LSG vs RCB: ಪಂದ್ಯ ಸಮಯ, ಪಿಚ್ ವರದಿ, ನೇರ ಪ್ರಸಾರ, ಪ್ಲೇಯಿಂಗ್ ಇಲೆವೆನ್ ಮಾಹಿತಿ
ಲಕ್ನೋ: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 19ನೇ ಆವೃತ್ತಿಯ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಬಡ್ತಿ ಪಡೆಯುವ ಕನಸು ಆರ್‌ಸಿಬಿ ತಂಡದ್ದಾಗಿದೆ. ಕಳೆದ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಮೆಟ್ಟಿನಿಂತು ಗುರುವಾರ ಅಬ್ಬರಿಸಲು ಬೆಂಗಳೂರು ತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ತಂಡಗಳು ಒಟ್ಟಾರೆ ಐಪಿಎಲ್‌ನಲ್ಲಿ ಆಡಿದ 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಆರ್‌ಸಿಬಿ ಜಯ ಸಾಧಿಸಿದೆ. ಇನ್ನು ಎಲ್‌ಎಸ್‌ಜಿ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಲಕ್ನೋ ತಂಡ ಸೋಲು ಕಂಡರೆ, ಲೀಗ್ ಹಂತದಲ್ಲಿ ಮತ್ತೊಮ್ಮೆ ಐಪಿಎಲ್‌ನಿಂದ ಹೊರ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತು ಸ್ಥಿರ ಪ್ರದರ್ಶನ ನೀಡುವ ಕನಸು ರಿಷಭ್ ಪಂತ್ ಪಡೆಯದ್ದಾಗಿದೆ.

ಪಿಚ್ ಹೇಗಿದೆ?
ಇಲ್ಲಿನ ಪಿಚ್ ತುಸು ನಿಧಾನವಾಗಿದ್ದು, ಚೆಂಡು ಬ್ಯಾಟ್‌ಗೆ ಅಷ್ಟು ಸುಲಭವಾಗಿ ಬರುವುದಿಲ್ಲ. ಇದರಿಂದಾಗಿ ದೊಡ್ಡ ಮೊತ್ತದ ರನ್ ಗಳಿಸುವುದು ಬ್ಯಾಟರ್‌ಗಳಿಗೆ ಸವಾಲಿನ ಕೆಲಸ. ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗುತ್ತಾರೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ ಸುಮಾರು 150-165 ಆಗಿದೆ. ಟಾಸ್ ಮಹತ್ವದ ಪಾತ್ರವನ್ನು ವಹಿಸಿದ್ದು ಚೇಸ್ ಮಾಡುವ ತಂಡ ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆ ಇದೆ.
ಉಭಯ ತಂಡಗಳು ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿವೆ?
ಆರ್‌ಸಿಬಿ 19ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು, ಆಡಿದ 9 ಪಂದ್ಯಗಳಲ್ಲಿ 6 ಜಯ, 3 ಸೋಲು ಕಂಡಿದ್ದು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಎಲ್‌ಎಸ್‌ಜಿ ತಂಡ ಆಡಿದ 9 ಪಂದ್ಯಗಳಲ್ಲಿ 2 ಜಯ, 7 ಸೋಲು ಕಂಡಿದ್ದು 4 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಆರ್‌ಸಿಬಿ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರ ಯಾರು?
ಬೆಂಗಳೂರು ತಂಡದ ಪರ ಈ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, 379 ರನ್ ಕಲೆ ಹಾಕಿದ್ದಾರೆ. ಇನ್ನು ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ 17 ವಿಕೆಟ್ ಪಡೆದು ಮಿಂಚಿದ್ದಾರೆ.
ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು?
ಜೆಕೊಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ರಸಿಖ್ ಸಲಾಮ್, ಸುಯಶ್ ಶರ್ಮಾ,
ಎಲ್‌ಎಸ್‌ಜಿ ತಂಡ ಯಾರಿಗೆಲ್ಲಾ ಅವಕಾಶವನ್ನು ನೀಡಬಹುದು?
ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ರಿಷಬ್ ಪಂತ್ (ನಾಯಕ/ವಿಕೆಟ್ ಕೀಪರ್), ನಿಕೋಲಸ್ ಪೂರನ್, ಆಯುಷ್ ಬದೋನಿ, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಆವೇಶ್ ಖಾನ್, ದಿಗ್ವೇಶ್ ರಾಠಿ ಮತ್ತು ಪ್ರಿನ್ಸ್ ಯಾದವ್.
ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಆರ್‌ಸಿಬಿ, ಎಲ್‌ಎಸ್‌ಜಿ ನಡುವಣ ಲೀಗ್ ಹಂತದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ.
19ನೇ ಆವೃತ್ತಿ ಐಪಿಎಲ್‌ನ 50ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗುತ್ತದೆ?
ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ನಡುವಣ ಪಂದ್ಯ 7.30ಕ್ಕೆ ಆರಂಭವಾಗಲಿದೆ. ಅಲ್ಲದೆ ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications