Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs PBKS: ಶ್ರೇಯಸ್‌ ಅಯ್ಯರ್ ಶತಕ: ಪ್ಲೇ ಆಫ್‌ ಆಸೆ ಜೀವಂತ

ಲಕ್ನೋ: ನಾಯಕ ಶ್ರೇಯಸ್ ಅಯ್ಯರ್ ಅವರು ಬಾರಿಸಿದ ಶತಕ ಹಾಗೂ ಭರವಸೆಯ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್‌ ಸಿಂಗ್ ಬಾರಿಸಿದ ಅರ್ಧಶತಕದ ಬಲದಿಂದ ಪಂಜಾಬ್‌ ಕಿಂಗ್ಸ್‌ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನ 66ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ ಪ್ಲೇ ಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್‌ ಲೀಗ್‌ ಹಂತದಲ್ಲಿ ಸತತ 6 ಸೋಲುಗಳ ಬಳಿಕ ಮೊದಲ ಗೆಲುವಿನ ನಗೆ ಬೀರಿದೆ. ಈ ಗೆಲುವಿನ ಮೂಲಕ ಶ್ರೇಯಸ್ ಅಯ್ಯರ್ ಪಡೆ ಅಬ್ಬರಿಸಿದೆ.

ಎಲ್‌ಎಸ್‌ಜಿ ನೀಡಿದ್ದ 197 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ ತಂಡದ ಆರಂಭ ಕಳಪೆಯಾಗಿತ್ತು. ಯುವ ಆಟಗಾರ ಪ್ರಿಯಾಂಶ್ ಆರ್ಯ ಮೊಹಮ್ಮದ್ ಶಮಿ ಅವರು ಎಸೆದ ಇನಿಂಗ್ಸ್‌ನ ಮೊದಲ ಎಸೆತದಲ್ಲಿ ಅರ್ಜುನ್ ತೆಂಡೂಲ್ಕರ್ ಅವರಿಗೆ ಕ್ಯಾಚ್ ನೀಡಿದರು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಕೂಪರ್ ಕಾನೋಲಿ 10 ಎಸೆತಗಳಲ್ಲಿ 4 ಬೌಂಡರಿ ಸಹಾಯದಿಂದ 18 ರನ್ ಬಾರಿಸಿದ್ದಾಗ ಮೊಹಮ್ಮದ್ ಶಮಿ ಅವರು ತೋಡಿದ ಖೆಡ್ಡಾಗೆ ಬಲಿಯಾದರು.

LSG vs PBKS

ಪವರ್‌ ಪ್ಲೇನಲ್ಲಿ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಆರಂಭಿಕ ಪ್ರಭ್‌ಸಿಮ್ರನ್‌ ಸಿಂಗ್ ತಂಡಕ್ಕೆ ಆಧಾರವಾದರು. ಈ ಜೋಡಿ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಯಿತು. ಈ ವೇಳೆ ಅರ್ಜುನ್ ತೆಂಡೂಲ್ಕರ್ ಎಸೆತದಲ್ಲಿ ಪ್ರಭ್‌ಸಿಮ್ರನ್ ಅವರ ಕ್ಯಾಚ್‌ನ್ನು ಪಂತ್ ಕೈ ಚೆಲ್ಲಿದರು. ಈ ಜೋಡಿ ಮಧ್ಯದ ಓವರ್‌ಗಳಲ್ಲಿ ವಿಕೆಟ್‌ ಬೀಳದಂತೆ ನೋಡಿಕೊಂಡು ಬ್ಯಾಟ್ ಮಾಡಿದ ಜೋಡಿ ಅಬ್ಬರಿಸಿತು. ಈ ಜೋಡಿ ಕೆಟ್ಟ ಎಸೆತಗಳನ್ನು ದಂಡಿಸುತ್ತಾ ಸಾಗಿತು.

ಶ್ರೇಯಸ್ ಅಯ್ಯರ್ ಶತಕ

ಮೂರನೇ ವಿಕೆಟ್‌ಗೆ ಪ್ರಭ್‌ಸಿಮ್ರನ್ ಸಿಂಗ್‌ ಹಾಗೂ ಶ್ರೇಯಸ್ ಅಯ್ಯರ್ ಜೋಡಿ 76 ಎಸೆತಗಳಲ್ಲಿ 140 ರನ್‌ ಸೇರಿಸಿತು. ಈ ಹಂತದಲ್ಲಿ ಪ್ರಭ್‌ಸಿಮ್ರನ್ ಸಿಂಗ್ 69 ರನ್‌ ಬಾರಿಸಿದ್ದಾಗ ಅರ್ಜುನ್ ತೆಂಡೂಲ್ಕರ್ ತೋಡಿದ ಖೆಡ್ಡಾಗೆ ಬಲಿಯಾದರು.

IPL Records: ಒಂದೇ ಇನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್‌ ಪಟ್ಟಿ; ಆರ್‌ಸಿಬಿ ಆಟಗಾರರ ಅಬ್ಬರ

IPL Records: ಒಂದೇ ಇನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್‌ ಪಟ್ಟಿ; ಆರ್‌ಸಿಬಿ ಆಟಗಾರರ ಅಬ್ಬರ

ನಾಯಕ ಶ್ರೇಯಸ್ ಅಯ್ಯರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಕಳೆದ ಕೆಲವು ಪಂದ್ಯಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದರು. ಆದರೆ ಮಹತ್ವದ ಪಂದ್ಯದಲ್ಲಿ ನೆಲಕಚ್ಚಿನಿಂತು ಬ್ಯಾಟ್ ಮಾಡಿ ತಂಡಕ್ಕೆ ಆಧಾರವಾದರು, ಅಲ್ಲದೆ ಒತ್ತಡವನ್ನು ಮೆಟ್ಟಿನಿಂತು ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ಮೂರಂಕಿ ಮುಟ್ಟಿ ಸಂಭ್ರಮಿಸಿದರು. ಅಲ್ಲದೆ ಐಪಿಎಲ್‌ನಲ್ಲಿ ನಾಯಕರಾಗಿ ಶತಕ ಬಾರಿಸಿದ ಆಟಗಾರರ ಪಟ್ಟಿಗೆ ಇವರು ಸ್ಥಾನ ಪಡೆದರು. ಶ್ರೇಯಸ್ ಅಯ್ಯರ್‌ 51 ಎಸೆತಗಳಲ್ಲಿ 11 ಬೌಂಡರಿ, 5 ಸಿಕ್ಸರ್ ಸಹಾಯದಿಂದ ಅಜೇಯ 101 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು. ಪಂಜಾಬ್‌ 18 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 200 ರನ್ ಸಿಡಿಸಿ ಜಯ ಸಾಧಿಸಿತು.

LSG vs PBKS

ಕಳಪೆ ಆರಂಭ

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ ತಂಡದ ಆರಂಭ ಸಹ ಕಳಪೆಯಾಗಿತ್ತು. ಅರ್ಶಿನ್ ಕುಲಕರ್ಣಿ (0), ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ನಿಕೋಲಸ್ ಪೂರನ್ (2) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಮೂರನೇ ವಿಕೆಟ್‌ಗೆ ಜೋಶ್‌ ಇಂಗ್ಲಿಸ್‌ ಹಾಗೂ ಭರವಸೆಯ ಬ್ಯಾಟರ್‌ ಆಯುಷ್ ಬದೋನಿ ಜೋಡಿ 23 ಎಸೆತಗಳಲ್ಲಿ 49 ರನ್‌ ಸೇರಿಸಿತು. ಈ ಹಂತದಲ್ಲಿ ಆಯುಷ್ ಬದೋನಿ 18 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 43 ರನ್‌ ಬಾರಿಸಿ ಮಿಂಚಿದರು.

ಪ್ಲೇಆಫ್‌ಗೂ ಮುನ್ನ ಆರ್‌ಸಿಬಿಗೆ ದೊಡ್ಡ ಪೆಟ್ಟು; ಜಾಕೋಬ್‌ ಬೆಥೆಲ್ ಔಟ್‌

ಪ್ಲೇಆಫ್‌ಗೂ ಮುನ್ನ ಆರ್‌ಸಿಬಿಗೆ ದೊಡ್ಡ ಪೆಟ್ಟು; ಜಾಕೋಬ್‌ ಬೆಥೆಲ್ ಔಟ್‌

ಜೋಶ್ ಇಂಗ್ಲಿಸ್‌ 44 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಾಯದಿಂದ 72 ರನ್‌ ಸಿಡಿಸಿದರು. ನಾಯಕ ರಿಷಭ್‌ ಪಂತ್‌ 26, ಭರವಸೆಯ ಮಧ್ಯಮ ಕ್ರಮಾಂಕದ ಆಟಗಾರ ಅಬ್ದುಲ್‌ ಸಮದ್ 20 ಎಸೆತಗಳಲ್ಲಿ 37 ರನ್‌ ಬಾರಿಸಿದರು. ಅಂತಿಮವಾಗಿ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 196 ರನ್‌ ಸೇರಿಸಿತು.

Story first published: Sunday, May 24, 2026, 0:18 [IST]
Other articles published on May 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+