LSG vs PBKS: ಶಿಖರ್ ಧವನ್ ಹೋರಾಟ ವ್ಯರ್ಥ; ಪಂಜಾಬ್ ರಾಜರಿಗೆ ಸೋಲುಣಿಸಿದ ಲಕ್ನೋ ಬಾಯ್ಸ್!
ಶನಿವಾರ, ಮಾರ್ಚ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 200 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಈ ಮೂಲಕ ಪ್ರಸಕ್ತ ಪಂದ್ಯಾವಳಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಚೊಚ್ಚಲ ಗೆಲುವಿನೊಂದಿಗೆ 2 ಅಂಕಗಳನ್ನು ಪಡೆದರೆ, ಪಂಜಾಬ್ ಕಿಂಗ್ಸ್ ತಂಡ ಮೊದಲ ಪಂದ್ಯದ ಗೆಲುವಿನ ಬಳಿಕ ಸತತ ಎರಡನೇ ಸೋಲು ಅನುಭವಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್ ಮತ್ತು ಕೃನಾಲ್ ಪಾಂಡ್ಯ ಅವರ ಅಮೋಘ ಬ್ಯಾಟಿಂಗ್ ಸಹಾಯದಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತ್ತು.
200 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ನಾಯಕ ಶಿಖರ್ ಧವನ್ ಅವರ ಅರ್ಧಶತಕದ ಹೊರತಾಗಿಯೂ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 178 ರನ್ ಗಳಿಸಿ 21 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ಶಿಖರ್ ಧವನ್ ಮತ್ತು ಜಾನಿ ಬೈರ್‌ಸ್ಟೋವ್ ಭರ್ಜರಿ ಆರಂಭ ಬೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 11.4 ಓವರ್‌ಗಳಲ್ಲಿ 102 ರನ್‌ಗಳ ಜೊತೆಯಾಟ ನೀಡಿತು.

ಜಾನಿ ಬೈರ್‌ಸ್ಟೋವ್ 29 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ 42 ರನ್ ಗಳಿಸಿದರೆ, ಪ್ರಭ್‌ಸಿಮ್ರಾನ್ ಸಿಂಗ್ 7 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 19 ರನ್ ಗಳಿಸಿದರು.
ನಾಯಕ ಶಿಖರ್ ಧವನ್ 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 70 ರನ್ ಬಾರಿಸಿದರು. ಆದರೆ ಧವನ್ ವಿಕೆಟ್ ಬೀಳುತ್ತಿದ್ದಂತೆಯೇ ಪಂಜಾಬ್ ಕಿಂಗ್ಸ್ ಹೋರಾಟ ಅಂತ್ಯಗೊಂಡಿತು. ನಂತರ ಬಂದ ಯಾವ ಬ್ಯಾಟರ್‌ಗಳು ಬಿಗ್-ಹಿಟ್ಟಿಂಗ್‌ಗೆ ಮುಂದಾಗಲಿಲ್ಲ.
ಉಳಿದಂತೆ ಜಿತೇಶ್ ಶರ್ಮಾ 6 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 17 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ ಅಜೇಯ 28 ರನ್ ಗಳಿಸಿದರೆ, ಶಶಾಂಕ್ ಸಿಂಗ್ ಅಜೇಯ 9 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಚೊಚ್ಚಲ ಐಪಿಎಲ್ ಪಂದ್ಯವಾಡಿದ ಮಯಾಂಕ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದು ಅದ್ಭುತವಾಗಿ ಆರಂಭಿಸಿದರು. ಇನ್ನು ಮೊಹ್ಸಿನ್ ಖಾನ್ ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.5 ಓವರ್‌ಗಳಲ್ಲಿ 35 ರನ್‌ಗಳ ಜೊತೆಯಾಟ ನಿರ್ಮಿಸಿತು.
ಕೆಎಲ್ ರಾಹುಲ್ 9 ಎಸೆತಗಳಲ್ಲಿ 15 ರನ್ ಗಳಿಸಿದ್ದಾಗ ಔಟಾದರೆ, ಬಳಿಕ ದೇವದತ್ ಪಡಿಕ್ಕಲ್ 6 ಎಸೆತಗಳಲ್ಲಿ 9 ರನ್ ಗಳಿಸಿ ವಿಕೆಟ್ ನೀಡಿದರು. ನಂತರ ಮಾರ್ಕಸ್ ಸ್ಟೊಯಿನಿಸ್ 12 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 19 ರನ್ ಬಾರಿಸಿ ಪೆವಿಲಿಯನ್ ಸೇರಿದರು.
ಆರಂಭಿಕ ಕ್ವಿಂಟನ್ ಡಿ ಕಾಕ್ 38 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 54 ರನ್ ಬಾರಿಸಿದರೆ, ಹಂಗಾಮಿ ನಾಯಕ ನಿಕೋಲಸ್ ಪೂರನ್ 21 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 42 ರನ್ ಸಿಡಿಸಿದರು.
ಕೊನೆಯಲ್ಲಿ ಕೃನಾಲ್ ಪಾಂಡ್ಯ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ ನಿರ್ಣಾಯಕ 43 ರನ್ ಗಳಿಸಿದರೆ, ಆಯುಷ್ ಬದೊನಿ 8 ರನ್‌ಗಳ ಕಾಣಿಕೆ ನೀಡಿದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಸ್ಯಾಮ್ ಕರ್ರಾನ್ 4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರೆ, ಅರ್ಶ್‌ದೀಪ್ ಸಿಂಗ್ 3 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಕಗಿಸೊ ರಬಾಡ ಮತ್ತು ರಾಹುಲ್ ಚಹಾರ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications