Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs MI IPL 2024: ಲಕ್ನೋ vs ಮುಂಬೈ ಕಾಳಗದಲ್ಲಿ ಗೆಲುವು ಯಾರಿಗೆ?; ಟಾಸ್ ವರದಿ, ಆಡುವ 11ರ ಬಳಗ

ಮಂಗಳವಾರ, ಏಪ್ರಿಲ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 48ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಪ್ರವಾಸಿ ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗುತ್ತಿವೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

LSG vs MI IPL 2024 Lucknow Super Giants vs Mumbai Indians Match Toss Report Playing 11 Details

ಐಪಿಎಲ್ 2024ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮಿಶ್ರ ಪ್ರದರ್ಶನ ನೀಡುತ್ತಿದ್ದು, ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 4 ಸೋಲುಗಳ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡ ಆರಂಭದಿಂದಲೂ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 9 ಪಂದ್ಯಗಳಲ್ಲಿ 3 ಗೆಲುವು ಮತ್ತು 6 ಸೋಲುಗಳ ಮೂಲಕ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಮುಂಬರುವ 2024ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದಿಂದ ಹೊರಗುಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ತಮ್ಮ ಅದ್ಭುತ ಆಟವಾಡುವ ಗುರಿ ಹೊಂದಿರುವುದರಿಂದ ಇದು ನಿರ್ಣಾಯಕ ಪಂದ್ಯವಾಗಿರಲಿದೆ.

LSG vs MI IPL 2024 Lucknow Super Giants vs Mumbai Indians Match Toss Report Playing 11 Details

ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಸೋಲು ಅಅನುಭವಿಸಿದ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಪಂದ್ಯಕ್ಕೆ ಬರಲಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 10 ರನ್‌ಗಳಿಂದ ಸೋಲು ಕಂಡಿತ್ತು.

ಎಲ್‌ಎಸ್‌ಜಿ vs ಎಂಐ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಎಲ್‌ಎಸ್‌ಜಿ vs ಎಂಐ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನೆಹಾಲ್ ವಧೇರಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೋಯಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಶ್ಟನ್ ಟರ್ನರ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್.

Story first published: Tuesday, April 30, 2024, 19:10 [IST]
Other articles published on Apr 30, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+