Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs MI IPL 2024: ಲಕ್ನೋ-ಮುಂಬೈ ಉಭಯ ತಂಡ ಬಲಾಬಲ ವರದಿ; ಕೊನೆ ಪಂದ್ಯದ ಗೆಲುವು ಯಾರಿಗೆ?

ಮೇ 17 ಶುಕ್ರವಾರ, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 67ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವೆ ನಡೆಯಲಿದೆ. ಇಂದು ಸಂಜೆ 7.30ಕ್ಕೆ ಎಂಐ ಮತ್ತು ಲಕ್ನೋ ಪಂದ್ಯ ಮುಂಬೈನ ಪ್ರತಿಷ್ಠಿತ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.

ಮುಂಬೈ ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಗುಳಿದಿದೆ. ಇನ್ನೊಂದೆಡೆ ಪ್ಲೇ ಆಫ್‌ ಕನಸು ಕಾಣುತ್ತಿರುವ ಲಕ್ನೋ ಈ ಪಂದ್ಯವನ್ನು ದೊಡ್ಡ ಅಂತರದಿಂದ ಗೆಲ್ಲುವುದರೊಂದಿಗೆ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗಿದೆ. ಆದರೇ ಇದು ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೊನೆಯ ಪಂದ್ಯವಾಡುತ್ತಿರುವ ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯಿಂದ ನಿರ್ಗಮಿಸಲು ಸಜ್ಜಾಗಿವೆ.

LSG vs MI IPL 2024 Lucknow Super Giants vs Mumbai Indians Preview Match Report

ಲಕ್ನೋ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದು ಪ್ರಸ್ತುತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. 5 ಬಾರಿ ಐಪಿಎಲ್ ಚಾಂಪಿಯನ್ ಮುಂಬೈ 13 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಲಕ್ನೋ vs ಮುಂಬೈ ಹೆಡ್‌ ಟು ಹೆಡ್‌

ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 5 ಪಂದ್ಯಗಳನ್ನು ಆಡಿವೆ. ಲಕ್ನೋ ತಂಡ 4 ಬಾರಿ ಗೆದ್ದಿದ್ದು, ಮುಂಬೈ ಇಂಡಿಯನ್ಸ್ ಒಮ್ಮೆ ಮಾತ್ರ ಗೆದ್ದಿದೆ. ಈ ಋತುವಿನಲ್ಲಿ ಉಭಯ ತಂಡಗಳ ನಡುವೆ ನಡೆದ ಏಕೈಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ ಮುಂಬೈ ಎದುರು ಲಕ್ನೋ ಪ್ರಾಬಲ್ಯ ಹೊಂದಿದೆ.

ಲಕ್ನೋ vs ಮುಂಬೈ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಲಕ್ನೋ vs ಮುಂಬೈ ಸಂಭ್ಯಾವ ಆಡುವ 11ರ ಬಳಗ

ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್ ಚರಕ್, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.

ಮುಂಬೈ ಇಂಡಿಯನ್ಸ್ ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

Story first published: Friday, May 17, 2024, 7:26 [IST]
Other articles published on May 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+