LSG vs PBKS: ಡಿ ಕಾಕ್, ಪೂರನ್, ಕೃನಾಲ್ ಸ್ಫೋಟಕ ಬ್ಯಾಟಿಂಗ್; ಪಂಜಾಬ್‌ಗೆ ಬೃಹತ್ ಗುರಿ ನೀಡಿದ ಲಕ್ನೋ
ಶನಿವಾರ, ಮಾರ್ಚ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 200 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್ ಮತ್ತು ನಿಕೋಲಸ್ ಪೂರನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕರಾದ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.5 ಓವರ್‌ಗಳಲ್ಲಿ 35 ರನ್‌ಗಳ ಜೊತೆಯಾಟ ನಿರ್ಮಿಸಿತು.
ಆದರೆ ಕೆಎಲ್ ರಾಹುಲ್ 9 ಎಸೆತಗಳಲ್ಲಿ 15 ರನ್ ಗಳಿಸಿದ್ದಾಗ ಔಟಾದರೆ, ಬಳಿಕ ಬಂದ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್ 6 ಎಸೆತಗಳಲ್ಲಿ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಾರ್ಕಸ್ ಸ್ಟೊಯಿನಿಸ್ 12 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 19 ರನ್ ಬಾರಿಸಿ ಪೆವಿಲಿಯನ್ ಸೇರಿದರು.

ಆರಂಭಿಕ ಕ್ವಿಂಟನ್ ಡಿ ಕಾಕ್ 38 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 54 ರನ್ ಬಾರಿಸಿದರೆ, ಹಂಗಾಮಿ ನಾಯಕ ನಿಕೋಲಸ್ ಪೂರನ್ 21 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 42 ರನ್ ಸಿಡಿಸಿದರು.
ಕೊನೆಯಲ್ಲಿ ಕೃನಾಲ್ ಪಾಂಡ್ಯ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ ನಿರ್ಣಾಯಕ 43 ರನ್ ಗಳಿಸಿದರೆ, ಆಯುಷ್ ಬದೊನಿ 8 ರನ್‌ಗಳ ಕಾಣಿಕೆ ನೀಡಿದರು.
ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಸ್ಯಾಮ್ ಕರ್ರಾನ್ 4 ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರೆ, ಅರ್ಶ್‌ದೀಪ್ ಸಿಂಗ್ 3 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಕಗಿಸೊ ರಬಾಡ ಮತ್ತು ರಾಹುಲ್ ಚಹಾರ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications