LSG vs PBKS: ಪಂಜಾಬ್ ವಿರುದ್ಧ ಗೆಲುವಿನ ಖಾತೆ ತೆರೆಯಲಿದೆಯೇ ಲಕ್ನೋ?; ಟಾಸ್ ವರದಿ, ಆಡುವ 11ರ ಬಳಗ
ಶನಿವಾರ, ಮಾರ್ಚ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ನಿಕೋಲಸ್ ಪೂರನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರಸಕ್ತ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಿದ ಒಂದು ಪಂದ್ಯದಲ್ಲಿ 20 ರನ್‌ಗಳ ಸೋಲು ಅನುಭವಿಸಿದ್ದು, ತವರಿನ ಅಂಗಳದಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ಲಕ್ನೋ ಸೂಪರ್ ಜೈಂಟ್ಸ್ ಇನ್ನೂ ತಮ್ಮ ಗೆಲುವಿನ ಖಾತೆಯನ್ನು ತೆರೆಯಬೇಕಾಗಿರುವುದರಿಂದ, ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಸೊರಗುತ್ತಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ಖಾಯಂ ನಾಯಕ ಕೆಎಲ್ ರಾಹುಲ್ ಗಾಯಗೊಂಡಿದ್ದರಿಂದ, ಈ ಪಂದ್ಯದಲ್ಲಿ ನಿಕೋಲಸ್ ಪೂರನ್ ಹಂಗಾಮಿ ನಾಯಕನ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಅದರೆ, ಕೆಎಲ್ ರಾಹುಲ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ ಮಾಡಲಿದ್ದಾರೆ.
ಮತ್ತೊಂದೆಡೆ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದು, ಅಂಕಪಟ್ಟಿಯಲ್ಲಿ ಪುಟಿದೇಳಲು ಎದುರು ನೋಡುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋತ ನಂತರ ಪಂಜಾಬ್ ಕಿಂಗ್ಸ್ ಗೆಲುವಿನ ಹಾದಿಗೆ ಮರಳಲು ಕಾಯುತ್ತಿದೆ.

ಎಲ್‌ಎಸ್‌ಜಿ vs ಪಿಬಿಕೆಎಸ್ ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.
LSG vs PBKS ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ನಿಕೋಲಸ್ ಪೂರನ್(ನಾಯಕ), ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್.
ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications