎಸೆತಗಳಲ್ಲಿ 2 ಬೌಂಡರಿ ಸಹಾಯದಿಂದ 16 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 15 ಎಸೆತಗಳಲ್ಲಿ 3 ರನ್ ನೀಡಿ 23 ರನ್ ಗಳಿಸಿದರೆ, ರಮಣ್‌ದೀಪ್ ಸಿಂಗ್ ಕೇವಲ 6 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ ಅಜೇಯ 25 ರನ್ ಬಾರಿಸಿದರೆ, ವೆಂಕಟೇಶ್ ಅಯ್ಯರ್ 1 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನವೀನ್-ಉಲ್-ಹಕ್ 4 ಓವರ್‌ಗಳಲ್ಲಿ 49 ರನ್ ನೀಡಿ 3 ವಿಕೆಟ್ ಪಡೆದರೆ, ರವಿ ಬಿಷ್ಣೋಯಿ, ಯಶ್ ಠಾಕೂರ್ ಮತ್ತು ಯುಧ್‌ವೀರ್ ಸಿಂಗ್ ಚಾರಕ್ ತಲಾ ಒಂದೊಂದು ವಿಕೆಟ್ ಕಿತ್ತರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications