ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

LSG vs RCB: ಈಡನ್ ಗಾರ್ಡನ್‌ನಲ್ಲಿ ಸಾಂಪ್ರದಾಯಿಕ ಬೆಲ್ ಬಾರಿಸಿದ ಜೂಲನ್ ಗೋಸ್ವಾಮಿ

LSG vs RCB: Jhulan Goswami rings the raditional bell at the Eden Gardens

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪ್ಲೇಆಫ್‌ನ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಮಹತ್ವದ ಪಂದ್ಯದ ಆರಂಭಕ್ಕೂ ಮುನ್ನ ಈಡನ್ ಗಾರ್ಡನ್ ಕ್ರೀಡಾಂಗಣದ ಸಂಪ್ರದಾಯದಂತೆ ಮೈದಾನದ ಬೆಲ್ ಬಾರಿಸುವ ಮೂಲಕ ಪಂದ್ಯಕ್ಕೆ ಚಾಲನೆ ದೊರೆಯಿತು. ಈ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ಅನುಭವಿ ಆಟಗಾರ್ತಿ ಜೂಲನ್ ಗೋಸ್ವಾಮಿ ಸಾಂಪ್ರದಾಯಿಕ ಬೆಲ್ ಬಾರಿಸುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ಕ್ರೀಡಾಂಗಣದಲ್ಲಿ ಸಾಕಷ್ಟು ಜನಪ್ರಿಯ ವ್ಯಕ್ತಿಗಳು ಸಾಂಪ್ರದಾಯಿಕ ಬೆಲ್ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ. 2019ರಲ್ಲಿ ಭಾರತದ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಇಲ್ಲಿ ನಡೆದಿದ್ದಾಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಐದು ಬಾರಿಯ ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದ್ ಬೆಲ್ ಬಾರಿಸಿದ್ದರು. ಇನ್ನು 1983ರ ವಿಶ್ವಕಪ್‌ ಗೆದ್ದ ಭಾರತೀಯ ತಂಡದ ನಾಯಕ ಕಪಿಲ್ ದೇವ್ 2016ರಲ್ಲಿ ಈ ಗೌರವಕ್ಕೆ ಪಾತ್ರವಾಗಿದ್ದರು.

IPL 2022: ಈ ಐವರು ಆಟಗಾರರು ಮುಂದಿನ ಐಪಿಎಲ್‌ ಸೀಸನ್ ಆಡುವುದು ಡೌಟ್IPL 2022: ಈ ಐವರು ಆಟಗಾರರು ಮುಂದಿನ ಐಪಿಎಲ್‌ ಸೀಸನ್ ಆಡುವುದು ಡೌಟ್

ಭಾರತೀಯ ಮಹಿಳಾ ಕ್ರಿಕೆಟ್‌ನ ದಂತಕತೆ ಜೂಲನ್ ಗೋಸ್ವಾಮಿ 2018ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೇತ್ತಿ ಘೋಷಿಸಿದ್ದಾರೆ. ಆದರೆ ಟೆಸ್ಟ್ ಹಾಗೂ ಏಕದಿನ ತಂಡದ ಪ್ರಮುಖ ಸದಸ್ಯೆಯಾಗಿ ತಂಡಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಮಹಿಳಾ ವಿಶ್ವಕಪ್‌ನಲ್ಲಿ ಆಡಿದ್ದ ಜೂಲನ್ ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ ಗುರಿ ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ಎವಿನ್ ಲೂಯಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ಅವೇಶ್ ಖಾನ್, ರವಿ ಬಿಷ್ಣೋಯ್

KL Rahul ಬಗ್ಗೆ ಕ್ರಿಕೆಟ್ ಪಂಡಿತರು ಹೇಳಿದ್ದೇನು | Oneindia Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್

Story first published: Thursday, May 26, 2022, 10:35 [IST]
Other articles published on May 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X